ಪೋಷಕರ ಪತ್ರ ಬಳಿಕವೇ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ: ಮಧು ಬಂಗಾರಪ್ಪ

Kannadaprabha News, Ravi Janekal |   | Kannada Prabha
Published : Aug 12, 2025, 05:52 AM ISTUpdated : Aug 12, 2025, 10:52 AM IST
Madhu bangarappa

ಸಾರಾಂಶ

ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಕೆಲವೆಡೆ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಪ್ರವೇಶಾತಿ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಲು ನಿರ್ಧರಿಸಲಾಗಿದೆ. ಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು ನೀಡಲಾಗುವುದು.

ವಿಧಾನ ಪರಿಷತ್‌: ಶಾಲೆಗಳಲ್ಲಿ ಮೊಟ್ಟೆ ವಿತರಣೆ ಬಗ್ಗೆ ಕೆಲವು ಕಡೆ ಆಕ್ಷೇಪಣೆ, ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಪ್ರವೇಶಾತಿ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

 ಬಿಜೆಪಿಯ ಎನ್‌. ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಅಜೀಂ ಪ್ರೇಮ್‌ಜಿ ಫೌಂಡೇಶನ್‌ ವತಿಯಿಂದ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂದು ಫೌಂಡೇಶನ್‌ ವರದಿ ನೀಡಿತ್ತು. ಪ್ರಮುಖವಾಗಿ ಮೊಟ್ಟೆ ತಿನ್ನದೇ ಇರಲು ವಾಡಿಕೆ/ ವೈಯಕ್ತಿಕ ಆಚರಣೆ, ಕೆಲವು ಪೋಷಕರು ಮೊಟ್ಟೆ ಪಡೆಯಲು ಒಪ್ಪಿಗೆ ನೀಡದೇ ಇರುವುದು ಗೊತ್ತಾಗಿತ್ತು. ಈ ಎಲ್ಲ ಕಾರಣಗಳಿಂದಾಗಿ ಮಕ್ಕಳ ಪ್ರವೇಶಾತಿಯ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಮೊಟ್ಟೆ ಸೇವಿಸುವವರಿಗೆ ಮೊಟ್ಟೆ, ಸೇವಿಸದವರಿಗೆ ಬಾಳೆ ಹಣ್ಣು ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

ಒಂಬತ್ತು ಸಾವಿರ ಶಾಲೆಗಳ ಪೈಕಿ 568 ಶಾಲೆಗಳಲ್ಲಿ ಮೊಟ್ಟೆ ಸರಿಯಾಗಿ ವಿತರಿಸುತ್ತಿಲ್ಲ ಎಂದು ತಿಳಿಸಲಾಗಿತ್ತು.

ಕೆಲವು ವಿದ್ಯಾರ್ಥಿಗಳು ವಾರದಲ್ಲಿ ಕೆಲವು ದಿನ ಮೊಟ್ಟೆ ಸೇವಿಸಲು ನಿರಾಕರಿಸಿರುವುದು ಹಾಗೂ ಕೆಲವು ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ವಾರದ ಕೆಲವು ದಿನ ಮೊಟ್ಟೆ ನೀಡದಂತೆ ಸಭಾ ನಡವಳಿಕೆ ಮಾಡಿಕೊಂಡಿರುವುದು ಕಂಡು ಬಂದಿದೆ. ಮೊಟ್ಟೆಯ ಬದಲು ಬಾಳೆಹಣ್ಣು ನೀಡಿರುವುದಾಗಿ ವರದಿ ಮಾಡಲಾಗಿದೆ.

ಮೊಟ್ಟೆ, ಬಾಳೆ ಹಣ್ಣು ಖರೀದಿಗೆ ಶಾಲಾಭಿವೃದ್ಧಿ ಸಮಿತಿಗಳಿಗೆ ನೇರವಾಗಿ ಹಣ ನೀಡಲಾಗುತ್ತದೆ. ಒಂದು ವೇಳೆ ನೀಡಿದ ಹಣದಲ್ಲಿ ಉಳಿತಾಯವಾದರೆ ಆ ಮೊತ್ತವನ್ನು ಮಕ್ಕಳಿಗೆ ಬಳಸಲಾಗುವುದು ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ನಗರದಲ್ಲಿ 1000ಕ್ಕೂ ಅಧಿಕ ಅಪಾಯಕಾರಿ ಮರ ಪತ್ತೆ!
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ