ಪುಣ್ಯಕೋಟಿ ದತ್ತು ಯೋಜನೆ ಯಶಸ್ಸಿಗೆ ಸಚಿವ ಚವ್ಹಾಣ್‌ ಕರೆ

By Govindaraj S  |  First Published Aug 22, 2022, 3:00 AM IST

ಗೋಸಂಕುಲವನ್ನು ರಕ್ಷಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪುಣ್ಯ ಕೋಟಿ ದತ್ತು ಯೋಜನೆ’ ಯಶಸ್ವಿಗೊಳಿಸಲು ಪಶುಸಂಗೋಪನೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಮುಂದಾಗಬೇಕೆಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಕರೆ ನೀಡಿದ್ದಾರೆ.


ಬೆಂಗಳೂರು (ಆ.22): ಗೋಸಂಕುಲವನ್ನು ರಕ್ಷಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪುಣ್ಯ ಕೋಟಿ ದತ್ತು ಯೋಜನೆ’ ಯಶಸ್ವಿಗೊಳಿಸಲು ಪಶುಸಂಗೋಪನೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಮುಂದಾಗಬೇಕೆಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಕರೆ ನೀಡಿದ್ದಾರೆ. ಗೋ ಪ್ರೇಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವುಗಳನ್ನು ದತ್ತು ಪಡೆದು ಗೋಸಂಕುಲ ಸಂರಕ್ಷಣೆಗೆ ಕರೆ ನೀಡಿ ಎಲ್ಲರಿಗೂ ಮಾದರಿಯಾದರು. 

ನಾನು ಜಿಲ್ಲೆಗೊಂದರಂತೆ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಲ್ಲಿ 31 ಗೋವುಗಳನ್ನು ದತ್ತು ಪಡೆದಿದ್ದೇನೆ. ಗೋಶಾಲೆಗಳಲ್ಲಿರುವ ಜಾನುವಾರುಗಳ ನಿರ್ವಹಣೆ ಮಾಡಲು ಮತ್ತು ರಾಜ್ಯದ ಗೋಶಾಲೆಗಳನ್ನು ಆತ್ಮನಿರ್ಭರವಾಗಿಸುವ ಸಲುವಾಗಿ ಈ ಯೋಜನೆಯಲ್ಲಿ ಇಲಾಖೆಯ ಎಲ್ಲರೂ ಪಾಲುದಾರರಾಗಿ ಪುಣ್ಯಕೋಟಿ ದತ್ತು ಯೋಜನೆಗೆ ಶ್ರಮಿಸಬೇಕು ಎಂದು ಮನವಿ ಮಾಡಿದ್ದಾರೆ. 

Tap to resize

Latest Videos

Bidar: ರೈತರು ಆತಂಕಕ್ಕೆ ಒಳಗಾಗುವುದು ಬೇಡ: ಸಚಿವ ಪ್ರಭು ಚವ್ಹಾಣ್

ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿ ಜಾನುವಾರುಗಳ ದತ್ತು ಯೋಜನೆ, ಗೋಶಾಲೆಗಳಿಗೆ ದೇಣಿಗೆ ಯೋಜನೆ ಹಾಗೂ ಜಾನುವಾರುಗಳಿಗಾಗಿ ಆಹಾರ ಯೋಜನೆಯಡಿ ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ (ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಇತ್ಯಾದಿ) ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಲ್ಲಿರುವ ಗೋವುಗಳ ಆಹಾರಕ್ಕಾಗಿ ವಂತಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇಲಾಖೆಯ 9500 ಸಿಬ್ಬಂದಿಗಳು, 4200 ಸಂಸ್ಥೆಗಳು ಮತ್ತು ಕರ್ನಾಟಕ ಹಾಲು ಮಹಾಮಂಡಳ ವ್ಯಾಪ್ತಿಯಲ್ಲಿರುವ ಹತ್ತು ಸಾವಿರಕ್ಕೂ ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳು ಮಾತು ಬಾರದ ಮೂಕ ಪ್ರಾಣಿಗಳ ಸಂರಕ್ಷಣೆ, ಪಾಲನೆ, ಪೋಷಣೆ ಹಾಗೂ ನಿರ್ವಹಣೆಗೆ ಕೈ ಜೋಡಿಸುವ ಮೂಲಕ ಪುಣ್ಯಕೋಟಿ ದತ್ತು ಯೋಜನೆ ಯಶಸ್ವಿಗೆ ಸ್ಪಂದಿಸಬೇಕು ಎಂದು ಸಚಿವರು ಕೋರಿದ್ದಾರೆ.

ಯಾದಗಿರಿ ಜಿಲ್ಲೆ ಅಭಿವೃದ್ಧಿಗೆ ಒತ್ತು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಯಿಂದ 2013-14ನೇ ಸಾಲಿನಿಂದ 2022-23ನೇ ಸಾಲಿನವರೆಗೆ ಯಾದಗಿರಿ ಜಿಲ್ಲೆಗೆ ಒಟ್ಟು 1110.70 ಕೋಟಿ ರು.ಗಳ ಅನುದಾನದೊಂದಿಗೆ 3361 ಕಾಮಗಾರಿಗಳು ಅನುಮೋದನೆಯಾಗಿರುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅನುಮೋದನೆಗೊಂಡ ಕಾಮಗಾರಿಗಳಲ್ಲಿ ಇಲ್ಲಿವರೆಗೆ 2744 ಕಾಮಗಾರಿಗಳು ಪೂರ್ಣಗೊಂಡು 745.64 ಕೋಟಿ ರು.ವೆಚ್ಚ ಭರಿಸಲಾಗಿರುತ್ತದೆ. ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.

ಜಾನುವಾರು ಸಂರಕ್ಷಣೆ: ಪುಣ್ಯಕೋಟಿ ದತ್ತು ಯೋಜನೆಗೆ ಜು. 28 ಚಾಲನೆ

ಯಾದಗಿರಿ ಜಿಲ್ಲೆ ಒಳಗೊಂಡಂತೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹತ್ತು ಹಲವಾರು ಮಹತ್ವಾಕಾಂ​ಕ್ಷಿ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗಿದೆ. ವಿಶೇಷವಾಗಿ ಯಾದಗಿರಿ ಜಿಲ್ಲೆಗೆ ಎಲ್ಲಾ ಇಲಾಖೆಗಳಿಗೆ ಸಾಕಷ್ಟುಅನುದಾನವನ್ನು ನೀಡಿ ಅಭಿವೃದ್ಧಿಪಡಿ​ಸು​ವ ನಿಟ್ಟಿನಲ್ಲಿ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಯಾದಗಿರಿ ಜಿಲ್ಲೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮುಂದೆಯೂ ತಮ್ಮ ಆಶೋತ್ತರಗಳಿಗೆ ಪೂರಕವಾಗಿ ಶ್ರಮಿಸಿ ಅಭಿವೃದ್ಧಿಪಡಿಸಲಾಗುವುದು ಎಂದರು.

click me!