ಪೌರಾಡಳಿತ ಸಚಿವ ಎಂಟಿಬಿಯಿಂದ ಉದ್ಯೋಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್

By Kannadaprabha NewsFirst Published Mar 24, 2021, 9:31 AM IST
Highlights

ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಉದ್ಯೋಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಶೀಘ್ರದಲ್ಲೇ ಹೆಚ್ಚು ಉದ್ಯೋಗಿಗಳ ನೇಮಕಾತಿ ಬಗ್ಗೆ ಮಾಹಿತಿ ನೀಡಿದ್ದಾರೆ. 

ವಿಧಾನಪರಿಷತ್‌ (ಮಾ.24): ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, 530 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂ.ಟಿ.ಬಿ. ನಾಗರಾಜು ತಿಳಿಸಿದರು.

 ಕಾಂಗ್ರೆಸ್‌ ಸದಸ್ಯ ಕೆ.ಸಿ. ಕೊಂಡಯ್ಯ ಅವರ ಪ್ರಶ್ನೆಗೆ ಈ ಉತ್ತರ ನೀಡಿದ ಸಚಿವರು, ಪ್ರಸ್ತುತ ಇಲಾಖೆಯಲ್ಲಿ 9972 ಹುದ್ದೆಗಳು ಖಾಲಿ ಇವೆ. ಗ್ರೂಪ್‌ ಸಿ ವೃಂದದ ಖಾಲಿಯಾಗುವ ಹುದ್ದೆಗಳನ್ನು ಸರ್ಕಾರದ ಹಂತದಲ್ಲಿ ಹಾಗೂ ಗ್ರೂಪ್‌ ಬಿ ಮತ್ತು ಸಿ ವೃಂದದಲ್ಲಿ ಖಾಲಿಯಾಗುವ ಹುದ್ದೆಗಳನ್ನು ಪೌರಾಡಳಿತ ನಿರ್ದೇಶನಾಲಯದ ಹಂತದಲ್ಲಿ ಕಾಲ ಕಾಲಕ್ಕೆ ಭರ್ತಿ ಮಾಡಲಾಗುವುದು ಎಂದರು.

'ಬಡ, ಮಧ್ಯಮ ವರ್ಗಕ್ಕೆ ಕೈಗೆಟುಕುವ ದರದಲ್ಲಿ ಶೀಘ್ರ ಪೆಟ್ರೋಲ್ ಲಭಿಸಲಿದೆ' .

 ಉಳಿದಂತೆ ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿ ಕೋಟಾ ಅಡಿಯಲ್ಲಿ ಭರ್ತಿ ಮಾಡಲಾಗುವ ವಿವಿಧ ಸಿ ವೃಂದದ ಖಾಲಿ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಂಬಂಧಪಟ್ಟಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಸದ್ಯ ನೇಮಕಾತಿಗೆ ನಿರ್ಬಂಧ ಇರುವುದರಿಂದ ಮಾಡಲಾಗುತ್ತಿಲ್ಲ. ನಿರ್ಬಂಧ ತೆರವಿನ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

click me!