ಮಾಡಬಾರದನ್ನ ಮಾಡಿ, ವೋಟರ್ ಲಿಸ್ಟ್ ಬದಲಾವಣೆ ಮಾಡಿ ಪ್ರಧಾನಿಯಾಗಿದ್ದಾರೆ, ಮೋದಿ ವಿರುದ್ಧ ರಾಜಣ್ಣ ಕಿಡಿ

Published : Aug 09, 2025, 05:04 PM ISTUpdated : Aug 09, 2025, 05:55 PM IST
Karnataka Cooperation Minister KN Rajanna (File photo/ANI)

ಸಾರಾಂಶ

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳದ್ದೇ ಅಂತಿಮ ತೀರ್ಮಾನ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. 

ತುಮಕೂರು: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳದ್ದೇ ತೀರ್ಮಾನ. ಅದು ಅವರಿಗೆ ಬಿಟ್ಟ ವಿಚಾರ. ಯಾರನ್ನ ಎಲ್ಲಿಗೆ ಹಾಕಬೇಕು ಅನ್ನೋ ತಿರ್ಮಾನ ಮಾಡಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ತುಮಕೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಎರಡು ತಿಂಗಳ ಹಿಂದೆಯೇ ಈ ಕುರಿತು ಮನವಿ ಮಾಡಿದ್ದೆ. ತಮ್ಮ ಮನವಿಯನ್ನು ಸಿಎಂ ಪುರಸ್ಕರಿಸಿದ್ದಾರೆ ಎಂದರು. ಇನ್ನು ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದ್ಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ ಅವರು, ವೋಟರ್ ಲಿಸ್ಟ್‌ನಲ್ಲಿ ಅಕ್ರಮಗಳು ನಡೆದಿರುವುದು ಸತ್ಯ. ಒಬ್ಬ ವ್ಯಕ್ತಿ ಮೂರು ಕಡೆಗಳಲ್ಲಿ ವೋಟರ್ ಲಿಸ್ಟ್‌ಗೆ ಸೇರಿದ್ದು, 10-15 ಜನರಿರುವ ಕಡೆ 60 ಜನರನ್ನು ಸೇರಿಸಿರುವುದು, ಅಡ್ರೆಸ್, ತಂದೆಯ ಹೆಸರು ಇಲ್ಲದಿರುವುದು ನಮ್ಮ ಕಣ್ಮುಂದೆಯೇ ನಡೆದಿದೆ. ಇದಕ್ಕೆ ನಾವೇ ಕಾರಣ, ಏಕೆಂದರೆ ಡ್ರಾಫ್ಟ್ ಎಲೆಕ್ಟೊರಲ್ ರೋಲ್ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಲಿಲ್ಲ ಎಂದು ಒಪ್ಪಿಕೊಂಡರು. ಮುಂದೆ ಚುನಾವಣೆಗಳಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಮಾರ್ಗಸೂಚಿಗಳನ್ನು ಅನುಸರಿಸುವುದಾಗಿ ತಿಳಿಸಿದರು.

ಮಾಡಬಾರದ್ದು ಮಾಡಿ ಅವರು ಪ್ರಧಾನಿಯಾಗಿದ್ದಾರೆ:

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮ ಕಣ್ಮುಂದೆನೇ ನಡೆದಿವೆಯಲ್ಲ, ನಮಗೇ ಅವಮಾನ ಆಗಬೇಕು. ನಾವು ನೋಡಿಕೊಳ್ಳಲಿಲ್ಲವಲ್ಲ ಅಂತ..ಮೊದಲೆಲ್ಲಾ ಡ್ರಾಪ್ ಎಲೆಕ್ಷನ್ ಕಮಿಷನ್ ಕರೆದು ರೊಲ್ ಮಾಡ್ತಿದ್ರು. ಆದರೆ ಅವರು ಮಾಡಬಾರದ್ದನ್ನ ಮಾಡಿ ವೋಟರ್ ಲಿಸ್ಟ್ ಬದಲಾವಣೆ ಮಾಡಿ ಪ್ರಧಾನ ಮಂತ್ರಿ ಆಗಿದ್ದಾರೆ. ಅದು ನೂರಕ್ಕೆ ನೂರು ಸತ್ಯ. ಅದರಲ್ಲಿ ಎರಡನೇ ಮಾತಿಲ್ಲ ಎಂದರು.

ಪ್ರಜ್ವಲ್ ರೇವಣ್ಣ ಶಿಕ್ಷೆಯ ನಂತರ ಹಾಸನ ಉಸ್ತುವಾರಿ ಬದಲಾವಣೆ ಮಾಡಿದ್ರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜಕೀಯ ಯಾರಿಗೂ ಶಾಶ್ವತವಲ್ಲ. ಸಂದರ್ಭಕ್ಕೆ ತಕ್ಕಂತೆ ಸಿಎಂ ಒಳ್ಳೆಯ ಸಮಯದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.

ಸ್ವಾಮೀಜಿ ಹೇಳಿದಂತೆ ಎಲ್ಲವೂ ನಡೆಯುವುದಾದರೆ ರಾಜಕಾರಣ ಏಕೆ ಬೇಕು?

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಬೇಕೆಂಬ ಸ್ವಾಮೀಜಿಗಳ ಒತ್ತಾಯದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸ್ವಾಮೀಜಿಗಳು ಹೇಳಿದಂತೆ ಎಲ್ಲವೂ ನಡೆಯುವುದಾದರೆ ರಾಜಕಾರಣ ಏಕೆ ಬೇಕು? ಪರಮೇಶ್ವರ್ ಅವರಿಗೆ ಅವಕಾಶ ಬಂದಾಗ ಸಿಎಂ ಆಗಬೇಕು ಎಂದು ನಾನೂ ಹೇಳುತ್ತೇನೆ. ಸ್ವಾಮೀಜಿಗಳ ಒತ್ತಾಯಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಮಾಷೆಯ ರೀತಿಯಲ್ಲಿ ಪ್ರತಿಕ್ರಿಯಿಸಿದರು.

ನಿನ್ನೆಯ ರಾಹುಲ್ ಗಾಂಧಿ ಭೇಟಿಯ ಬಗ್ಗೆರಾಹುಲ್ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ಭೇಟಿ ನೀಡಿದ ವಿಚಾರಕ್ಕೆ, 'ನನಗೆ ಆ ವಿಷಯದ ಬಗ್ಗೆ ಗೊತ್ತಿಲ್ಲ. ಕಾರ್ಯಕ್ರಮ ಮುಗಿದ ಬಳಿಕ ನೇರವಾಗಿ ತುಮಕೂರಿಗೆ ಬಂದೆ. ಆ ಬಗ್ಗೆ ಮುಂದಿನ ಬೆಳವಣಿಗೆಗಳನ್ನು ನೋಡಿಕೊಂಡು ಹೇಳುತ್ತೇನೆ ಎಂದು ರಾಜಣ್ಣ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌