
ಬೆಂಗಳೂರು (ಡಿ.28): ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾ ಲಯದಲ್ಲಿ ಜಿಲ್ಲಾ ವಕ್ಫ್ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲಾವಾರು ವಕ್ಫ್ ಆಸ್ತಿ ಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸೇರಿ ಸಮಗ್ರ ಮಾಹಿತಿ ಜಿಲ್ಲಾ ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ; ಫೆ.28 ಗಡುವು ಕೊಟ್ಟ ಸಿಎಂ
ಆಸ್ತಿಗಳ ಒತ್ತುವರಿ ಬಗ್ಗೆ ಖಾಸಗಿ ಸಂಸ್ಥೆ ಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆ ಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯದಲ್ಲಿರುವ ಪ್ರಕರಣ ಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯ ಕ್ಕೆ ಹಾಜಾರಾಗದೆ ಪರೋಕ್ಷವಾಗಿ ಒತ್ತುವರಿ ದಾರರ ಜತೆ ಶಾಮೀಲಾಗಿರುವ ಮಾಹಿತಿ ಇದೆ. ವರ್ತನೆ ಸರಿ ಪಡಿಸಿಕೊಳ್ಳ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಅನ್ನ ಕೊಡುವ ಈ ನೆಲದ ನಿಯಮ ಪಾಲಿಸಿ: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸಿಎಂ ಖಡಕ್ ಸೂಚನೆ
ಹಣ ಮಾಡಲು ವಖ್ಫ್ ಇಲಾಖೆಗೆ ಬರಬೇಡಿ.ಇದು ದೇವರ ಕೆಲಸ ಆರೋಪ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು, ವಕ್ಫ್ ಅಸ್ತಿಗಳ ರಕ್ಷಣೆ ಗೆ ಕಾಂಪೌಂಡ್ ಗೋಡೆ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಬೇಕು, ವಖ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕ ರೂಪದ ಕಾಪೌಂಡ್ ಹಾಕಬೇಕು ಎಂದು ಅವರು ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ