
ಬೆಳಗಾವಿ (ಡಿ.8): ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರಾಜಕೀಯ ಬದಿಗಿಟ್ಟು ಈ ಭಾಗದ ಎಲ್ಲ ಪಕ್ಷದ ಶಾಸಕರು ಒಗ್ಗೂಡಿ ಸದನದಲಿ ಮಾತನಾಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸುವರ್ಣ ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷ, ವಿರೋಧ ಪಕ್ಷದ ನಾಯಕರು ಯಾರೇ ಇರಲಿ, ನಾವು ಎಲ್ಲರೂ ಸೇರಿ ಈ ಭಾಗದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಕು. ನನ್ನನ್ನು ಸೇರಿ ಎಲ್ಲರೂ ನಮ್ಮ ರಾಜಕಾರಣವನ್ನು ಪಕ್ಕಕ್ಕೆ ಇಡೋಣ. ಎಲ್ಲರೂ ಸೇರಿ ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಚರ್ಚೆ ಮಾಡೋಣ ಎಂದು ಆಹ್ವಾನ ನೀಡಿದರು.
ಪತ್ಯೇಕ ರಾಜ್ಯ ಮತ್ತು ಪ್ರತ್ಯೇಕ ಬಜೆಟ್ ವಿಚಾರವಾಗಿ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ, ದಕ್ಷಿಣ ಕರ್ನಾಟಕ ಅಂತ ಮಾಡೋದು ಬೇಡ. ರೈತರ ಪರವಾಗಿ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. ರೈತರ ಮೇಲೆ ಗೋಲಿಬಾರ್ ಮಾಡಿಸಿದ್ದು ಬಿಜೆಪಿಯವರು. ಮಹದಾಯಿ ಹೋರಾಟಗಾರರ ಮೇಲೆ ಹಲ್ಲೆ ಆದಾಗ ಸಿಹಿ ಹಂಚಿದವರು ಇವರೇ, ಇಂಥವರು ರೈತರ ಬಗ್ಗೆ ಮಾತನಾಡುವುದು ಎಷ್ಟು ಸರಿ? ರೈತರ ಬಗ್ಗೆ ಪ್ರಾಮಾಣಿಕ ಆಸಕ್ತಿ ಕಾಳಜಿ ನಮಗೆ ಇದೆ. ಹೀಗಾಗಿ ರೈತರ ವಿಷಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಜಿಲ್ಲಾ ವಿಭಜನೆ ವಿಷಯವನ್ನು ಈಗಾಗಲೇ ನಾನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇವೆ. ಅಲ್ಲದೇ, ಚರ್ಚೆಯನ್ನು ಮಾಡಿದ್ದೇವೆ. ಜಿಲ್ಲೆಯ ಅಭಿವೃದ್ಧಿಗಾಗಿ ವಿಭಜನೆಯಾಗಬೇಕಿದೆ. ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ ಎಂದು ಹೇಳಿದ್ದೇವೆ. ಹೀಗಾಗಿ ಈ ಬಗ್ಗೆ ಸ್ಥಳೀಯ ಶಾಸಕರನ್ನು ಕರೆದು ಮಾತನಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂಬುದನ್ನು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ