ಚೆಕ್‌ ಬೌನ್ಸ್‌ ಕೇಸ್‌: ಸಚಿವ ಮಧು ಬಂಗಾರಪ್ಪ ದೋಷಿ

By Kannadaprabha News  |  First Published Dec 30, 2023, 5:18 AM IST

ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು, 6,96,70,000 ರು. ದಂಡ ಪಾವತಿಸಬೇಕು. ಇಲ್ಲದಿದ್ದರೆ ಅರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು. 6,96,70,000 ಮೊತ್ತದ ಪೈಕಿ 6,96,60,000 ದೂರುದಾರರಿಗೆ ಮತ್ತು ಉಳಿದ 10 ಸಾವಿರ ರು. ಸರ್ಕಾರಕ್ಕೆ ಪಾವತಿಸಬೇಕಾಗಿದೆ ಎಂದು ತಿಳಿಸಿದೆ.


ಬೆಂಗಳೂರು(ಡಿ.30):  ಚೆಕ್ಸ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 6.96 ಕೋಟಿ ರು. ಪಾವತಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು, 6,96,70,000 ರು. ದಂಡ ಪಾವತಿಸಬೇಕು. ಇಲ್ಲದಿದ್ದರೆ ಅರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು. 6,96,70,000 ಮೊತ್ತದ ಪೈಕಿ 6,96,60,000 ದೂರುದಾರರಿಗೆ ಮತ್ತು ಉಳಿದ 10 ಸಾವಿರ ರು. ಸರ್ಕಾರಕ್ಕೆ ಪಾವತಿಸಬೇಕಾಗಿದೆ ಎಂದು ತಿಳಿಸಿದೆ.

Tap to resize

Latest Videos

ಉತ್ತಮ ಶಿಕ್ಷಣ ಕೊಡಿಸುವುದು ದೇವರ ಕೆಲಸಕ್ಕೆ ಸಮ: ಸಚಿವ ಮಧು ಬಂಗಾರಪ್ಪ

ಚೆಕ್‌ ಬೌನ್ಸ್‌ ಕೇಸ್‌ ಸಚಿವ ಮಧು ರಾಜೀನಾಮೆ ಪಡೆಯಿರಿ: ಬಿಜೆಪಿ

ಚೆಕ್‌ ಬೌನ್ಸ್‌ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕು ಎಂದು ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.
ನ್ಯಾಯಾಲಯವು ₹6.96 ಕೋಟಿ ದಂಡ ವಿಧಿಸಿದೆ. ಇಂತಹ ಹಿನ್ನೆಲೆಯಿರುವ ಸಚಿವರು ಶಿಕ್ಷಣ ಇಲಾಖೆಗೆ ಕಪ್ಪುಚುಕ್ಕಿ. ಅವರು ಈ ಇಲಾಖೆಯನ್ನು ನಿಭಾಯಿಸಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಏನಿದು ಪ್ರಕರಣ:

2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ. ಮಧು ಬಂಗಾರಪ್ಪರವರು ತಮ್ಮ ಆಕಾಶ್ ಆಡಿಯೋ ಸಂಸ್ಥೆಯಿಂದ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆಗೆ 6.96 ಕೋಟಿ ರು. ಸಂದಾಯ ಮಾಡಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣವನ್ನು ಪಾವತಿಸಲು ಚೆಕ್ ನೀಡಿದ್ದು, ಅದು ಬೌನ್ಸ್ ಆಗಿತ್ತು. ಈಗ ನ್ಯಾಯಾಲಯವು ದಂಡ ಪಾವತಿಸುವಂತೆ ಸೂಚಿಸಿದೆ ಎಂದರು.

ಸದ್ಯಕ್ಕೆ 50 ಲಕ್ಷ ರು. ಪಾವತಿಸಿ ಉಳಿದ ಮೊತ್ತವನ್ನು ಜನವರಿ ಅಂತ್ಯದ ವೇಳೆಗೆ ಕೊಡುವುದಾಗಿ ಮಧು ಬಂಗಾರಪ್ಪ ಅವರು ಮುಚ್ಚಳಿಕೆ ಸಲ್ಲಿಸಿದ್ದರು. ಆದರೆ, ಹಿಂದಿನ ಮುಚ್ಚಳಿಕೆಯನ್ನು ಪಾಲಿಸದ ಕಾರಣ ಅವರ ಕೋರಿಕೆಯನ್ನು ನ್ಯಾಯಾಲಯ ಮನ್ನಿಸಿಲ್ಲ. ಚೆಕ್ ಬೌನ್ಸ್ ಮತ್ತು ಮುಚ್ಚಳಿಕೆ ಬರೆದುಕೊಟ್ಟರೂ ಅದನ್ನು ಪಾಲಿಸದ ಹಿನ್ನೆಲೆ ಇರುವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕು. ಶಿಕ್ಷಣ ಕ್ಷೇತ್ರಕ್ಕೆ ಕಳಂಕವಾಗುವಂತೆ ವರ್ತಿಸಿದ ಮಧು ಬಂಗಾರಪ್ಪ ಅವರು ಆ ಹುದ್ದೆಯಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂದು ಹೇಳಿದರು.

click me!