
ಕಲಬುರಗಿ(ನ.08): ಬ್ಲೂಟೂತ್ ಅಕ್ರಮದ ಕಿಂಗ್‌ಪಿನ್ ಆರ್.ಡಿ.ಪಾಟೀಲ್‌ಗೆ ಆಡಳಿತ ಪಕ್ಷದ ಘಟಾನುಘಟಿಗಳ ಬೆಂಬಲವಿದೆ ಎಂಬ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿರುವ ಆರೋಪಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಇಡೀ ಸರ್ಕಾರ ಹಗರಣದ ತನಿಖೆಗೆ ಬೆಂಬಲವಾಗಿ ನಿಂತಿದೆ. ನಾವು ಪರೀಕ್ಷೆ ನಡೆಯುವಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. 4 ದಿನದಲ್ಲಿ 20ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ. ಬಿಜೆಪಿ ಸರಕಾರವಿದ್ದಾಗ ಗೃಹ ಸಚಿವರೇ ಪಿಎಸ್‌ಐ ಹಗರಣದ ಮುಖ್ಯ ಆರೋಪಿ ಮನೆಗೆ ಹೋಗಿ ಕಾಜು- ಬದಾಮ್ ತಿಂದು ಬಂದಂತೆ ನಾವಂತೂ ತಿಂದಿಲ್ಲ. ಅಕ್ರಮದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.
ಪರೀಕ್ಷಾ ಅಕ್ರಮ ಕಿಂಗ್‌ಪಿನ್ ಪರಾರಿಗೆ ಪೊಲೀಸರ ಸಾಥ್? ತನಿಖೆಗೆ ಸೂಚನೆ!
ಮುಖ್ಯ ಆರೋಪಿ ಆರ್.ಡಿ.ಪಾಟೀಲ್ ನನ್ನು ಹಿಡಿಯುತ್ತೇವೆ. ಬಿಜೆಪಿಯವರು ಗಾಳಿಯಲ್ಲಿ ಗುಂಡು ಹೊಡೆಯದೆ ವಾಸ್ತವ ಅರಿತು ಮಾತನಾಡಲಿ. ವಿಜಯೇಂದ್ರ ಸರಿಯಾಗಿ ಹೋಮ್ ವರ್ಕ್ ಮಾಡಿಕೊಂಡು ಬಂದು ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ