ಗೃಹಲಕ್ಷ್ಮಿ ಯೋಜನೆ ಸ್ಥಗಿತ?: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದಿಷ್ಟು

By Kannadaprabha News  |  First Published Sep 29, 2024, 11:21 AM IST

ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ದಸರಾ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದವರು ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ 


ಬೆಳಗಾವಿ(ಸೆ.29):  ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದರು.  ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. 

ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಪಂಚಮಸಾಲಿ ಮೀಸ ಲಾತಿ, 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ ಬೆಂಬಲ ಇರಲಿದೆ ಎಂದರು. 

Tap to resize

Latest Videos

undefined

ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ, ಮೊತ್ತ ಹೆಚ್ಚಿಸಲು ಸರ್ಕಾರದ ನಿರ್ಧಾರ!

ಮುರುಗೇಶ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮ್ಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾ ಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು. 

ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ದಸರಾ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದವರು ಹೇಳಿದರು.

click me!