ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ: ಸುಧಾಕರ್‌ ಹೇಳಿದ್ದಿಷ್ಟು

Published : Jun 26, 2021, 09:42 AM IST
ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ:  ಸುಧಾಕರ್‌ ಹೇಳಿದ್ದಿಷ್ಟು

ಸಾರಾಂಶ

*  ಸ್ವಾಮೀಜಿ ಅವರನ್ನು ಭೇಟಿ ಮಾಡಿರುವುದರಲ್ಲಿ ವಿಶೇಷತೆ ಇಲ್ಲ * ರಮೇಶ್‌ ಜಾರಕಿಹೊಳಿ ನನ್ನ ಸ್ನೇಹಿತರು * ಬೆಂಗಳೂರಿನಲ್ಲಿ ಇಲ್ಲ ಎನ್ನುವ ಕಾರಣಕ್ಕೆ ಅವರನ್ನು ಭೇಟಿಯಾಗಿಲ್ಲ

ಬೆಂಗಳೂರು(ಜೂ.26):  ಮಾಜಿ ಸಚಿವ ಹಾಗೂ ಶಾಸಕ ರಮೇಶ್‌ ಜಾರಕಿಹೊಳಿ ಸುತ್ತೂರು ಮಠದ ಶ್ರೀಗಳ ಭೇಟಿ ಮಾಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ. ಅವರು ಸಚಿವ ಸ್ಥಾನದ ಬಗ್ಗೆ ನನ್ನ ಬಳಿ ಏನೂ ಚರ್ಚಿಸಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಯವರನ್ನು ನಾವೆಲ್ಲರೂ ಭೇಟಿ ಮಾಡುತ್ತೇವೆ. ಅನ್ನ ದಾಸೋಹ, ಅಕ್ಷರ ದಾಸೋಹದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವುದರಲ್ಲಿ ವಿಶೇಷತೆ ಇಲ್ಲ ಎಂದು ತಿಳಿಸಿದ್ದಾರೆ. 

ದೇವೇಂದ್ರ ಫಡ್ನವೀಸ್‌ ನನ್ನ ಗಾಡ್‌ಫಾದರ್‌: ಜಾರಕಿಹೊಳಿ!

ಜಾರಕಿಹೊಳಿ ನನ್ನ ಸ್ನೇಹಿತರು. ಬೆಂಗಳೂರಿನಲ್ಲಿ ಇಲ್ಲ ಎನ್ನುವ ಕಾರಣಕ್ಕೆ ಅವರನ್ನು ಇತ್ತೀಚೆಗೆ ಭೇಟಿಯಾಗಿಲ್ಲ. ಇನ್ನೂ ಮಂತ್ರಿ ಸ್ಥಾನಕ್ಕೆ ಯತ್ನಿಸುತ್ತಿರುವ ವಿಚಾರವಾಗಿ ನನ್ನ ಜತೆ ಏನೂ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Dk Shivakumar: ಕನ್ನಡ ಕೇವಲ ಭಾಷೆಯಲ್ಲ, ನಮ್ಮ ಬದುಕಿನ ಅಸ್ಮಿತೆ; ಅಕ್ಕ ಸಮ್ಮೇಳನದಲ್ಲಿ ಡಿಕೆಶಿ ಭಾವಪೂರ್ಣ ಸಂದೇಶ!
ಕನ್ನಡದ ಕಂಪು ಹೊತ್ತ ಫಿಲಡೆಲ್ಫಿಯಾ ರಸ್ತೆ, ಅದ್ಧೂರಿಯಾಗಿ ಅಕ್ಕ ರಜತ ಮಹೋತ್ಸವಕ್ಕೆ ಚಾಲನೆ