
ವಿಜಯಪುರ (ಜ.28): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಬಹಿರಂಗ ಕರೆ ನೀಡಿರುವುದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಡಿಕೆ ಶಿವಕುಮಾರ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ನಾಯಕರು ಶಾಮನೂರು ಶಿವಶಂಕರಪ್ಪರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ನಡುವೆ ಇದೀಗ ಎಂಬಿ ಪಾಟೀಲ್ ಶಾಮನೂರು ಶಿವಶಂಕರಪ್ಪರ ಪರ ಬ್ಯಾಟ್ ಬೀಸಿರುವುದು ಕಾಂಗ್ರೆಸ್‌ನಲ್ಲಿ ಏನಾಗ್ತಿದೆ ಎಂದು ಕಾರ್ಯಕರ್ತರು ಗೊಂದಲಕ್ಕೀಡು ಮಾಡಿದೆ.
ಬಿಜೆಪಿ ಸಂಸದರ ಪರ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಎಂಬಿ ಪಾಟೀಲರು, ನೋಡಿ ಹಿರಿಯರಾಗಿ ಮಕ್ಕಳಿಗೆ ಆಶೀರ್ವಾದ ಮಾಡಿದ್ದಾರೆ. ಚುನಾವಣೆ ಬಂದಾಗ ಶಾಮನೂರು ಅವರು ಕಾಂಗ್ರೆಸ್ ಪರವಾಗಿ ನಿಲ್ತಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿಯೇ ಶಾಮನೂರು ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಸಂಸದರನ್ನು ಗೆಲ್ಲಿಸಿ ಎಂದ ಮಾತ್ರಕ್ಕೆ ಅವರು ಬಿಜೆಪಿಪರ ಎಂದು ಭಾವಿಸಬೇಕಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.
ಬಿಜೆಪಿ ಸಂಸದ ಬಿವೈ ರಾಘವೇಂದ್ರರ ಬಗ್ಗೆ ಶಾಮನೂರು ಶಿವಶಂಕರಪ್ಪನವರು ಹಾಡಿ ಹೊಗಳಿದಂತೆ ನನ್ನ ಬಗ್ಗೆಯೂ ಹಿಂದೆ ಬಿಎಸ್ ಯಡಿಯೂರಪ್ಪನವರು ಹೊಗಳಿದ್ದಾರೆ. ಒಳ್ಳೆಯ ಕೆಲಸ ಮಾಡಿದಾಗ ಹಿರಿಯರಾಗಿ ಹೊಗಳ್ತಾರೆ. ಶಾಮನೂರ ಅವರಿಗೆ ವಯಸ್ಸಾಗಿದೆ ಏನೋ ಹೇಳಿದ್ದಾರೆ. ನೀವು ಸುಮ್ಮನೆ ದೊಡ್ಡದು ಮಾಡ್ತಿದ್ದೀರಾ. ಅವರ ಹೇಳಿಕೆ ಇಷ್ಟು ದೊಡ್ಡದು ಮಾಡಬೇಕಿಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಸಂಸದರ ಪರ ಶಾಮನೂರು ಬ್ಯಾಟಿಂಗ್; ಸಚಿವ ಪ್ರಿಯಾಂಕ್ ಖರ್ಗೆ ಕೊಟ್ಟ ವಾರ್ನಿಂಗ್ ಏನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ