ಅಯೋಧ್ಯೆಯಲ್ಲಿ ರಾಮ ಮಂದಿರ ಬಳಿ ಕರ್ನಾಟಕ ಭವನ ನಿರ್ಮಾಣಕ್ಕೆ ಪ್ಲಾನ್..!

By Suvarna NewsFirst Published Aug 4, 2020, 8:49 PM IST
Highlights

ಅಯೋಧ್ಯೆಯಲ್ಲಿ ಆಗಸ್ಟ್ 5 ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಇದರ ಮಧ್ಯೆ ಇತ್ತ ಕರ್ನಾಟಕ ಸರ್ಕಾರ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ಲಾನ್ ಮಾಡುತ್ತಿದೆ.

ಬೆಂಗಳೂರು, (ಆ.04): ಅಯೋಧ್ಯೆಲ್ಲಿ ರಾಮ ಮಂದಿರಕ್ಕೆ ನಾಳೆ (ಬುಧವಾರ) ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಆದ್ರೆ, ಮತ್ತೊಂದೆಡೆ ಕರ್ನಾಟಕ ಸರ್ಕಾರ ಆಗಲೇ ಅಲ್ಲಿ ಯಾತ್ರಿ ನಿವಾಸ ನಿರ್ಮಿಸಲು ಯೋಜನೆ ರೂಪಿಸುತ್ತಿದೆ.

ಇದಕ್ಕೆ ಪೂರಕವೆಂಬಂತೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಆಯೋಧ್ಯೆಯ ಶ್ರೀರಾಮ ಮಂದಿರದ ಆಸು ಪಾಸು  ಸ್ಥಳಕ್ಕಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿ ಎಂದು ಕೋಟಾ ಶ್ರೀನಿವಾಸ್ ಪೂಜಾರಿ, ಬಿಎಸ್‌ವೈ ಪತ್ರದ ಮೂಲಕ ತಿಳಿಸಿದ್ದಾರೆ.

Latest Videos

ರಾಮಮಂದಿರ ಭೂಮಿಪೂಜೆಗೆ ಕ್ಷಣಗಣನೆ; ಅಯೋಧ್ಯೆಯಲ್ಲೇ ಯಾಕೆ ಬೇಕು ರಾಮಮಂದಿರ?

ಅಯೋಧ್ಯೆ ಭವಿಷ್ಯದಲ್ಲಿ ಕೋಟ್ಯಂತರ ಹಿಂದೂಗಳಿಗೆ ತಿರುಪತಿ ತಿರುಮಲ ಮಾದರಿಯಲ್ಲಿ ಅತ್ಯಂತ ಪವಿತ್ರ ಯಾತ್ರ ಸ್ಥಳವಾಗಲಿದೆ. ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಾ ಭವನ ಅಗತ್ಯತೆ ಕಂಡು ಬರುತ್ತದೆ. ಆದ್ದರಿಂದ ರಾಮ ಮಂದಿರದ ಹತ್ತಿರದಲ್ಲಿ ಕರ್ನಾಟಕ ಭವನ ನಿರ್ಮಾಣ ಉದ್ದೇಶಕ್ಕಾಗಿ ಕನಿಷ್ಠ 3ರಿಂದ 5 ಎಕರೆ ಭೂಮಿಯನ್ನು ಮೀಸಲಿಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಬೇಕೆಂದು ಕೋಟಾ ಶ್ರೀನಿವಾಸ್ ಪೂಜಾರಿ ಪತ್ರದ ಮೂಲಕ ಬಿಎಸ್‌ವೈಗೆ ಕೋರಿದ್ದಾರೆ.

ಇದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಯಾವ ರೀತಿ ಸ್ಪಂದಿಸುತ್ತಾರೆ. ಒಂದು ವೇಳೆ ಬಿಎಸ್‌ವೈ, ಜಾಗಕ್ಕಾಗಿ ಉತ್ತರ ಪ್ರದೇಶ ಸಿಎಂಗೆ ಮನವಿ ಮಾಡಿದ್ರೆ ಅವರು ಏನು ಅಂತಾರೋ ಎನ್ನುವುದನ್ನು ಕಾದುನೋಡಬೇಕಿದೆ. 

click me!