
ಬೆಂಗಳೂರು (ಅ.25): ಈ ಸರ್ಕಾರ ಬಂದಾಗಲೇ ಅದರ ಬಗ್ಗೆ ನಿರ್ಧಾರ ಆಗಿತ್ತು. ಹೊರಗಡೆ ಇರುವ ಅರ್ಹ ಶಾಸಕರಿಗೆ ಅವಕಾಶ ಕೊಡಬೇಕು ಎಂಬ ಉದ್ದೇಶವಿತ್ತು ಎಂದು ಸಚಿವ ಕೃಷ್ಣ ಬೈರೇಗೌಡ ಸಂಪುಟ ಪುನರ್ರಚನೆ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಂಪುಟ ಪುನರ್ರಚನೆ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನರ್ರಚನೆ ಖಚಿತವಾಗಿದೆ ಎಂದು ಅವರು ದೃಢಪಡಿಸಿದ್ದಾರೆ. ಸಂಪುಟಕ್ಕೆ ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ಹೊರಗಡೆ ಇರುವವರಿಗೆ ಅವಕಾಶ ಸಿಗಬೇಕು ಎಂಬ ಅವರ ಒತ್ತಾಯವೂ ಗಮನ ಸೆಳೆದಿದೆ.
ಸಂಪುಟ ಪುನರಚನೆಗೂ, ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ:
ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಅದು ಹೈಕಮಾಂಡ್ ತೀರ್ಮಾನಿಸುವ ವಿಷಯ. ಸಂಪುಟ ಪುನರ್ರಚನೆಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಮತ್ತೊಮ್ಮೆ ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ನಾನು ಈಗಾಗಲೇ ಮೂರು ಬಾರಿ ಸಚಿವ ಸ್ಥಾನ ಪಡೆದಿದ್ದೇನೆ. ಪಕ್ಷ ನನಗೆ ಅರ್ಹತೆಗಿಂತ ಹೆಚ್ಚು ಅವಕಾಶ ನೀಡಿದೆ. ಹೈಕಮಾಂಡ್ ಹೇಳಿದರೆ ಸ್ಥಾನ ಬಿಡಲು ಸಿದ್ಧ ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಸಂಪೂರ್ಣ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದರೆ ಕೆಲಸದಲ್ಲಿ ಇನ್ನೂ ಬಾಕಿ ಇದೆ ಎಂದು ಭಾವುಕರಾಗಿ ಹೇಳಿದ್ದಾರೆ.
ಇಂಥ ವಿಷಯಗಳ ಬಗ್ಗೆ ನಾನು ಮಾತಾಡೋಲ್ಲ:
ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಇಂತಹ ವಿಷಯಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಸಿಎಂ ಜವಾಬ್ದಾರಿ ನೀಡಿದ್ದಾರೆ, ಪಕ್ಷದ ಚೌಕಟ್ಟಿನೊಳಗೆ ಹೈಕಮಾಂಡ್‌ಗೆ ಎಲ್ಲವನ್ನೂ ತಿಳಿಸುತ್ತೇನೆ ಎಂದಿದ್ದಾರೆ.
ಬಿಜೆಪಿ ವಿರೋಧ ಪಕ್ಷದ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಗರಿಗೆ ದ್ರಾಕ್ಷಿ ಹುಳಿ ಎಂಬ ರೀತಿ ಆಗಿದೆ. ಅಧಿಕಾರದ ಹಪಾಹಪಿ ಇದೆ, ಬೇರೆ ಜ್ಞಾನವಿಲ್ಲ. ಅಧಿಕಾರ ಇಲ್ಲದಿದ್ದರೆ ಚಡಪಡಿಸುತ್ತಾರೆ. ನಾವು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇವೆ. ಒಟ್ಟಾರೆಯಾಗಿ, ಒಬ್ಬೊಬ್ಬರಿಗೆ ಒಂದೊಂದು ಅಭಿಪ್ರಾಯ ಇರುತ್ತದೆ. ಐದು ಬೆರಳು ಸಮನಾಗಿರುವುದಿಲ್ಲ. ಹೈಕಮಾಂಡ್ ಎಲ್ಲವನ್ನೂ ಗಮನಿಸಿ ತೀರ್ಮಾನ ಮಾಡುತ್ತಾರೆ ಎಂದರು.
ಸಂಪುಟ ಪುನರ್ರಚನೆಯ ಸಮಯ, ಹೊಸ ಮುಖಗಳು ಮತ್ತು ಸಚಿವ ಸ್ಥಾನ ಬಿಡುಗಡೆ – ರಾಜ್ಯ ರಾಜಕಾರಣದಲ್ಲಿ ಈಗ ಎಲ್ಲರ ದೃಷ್ಟಿ ಈಗ ಹೈಕಮಾಂಡ್ ಕಡೆಗೆ
Krishna Byre Gowdas Explosive Statement on Cabinet Reshuffle
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ