ಪ್ರತಾಪ್ ಸಿಂಹ ಅಣ್ಣ ಸರ್ವಜ್ಞರು, ಅವರ ಚಿಂತನೆಗಳಿಗೆ ಯಾರೂ ಸರಿಸಾಟಿ ಇಲ್ಲ: ಹೆಬ್ಬಾಳ್ಕರ್ ಟಾಂಗ್

By Ravi Janekal  |  First Published Jun 4, 2023, 4:04 PM IST

ನಾನು ಸಚಿವೆಯಾದ ಬಳಿಕ ಇದೇ ಮೊದಲಬಾರಿಗೆ ಭದ್ರಾವತಿಗೆ ಬಂದಿದ್ದೇನೆ. ಭದ್ರಾವತಿ ನಗರದಲ್ಲಿ ಮಹಿಳಾ ಮತ್ತು‌ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.


ಭದ್ರಾವತಿ (ಜೂ.4) : ನಾನು ಸಚಿವೆಯಾದ ಬಳಿಕ ಇದೇ ಮೊದಲಬಾರಿಗೆ ಭದ್ರಾವತಿಗೆ ಬಂದಿದ್ದೇನೆ. ಭದ್ರಾವತಿ ನಗರದಲ್ಲಿ ಮಹಿಳಾ ಮತ್ತು‌ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಕಳೆದ ವಾರ ಮೊಮ್ಮಗಳು ಹುಟ್ಟಿದ್ದಳು, ಸೊಸೆ ಹಾಗೂ ಮಗುವನ್ನು ನೋಡಲು ಬಂದಿದ್ದೇನೆ. ರಾಜ್ಯದ ಜನರ ಆಶೀರ್ವಾದ ಹಾಗೂ ಸಿಎಂ, ಡಿಸಿಎಂರವರ ಆಶೀರ್ವಾದದಿಂದ ಸಚಿವೆಯಾಗಿದ್ದೇನೆ. ಭದ್ರಾವತಿಗೆ ಪ್ರಥಮಬಾರಿ ಆಗಮಿಸಿದ್ದರಿಂದ ಇಲ್ಲಿಯ ಜನರು ಅದ್ದೂರಿ ಸ್ವಾಗತ ಕೋರಿದ್ರು ಎಂದು ಸಂತಸ ವ್ಯಕ್ತಪಡಿಸಿದರು.

Tap to resize

Latest Videos

ಗೃಹಲಕ್ಷ್ಮಿ ಯೋಜನೆ ಸಂಬಂಧ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವೆ, ಪ್ರತಾಪ್ ಸಿಂಹ(MP Pratap simha)ಅಣ್ಣನವರು ಬಹಳ ಬುದ್ಧಿವಂತರು.ಅವರು ಸರ್ವಜ್ಞರು ಇದ್ದಂತೆ. ಅವರ ಚಿಂತನೆಗಳಿಗೆ ಸರಿಸಾಟಿಯಾಗುವ ರಾಜಕಾರಣಿಗಳು ರಾಜ್ಯ ಹಾಗೂ ದೇಶದಲ್ಲಿ ಯಾರೂ ಇಲ್ಲ. ಜನರು ಅವರನ್ನು ಸುಮ್ಮನೆ ಕೂರಿಸುವುದಕ್ಕೆ ನಮಗೆ ಅಧಿಕಾರ ಕೊಟ್ಟಿದ್ದಾರೆ. ಅವರು ಏನೇ ಹೇಳಲಿ ಗೃಹಲಕ್ಷ್ಮಿ ಯೋಜನೆ ಎಲ್ಲರಿಗೂ ತಲುಪುತ್ತದೆ ಅನುಮಾನ ಬೇಡ ಎಂದರು.

 

ಅತ್ತೆ, ಸೊಸೆ ಇಬ್ಬರಿಗೂ ಗೃಹಲಕ್ಷ್ಮಿ ಯೋಜನೆ ಕೊಡುವಂತೆ ಒತ್ತಾಯ!

ಯಾವುದೇ ಕುಟುಂಬಗಳನ್ನು ಒಡೆಯುವ ಕೆಲಸ ನಮ್ಮ ಸರ್ಕಾರ ಮಾಡುವುದಿಲ್ಲ.ಗೃಹಲಕ್ಷ್ಮಿ ಯೋಜನೆಯ ಫಾರ್ಮ್ ಗಳನ್ನು ಎಲ್ಲರಿಗೂ ವಿತರಿಸಲಾಗುತ್ತದೆ. ರಾಜ್ಯದಲ್ಲಿ 88% ಜನ ಬಿಪಿಎಲ್(BPL) ಮತ್ರು ಎಪಿಎಲ್(APL)ಕಾರ್ಡ್ ಹೋಲ್ಡರ್ ಇದ್ದಾರೆ. ಅವರ ಅಂಕಿ ಅಂಶಗಳನ್ನು ತೆಗೆದುಕೊಂಡು ರಾಜ್ಯ ಸರ್ಕಾರ ಅವರಿಗೆ ಗೃಹಲಕ್ಷ್ಮಿ ಯೋಜನೆ(Gruhalakshmi scheme)ವಿಸ್ತರಿಸಲಾಗುತ್ತದೆ. ಆದರೆ  ಅದಕ್ಕೆ ಕೆಲವು ಸಮಯಗಳು ಬೇಕಾಗುತ್ತದೆ ಆ ಕಾರಣದಿಂದ ಸ್ವಲ್ಪ ವಿಳಂಬವಾಗುತ್ತಿದೆ ಎಂದರು.

 ಹಿಂದಿನ ಸರ್ಕಾರದ ಎಲ್ಲಾ ಹಗರಣಗಳನ್ನು ಕಾಂಗ್ರೆಸ್ ಸರ್ಕಾರದಲ್ಲಿ ತನಿಖೆ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುತ್ತದೆ. ನಾವು  40% ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡಿ ಅಧಿಕಾರ ಬಂದಿದ್ದೇವೆ. ಭ್ರಷ್ಟಾಚಾರ, ಬೆಲೆ ಏರಿಕೆ ತೆಗೆಯುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶ. ರಾಜ್ಯದ ಜನರ ಮನದಲ್ಲಿ  ಮಂದಹಾಸ ಮೂಡಿಸುವುದಕ್ಕೆ ನಮ್ಮ ಸರ್ಕಾರದ ಯೋಜನೆಗಳು ಜಾರಿಗೆ ತರುತ್ತವೆ. ಕಳಪೆ ಗುಣಮಟ್ಟದ ಮೊಟ್ಟೆ ವಿತರಣೆ ತಡೆಯಲು  ನಮ್ಮ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಈಗಾಗಲೇ ಅನುಭವಸ್ಥರ ಜೊತೆ ಕುಳಿತುಕೊಂಡು ಈ ಇಲಾಖೆ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದೇನೆ. ನಮ್ಮ ಇಲಾಖೆ ರಾಜ್ಯದ 60% ಪರ್ಸೆಂಟ್ ಜನರಿಗೆ ತಲುಪುತ್ತದೆ. ಗುಣಮಟ್ಟದ ಆಹಾರ ಪೂರೈಕೆ ಮಾಡುವುದು ನಮ್ಮ ಗುರಿ. ಇಲಾಖೆಯಲ್ಲಿ ಎಲ್ಲೆಲ್ಲಿ ನ್ಯೂನತೆಗಳಿವೆ ಮೊದಲು ಅದನ್ನು ಸರಿ ಮಾಡುತ್ತೇವೆ. ಇಲಾಖೆಯಲ್ಲಿ ಸೋರುವಿಕೆಯನ್ನು ತಡೆಗಟ್ಟಿ ನಾವು ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡುವತ್ತ ಗಮನಹರಿಸುತ್ತೇವೆ. ನಮ್ಮ ಸರ್ಕಾರ ಪೌಷ್ಟಿಕತೆ, ಉತ್ತಮ ಆರೋಗ್ಯ ಕಡೆ  ಗಮನವನ್ನು ಕೊಡುತ್ತದೆ ಎಂದು ಭರವಸೆ ನೀಡಿದರು.

 

ಕಾಂಗ್ರೆಸ್ ಸರ್ಕಾರ ರಚನೆಯಾಯ್ತು; ಧಾರವಾಡ ಜಿಲ್ಲಾ ಉಸ್ತುವಾರಿ ಯಾರಿಗೆ ಸಿಗುತ್ತೆ?

ಸಿದ್ದರಾಮಯ್ಯನವರೇ 5 ವರ್ಷಗಳ ಕಾಲ ಸಿಎಂ  ಆಗುತ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಇದನ್ನು ನೀವು ನಮ್ಮ ವರಿಷ್ಠರಿಗೆ ಕೇಳಬೇಕು.. ಆ ವಿಚಾರವನ್ನು ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದರು.

click me!