ಸಿಎಂ ನಗರೋತ್ಥಾನ ಯೋಜನೆ: 299 ಸ್ಥಳೀಯ ಸಂಸ್ಥೆಗಳಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ಅಸ್ತು

By Kannadaprabha NewsFirst Published Oct 15, 2022, 2:30 AM IST
Highlights

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದ ಅಡಿ 299 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 3,885 ಕೋಟಿ ರು. ಮೊತ್ತದ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜು ಅಧ್ಯಕ್ಷತೆಯ ಸಮಿತಿ ಶುಕ್ರವಾರ ಅನುಮೋದನೆ ನೀಡಿದೆ. 

ಬೆಂಗಳೂರು (ಅ.15): ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದ ಅಡಿ 299 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 3,885 ಕೋಟಿ ರು. ಮೊತ್ತದ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜು ಅಧ್ಯಕ್ಷತೆಯ ಸಮಿತಿ ಶುಕ್ರವಾರ ಅನುಮೋದನೆ ನೀಡಿದೆ. ಶುಕ್ರವಾರ ಸಂಜೆ ವಿಧಾನಸೌಧದಲ್ಲಿ ನಾಗರಾಜು ಅಧ್ಯಕ್ಷತೆಯಲ್ಲಿ ನಡೆದ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಗಳ ರಾಜ್ಯ ಮಟ್ಟದ ಸಮಿತಿ ಸಭೆಯಲ್ಲಿ ವಿವಿಧ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆಯ 19.36 ಕೋಟಿ ರು., ಸೋಮೇಶ್ವರ ಪುರಸಭೆಯ 8.5 ಕೋಟಿ ರು., ಕೋಟೆಕಾರು ಪಟ್ಟಣ ಪಂಚಾಯಿತಿಯ 4.25 ಕೋಟಿ ರು., ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ಸದಲಗಾ ಪುರಸಭೆಗಳ ತಲಾ 8.5 ಕೋಟಿ ರು., ರಾಯಚೂರು ಜಿಲ್ಲೆಯ ಮಾನ್ವಿ ಪುರಸಭೆಯ 8.5 ಕೋಟಿ ರು., ಕವಿತಾಳ ಪಟ್ಟಣ ಪಂಚಾಯತಿಯ 4.25 ಕೋಟಿ ರು. ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಗೆ ಅನುಮೋದನೆ ಸೂಚಿಸಲಾಗಿದೆ. ಒಟ್ಟು 3,885 ಕೋಟಿ ರು. ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಅದಕ್ಕೆ ಪೂರಕ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಕ್ರಿಯಾ ಯೋಜನೆಗಳನ್ನು ಸಲ್ಲಿಸಲಾಗಿತ್ತು. 

ಸರ್ಕಾರದ ಹಣದಿಂದ ಜನಸ್ಪಂದನ ಮಾಡುತ್ತಿಲ್ಲ: ಸಚಿವ ಎಂಟಿಬಿ ನಾಗರಾಜ್‌

ಯೋಜನೆಯಡಿ 117 ಪಟ್ಟಣ ಪಂಚಾಯತಿಗಳು ತಲಾ 5 ಕೋಟಿ ರು,. 124 ಪುರಸಭೆಗಳು ತಲಾ 10 ಕೋಟಿ ರು. ಹಾಗೂ 38 ನಗರಸಭೆಗಳು ತಲಾ 30 ಕೋಟಿ ರು., 23 ಜಿಲ್ಲಾ ಕೇಂದ್ರದ ನಗರಸಭೆಗಳು ಮತ್ತು 1ನೇ ದರ್ಜೆ ನಗರಸಭೆಗಳು ತಲಾ 40 ಕೋಟಿ ರು. ಪಡೆಯಲಿವೆ. ಈ ಹಣದಲ್ಲಿ 2022-23 ರಿಂದ 2023-24ನೇ ಸಾಲಿನ ಹಣಕಾಸು ವರ್ಷದವರೆಗೆ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ಮಳೆ ನೀರು ಚರಂಡಿ ಅಭಿವೃದ್ಧಿ ಮತ್ತು ಕಟ್ಟಡ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳನ್ನು ಕೈಗೊಳ್ಳಲಿರುವುದಾಗಿ ಅಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್‌ ನಾಗಭೂಷಣ್‌, ಪೌರಾಡಳಿತ ನಿರ್ದೇಶಕಿ ಸೌಮ್ಯಶ್ರೀ ಸೇರಿದಂತೆ ಹಲವರು ಹಾಜರಿದ್ದರು.

ಕೈ ಸೇರಲ್ಲ. ಬಿಜೆಪಿ ಬಿಡಲ್ಲ: ಕಾಂಗ್ರೆಸ್ ಸೇರುವ ವದಂತಿ ಕುರಿತು ಪ್ರತಿಕ್ರಿಯಿಸಿ, ನಾನು ಕಾಂಗ್ರೆಸ್ ಸೇರುತ್ತೇನೆಂದು ಹೇಳಿಯು ಹೇಳಿಲ್ಲ. ನಾನು 38 ವರ್ಷ ರಾಜಕೀಯ ಜೀವನದಲ್ಲಿ ಇದ್ದೇನೆ. ನಗರಸಭಾ ಸದಸ್ಯನಾಗಿ, 3 ಬಾರಿ ಶಾಸಕನಾಗಿ  ಈಗ ಎಂಎಲ್ಸಿ ಆಗಿದ್ದೇನೆ.  ಎರಡು ಬಾರಿ ಸಚಿವನಾಗಿದ್ದೇನೆ. ನಾನು ಯಾವುದೇ ಆಸೆ, ಅಮಿಷಗಳಿಗೆ ಬಲಿಯಾಗಿ ಪಕ್ಷ ಬಿಟ್ಟವನಲ್ಲ. ನನ್ನದು ತೆರೆದು ಪುಸ್ತಕ. ಕೆಲವು ಕಾರಣಾಂತರಗಳಿಂದ ಸಮ್ಮಿಶ್ರ ಸರ್ಕಾರ ಬಿಟ್ಟು ಬಿಜೆಪಿಗೆ ಬಂದಿದ್ದು ನಿಜ. ಜನರ ಅರ್ಶೀವಾದದಿಂದ ಅಧಿಕಾರಕ್ಕೆ ಬಂದರೆ ಪ್ರಾಮಾಣಿಕವಾಗಿ ಜನ ಸೇವೆ ಮಾಡಬೇಕೆಂದು ರಾಜಕಾರಣಕ್ಕೆ ಬಂದವನು, ಯಾವುದೇ ರಾಜಕಾರಣದಿಂದ ಆಸ್ತಿ, ಹಣ ಮಾಡುವ ಉದ್ದೇಶ ನನಗಿಲ್ಲ. ಮುಂದೆಯು ಬಿಜೆಪಿ ಪಕ್ಷದಲ್ಲಿಯೆ ಇರುತ್ತೇನೆ. ಇದೇ ಪಕ್ಷದಲ್ಲಿ ಚುನಾವಣೆಗೆ ನಿಲ್ಲುತ್ತೇನೆ. ಮತ್ತೆ 2023ಕ್ಕೆ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ಬಿಜೆಪಿಯೆ ಅಧಿಕಾರಕ್ಕೆ ಬರಲಿದೆಯೆಂದು ಸಚಿವ ಎಂಟಿಬಿ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ನನಗೆ ಫೋನ್ ಮಾಡ್ತಾರೆ : ಎಂಟಿಬಿ ನಾಗರಾಜ್

ಪ್ರಗತಿ ತೋರಿಸದ ಇಲಾಖೆಗಳಿಗೆ 4 ತಿಂಗಳ ಗಡುವು: ಜಿಲ್ಲೆಯಲ್ಲಿ ಸಮರ್ಪಕವಾಗಿ ಪ್ರಗತಿ ತೋರಿಸದ ಇಲಾಖೆಗಳು ಫೆಬ್ರವರಿ ತಿಂಗಳ ಆಯವ್ಯಯ ಮಂಡನೆ ಒಳಗೆ ಸಂಪೂರ್ಣ ಶೇ.100 ರಷ್ಟುಪ್ರಗತಿ ಸಾಧಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್‌ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗಡುವು ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯ, ವಸತಿ ಹಾಗೂ ಪೌರಾಡಳಿತ, ಲೋಕೋಪಯೋಗಿ ಇಲಾಖೆಗಳಲ್ಲಿ ಸಮರ್ಪಕ ಪ್ರಗತಿ ಕಾಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್‌ ಸಭೆಯಲ್ಲಿ ಬೇಸರ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

click me!