ಕೊರೋನಾದಿಂದ ಈಶ್ವರಪ್ಪ, ಪತ್ನಿ ಗುಣಮುಖ

Published : Sep 09, 2020, 07:24 AM IST
ಕೊರೋನಾದಿಂದ ಈಶ್ವರಪ್ಪ, ಪತ್ನಿ ಗುಣಮುಖ

ಸಾರಾಂಶ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ ಅವರ ಪತ್ನಿ ಇದೀಗ ಕೊರೋನಾದಿಂದ ಗುಣಮುಖರಾಗಿದ್ದು, ಡಿಸ್ಚಾರ್ಜ್ ಮಾಡಲಾಗಿದೆ. 

ಬೆಂಗಳೂರು (ಸೆ.09) : ಕೊರೋನಾ ಸೋಂಕಿಗೆ ತುತ್ತಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಅವರ ಪತ್ನಿ ಜಯಲಕ್ಷ್ಮಿ ಅವರು ಗುಣಮುಖರಾಗಿದ್ದಾರೆ.

ಮಣಿಪಾಲ್‌ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಸೆ.1ರಂದು ಕೊರೋನಾ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. 

ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈಶ್ವರಪ್ಪ ಸಿಬ್ಬಂದಿಗೆ ಕೊರೋನಾ ಧೃಡಪಟ್ಟಿದ್ದರಿಂದ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ವೇಳೆ ಪಾಸಿಟಿವ್‌ ಕಾಣಿಸಿಕೊಂಡಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. 

ಒಂದು ವಾರಗಳ ಕಾಲ ದಂಪತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಗುಣಮುಖರಾಗಿ ಮನೆಗೆ ಹಿಂತಿರುಗಿದ್ದು, ಮನೆಯಲ್ಲಿಯೇ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕ ಜನತೆಗೆ ಬಸ್ ದರ ಏರಿಕೆ ಶಾಕ್? ಶೀಘ್ರದಲ್ಲೇ ಟಿಕೆಟ್ ಬೆಲೆ ಹೆಚ್ಚಳ ಸೂಚಿಸಿದ ಸಚಿವ
ರಾಜಕೀಯ ಗಡಿ ದಾಟಿ ಅದಾನಿ ಗ್ರೂಪ್ ವಿಸ್ತರಣೆ: ಬಿಜೆಪಿಯೇತರ ರಾಜ್ಯಗಳಲ್ಲೂ ₹5 ಲಕ್ಷ ಕೋಟಿಗೂ ಅಧಿಕ ಹೂಡಿಕೆ!