
ಶಿವಮೊಗ್ಗ (ಸೆ.30): ಅಯೋಧ್ಯೆಯ ಬಾಬರಿ ಮಸೀದಿ ಕೆಡವಲು ಸಿಬಿಐ ವಿಷೇಶ ನ್ಯಾಯಾಲಯ 32 ಜನರನ್ನ ಖುಲಾಸೆಗೊಳಿಸಿದ ತೀರ್ಫು ಮಥುರೆಯಲ್ಲಿ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಸ್ಪೂರ್ತಿಯಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ ಯಾವುದೋ ದೇಶದಿಂದ ಬಂದ ಬಾಬರ್ ಮಂದಿರ ಕೆಡವಿ ಮಸೀದಿ ನಿರ್ಮಾಣವಾದಾಗ ಗುಲಾಮರ ಸಂಕೇತದಂತೆ ನಮ್ಮನ್ನ ಕೆಣಕುತ್ತಿತ್ತು. ಆದರೆ ಈ ತೀರ್ಪು ನೀನು ಗುಲಾಮನಲ್ಲವೆಂದು ನೀಡಿದೆ ಎಂದರು.
ಬಾಬ್ರಿ ಮಸೀದಿ ಪ್ರಕರಣದ ಹೋರಾಟದಲ್ಲಿದ್ದ 32 ಜನರಿಗೆ ಕೋರ್ಟ್ ಖುಲಾಸೆ ಮಾಡಿರುವುದು ರಾಷ್ಟ್ರೀಯವಾದಿಗಳಿಗೆ ಸಂತಸದ ದಿನವಾಗಿದೆ. ಸ್ವತಂತ್ರ ಭಾರತದಲ್ಲಿ ನಮ್ಮ ಶ್ರದ್ಧಾ ಮಂದಿರಗಳ ಪರ ಹೋರಾಟ ಮಾಡಲು ಇಂದಿನ ತೀರ್ಪು ಸ್ಪೂರ್ತಿದಾಯಕವಾಗಿದೆ.
ಈ ಮಸೀದಿ ಕೆಡವಿ ರಾಮಮಂದಿರ ಕಟ್ಟಬೇಕು ಎಂಬುದು ರಾಷ್ಟ್ರೀಯವಾದಿಗಳ ತೀರ್ಮಾನವಾಗಿತ್ತು. ಈ ತೀರ್ಪು ಕೇವಲ ಅಯೋಧ್ಯೆಗೆ ಮಾತ್ರ ಸೀಮಿತವಾಗಿಲ್ಲ. ಮಥುರಾದಲ್ಲಿಯೂ ಶ್ರೀಕೃಷ್ಣನ ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ.ಇಲ್ಲಿಯೂ ಶ್ರೀಕೃಷ್ಣನ ದೇವಾಲಯ ನಿರ್ಮಾಣಕ್ಕೆ ಈ ತೀರ್ಪು ಪ್ರೇರಣೆಯಾಗಿದೆ.ಅಡ್ವಾಣಿ ಅವರಿಗೆ ಶಿಕ್ಷೆಯಾಗಿದ್ದರೆ ಈ ವಯಸ್ಸಿನಲ್ಲಿ ಏನು ಕಥೆ ಎಂದು ಕೆಲವರು ಹೇಳುತ್ತಿದ್ದರು ಎಂದರು.
ಬಾಬರಿ ಮಸೀದಿ ತೀರ್ಪು: ಯಾರು, ಏನು ಹೇಳಿದರು..? ...
ಆದರೆ ಅವರು ರಾಮನಿಗಾಗಿ ಶಿಕ್ಷೆಗೆ ಸಿದ್ಧರಾಗಿದ್ದರು ಎಂದರು. ಮಥುರಾದಲ್ಲಿಯೂ ಕರಸೇವೆ ಮಾಡಲಾಗುವುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಥುರಾದಲ್ಲಿ ಕರ ಸೇವೆ ಮಾಡಲು ಕೋರ್ಟ್ ಬಿಡುವುದಿಲ್ಲ ಎಂಬ ಭಾವನೆ ನನಗೆ ಇದೆ ಎಂದು ಈಶ್ವರಪ್ಪ ಹೇಳಿದರು.
ಮಥುರಾದಲ್ಲಿ ಕರಸೇವೆಗೆ ಅವಕಾಶ ನೀಡದೆ ಪೂರ್ಣ ಪ್ರಮಾಣದ ಕೃಷ್ಣ ದೇವಾಲಯ ನಿರ್ಮಾಣಕ್ಕೆ ಅವಕಾಶ ನೀಡಬೇಕು. ಮಥುರಾದಲ್ಲಿಯು ಕೃಷ್ಣ ದೇವಾಲಯ ನಿರ್ಮಾಣಕ್ಕೆ ಅವಕಾಶ ನೀಡಬೇಕು. ಇಲ್ಲದಿದ್ದಲ್ಲಿ ಮಥುರಾದಲ್ಲಿಯೂ ಕರಸೇವೆ ಮಾಡುವ ಅನಿವಾರ್ಯತೆ ಒದಗಿಬರುವ ಸಂಭವನೀಯತೆ ಇದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ