ಮತ ಹಾಕಿದ ಜನತೆಗೆ ಸಾರ್ಥಕವೆನಿಸುವ ಕೆಲಸ ಮಾಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್

Kannadaprabha News, Ravi Janekal |   | Kannada Prabha
Published : Sep 28, 2025, 01:06 PM IST
Laxmi Hebbalkar development work Belagav

ಸಾರಾಂಶ

Laxmi Hebbalkar development work Belagav: ಸಚಿವೆ ಹೆಬ್ಬಾಳಕರ್ ಅವರು ಬೆಳಗಾವಿಯ ನಿಲಜಿ ಗ್ರಾಮದ ಕೋಟಿ ರೂಪಾಯಿ ವೆಚ್ಚದ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿದರು. ಜೊತೆಗೆ, ಸ್ವಸ್ಥ, ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಶ್ರಮಿಸುವ  ಆರ್‌ಸಿಎಂ ಸಂಸ್ಥೆಯ 25ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬೆಳಗಾವಿ (ಸೆ.28): ಕ್ಷೇತ್ರದಾದ್ಯಂತ ನಿರಂತರವಾಗಿ ಮಂದಿರ, ಸಮುದಾಯ ಭವನ, ಶಾಲಾ ಕೊಠಡಿ, ಅಂಗನವಾಡಿ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತಿದೆ. ಅಭಿವೃದ್ಧಿ ಮಾಡುವ ಮೂಲಕ ನನಗೆ ಮತ ಹಾಕಿದ ಕ್ಷೇತ್ರದ ಜನರಲ್ಲಿ ಸಾರ್ಥಕ ಭಾವನೆ ಮೂಡುವಂತೆ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಗರದ ಹೊರವಲಯದಲ್ಲಿರುವ ನಿಲಜಿ ಗ್ರಾಮದಲ್ಲಿ ಸುಮಾರು ಒಂದು ಕೋಟಿ ರು. ವೆಚ್ಚದಲ್ಲಿ ಶ್ರೀ ಬ್ರಹ್ಮಲಿಂಗ ದೇವರ ದೇವಸ್ಥಾನದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ನವರಾತ್ರಿಯ ಶುಭ ಸಂದರ್ಭದಲ್ಲಿ ಪವಿತ್ರವಾದ ಬ್ರಹ್ಮಲಿಂಗ ದೇವರ ಮಂದಿರದ ಸಮುದಾಯ ಭವನ ನಿರ್ಮಾಣದ ಪೂಜೆ ನೆರವೇರಿಸುತ್ತಿರುವುದು ಸಂತೋಷವನ್ನುಂಟು ಮಾಡಿದೆ. ಸಮುದಾಯದ ಎಲ್ಲ ಚಟುವಟಿಕೆಗಳಿಗೆ ಈ ಭವನ ಆಸರೆಯಾಗಲಿದೆ. ಆದಷ್ಟು ಬೇಗ ಸುಸಜ್ಜಿತವಾಗಿ ಕಾಮಗಾರಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳೋಣ ಎಂದು ಹೇಳಿದರು.

ಇದನ್ನೂ ಓದಿ: ಚಾಮುಂಡಿ ತಾಯಿ ಕ್ಷೇತ್ರದಿಂದ ಗೃಹ'ಲಕ್ಷ್ಮೀ'ಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಚಿವೆ ಹೆಬ್ಬಾಳ್ಕರ್

ಕಾರ್ಯಕ್ರಮದಲ್ಲಿ ಶಿವಾನಂದ ಗುರೂಜಿ, ಶಂಕರಗೌಡ ಪಾಟೀಲ, ನಾಗೇಶ ದೇಸಾಯಿ, ಸತೀಶ್ ದನುಟ್ಕರ್, ಮನೋಹರ್ ಬಾಂಡಗಿ, ಮನೋಹರ್ ಬೆಳಗಾಂವ್ಕರ್, ಸುರೇಶ್ ಪಾಟೀಲ, ನಿಂಗಪ್ಪ ಮೊದಗೇಕರ್, ಗೋವಿಂದ ಪಾಟೀಲ, ಉಮೇಶ ಮೊದಗೇಕರ್, ವಿನಾಯಕ ಮೊದಗೇಕರ್, ದೀಪಕ್ ಕಾತಕರ್, ಚಂದು, ರವಿ, ವಿನಂತಿ ಗೊಮನಾಚಿ, ಬ್ರಹ್ಮಲಿಂಗ ಕಮಿಟಿಯ ಸದಸ್ಯರು, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ರೈತ ಸಂಘಟನೆಯ ಸದಸ್ಯರು ಹಾಗೂ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು

ಸ್ವಸ್ಥ ಭಾರತ, ಸ್ವಚ್ಛ ಭಾರತ ಇಂದಿನ ಅಗತ್ಯ: ಹೆಬ್ಬಾಳಕರ್

ಸ್ವಯಂ ಸೇವಾ ಸಂಸ್ಥೆ ಆರ್‌ಸಿಎಂ ಸ್ವಸ್ಥ ಭಾರತ ಮತ್ತು ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಕಳೆದ 25 ವರ್ಷಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದೆ. ಇದು ಇಂದಿನ ಅಗತ್ಯ ಕೂಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದನ್ನೂ ಓದಿ: ಉಡುಪಿ ಜಿಲ್ಲೆ ರಾಜ್ಯದ ಸಾಂಸ್ಕೃತಿಕ ರಾಯಭಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮರಾಠಾ ಮಂಗಲ ಕಾರ್ಯಾಲಯದಲ್ಲಿ ಶನಿವಾರ ನಡೆದ ಆರ್‌ಸಿಎಂ ಸಂಸ್ಥೆಯ 25ನೇ ವರ್ಷದ ಸಂಭ್ರಮಾಚರಣೆ ಹಾಗೂ ಜಾಗೃತಿ ರ‍್ಯಾಲಿಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. 25 ವರ್ಷಗಳಿಂದ ಸಮಾಜಮುಖಿ ಚಟುವಟಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಈ ಸಂಸ್ಥೆ ಆರೋಗ್ಯ ಕಾಳಜಿ, ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ ಹಾಗೂ ಶಿಕ್ಷಣದ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರುತ್ತಿದೆ. ರಕ್ತದಾನ ಶಿಬಿರ, ವ್ಯಸನಮುಕ್ತ ಅಭಿಯಾನ, ಸ್ಯಾನಿಟರಿ ಹೈಜಿನ್ ಜಾಗೃತಿ ಶಿಬಿರಗಳಂತಹ ಕಾರ್ಯಗಳು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಂಸ್ಥೆ ಇನ್ನಷ್ಟು ಜನ ಜೀವನಕ್ಕೆ ಬೆಳಕು ನೀಡಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಜಯ ದೊರೆನ್ನವರ್, ಮುಖೇಶ್ ಕೊಟಾರಿ, ಪರಶುರಾಮ ಪಾಟೀಲ, ಕಟಾವಕರ್, ರಾಹುಲ್ ಕಾಂಬಳೆ, ಜ್ಯೋತಿಬಾ ಕಡೋಲ್ಕರ್, ಅಂಜಲಿ ಕೊಟಾದಿ, ಶ್ರೇಯಾ ದೊರೆನ್ನವರ್, ಶಿವಾಜಿ ಕಾಂಬಳೆ ಹಾಗೂ ಅನೇಕರು ಉಪಸ್ಥಿತರಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌