ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ!

By Girish Goudar  |  First Published Jan 14, 2025, 9:19 AM IST

ಕಾರು ಮರಕ್ಕೆ ಡಿಕ್ಕಿ ಹೊಡೆದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ  ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 


ಬೆಳಗಾವಿ(ಜ.14): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ  ಜಿಲ್ಲೆಯ ‌ಕಿತ್ತೂರು ಬಳಿ ಇಂದು(ಮಂಗಳವಾರ) ನಡೆದಿದೆ. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. 

ಕಾರು ಮರಕ್ಕೆ ಡಿಕ್ಕಿ ಹೊಡೆದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ  ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

Tap to resize

Latest Videos

ಅಫಜಲ್ಪುರ: ನಶೆಯಲ್ಲಿ ತೇಲಾಡಿ ಕಾರು ಓಡಿಸಿ ಆಕ್ಸಿಡೆಂಟ್‌ ಮಾಡಿದ ಶಾಂತಲಿಂಗ ಶ್ರೀ, ಬಟ್ಟೆ ಬಿಚ್ಕೊಂಡು ಸ್ವಾಮೀಜಿ ಅಲೆದಾಟ!

ಇಬ್ಬರು ನಾಯಕಾರು ಬೆಂಗಳೂರಿನಲ್ಲಿ ಸಿಎಲ್‌ಪಿ ಸಭೆ ಮುಗಿಸಿ ರಸ್ತೆ ಮಾರ್ಗವಾಗಿ ಬೆಳಗಾವಿಯತ್ತ ಬರುತ್ತಿದ್ದರು. ಒಂದೇ ವಾಹನದಲ್ಲಿ ಸಚಿವೆ ಹೆಬ್ಬಾಳ್ಕರ್, ಸಹೋದರ ‌ಚನ್ನರಾಜ್ ಹಟ್ಟಿಹೊಳಿ ಅವರು ಬರುತ್ತಿದ್ದರು. ನಾಯಿಯೊಂದು ಕಾರಿಗೆ ದಿಢೀರ್ ಅಡ್ಡಲಾಗಿ ಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.  

ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಘಟನೆ ಬಗ್ಗೆ ಮಾಹಿತಿ ಪಡೆದ ಗೃಹ ಸಚಿವ ಜಿ. ಪರಮೇಶ್ವರ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಾಹಿತಿಯನ್ನ ಪಡೆದುಕೊಂಡಿದ್ದಾರೆ. ಬೆಳಗಾವಿ ಎಸ್ಪಿ ಭೀಮಾಶಂಕರ ಅವರ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಸಚಿವ ಜಿ. ಪರಮೇಶ್ವರ ಸಂಪರ್ಕಿಸಿದ್ದಾರೆ. 

click me!