ರಾಜೀನಾಮೆ ಜಟಾಪಟಿ: ಎಷ್ಟು ಜನ ಬರುತ್ತೀರಿ?, ಟೀ ಕೊಡಿಸ್ತೀನಿ, ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

By Kannadaprabha News  |  First Published Dec 31, 2024, 7:44 AM IST

ನನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಮಾಡುತ್ತಿರುವ ಆರೋಪಕ್ಕೆ ಒಂದಾದರೂ ದಾಖಲೆ ಇದೆಯಾ? ಇದ್ದರೆ ತೋರಿಸಲಿ ಎಂದ ಸಚಿವ ಪ್ರಿಯಾಂಕ್ ಖರ್ಗೆ 


ಬೆಂಗಳೂರು(ಡಿ.31):  ಕಲಬುರಗಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕ ರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಸಚಿನ್ ಕುಟುಂಬಕ್ಕೆ 1 ಕೋಟಿ ರು. ಪರಿಹಾರ ಮತ್ತು ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. 

ಈ ಕುರಿತು ಜ.3ರವರೆಗೆ ಸರ್ಕಾರದ ನಿಲು ವನ್ನು ಕಾದು ನೋಡುತ್ತೇವೆ. ಇಲ್ಲದಿದ್ದರೆ ತೀವ್ರ ಹೋರಾಟ ಆರಂಭಿಸುತ್ತೇವೆ. ಜ.4ರಂದು ಕಲಬುರಗಿಯಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದೂ ಎಚ್ಚರಿಕೆ ನೀಡಿದ್ದಾರೆ. 

Tap to resize

Latest Videos

ಸೋಮವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಮಾಜಿ ಸಚಿವ ಕೆ.ಎಸ್.ಈಶ್ವ ರಪ್ಪ ಅವರ ವಿರುದ್ಧ ಆರೋಪ ಕೇಳಿ ಬಂದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ಇದೇ ಸರ್ಕಾರದಲ್ಲಿ ಸಚಿವರಾಗಿದ್ದ ಬಿ.ನಾಗೇಂದ್ರ ವಾಲ್ಮೀಕಿ ನಿಗಮದ ಹಗರಣ ದಲ್ಲಿ ಸಿಲುಕಿ ರಾಜೀನಾಮೆ ನೀಡಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ವಿರುದ್ದ ಆರೋ ಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮ ೦ತ್ರಿಗಳು ತಕ್ಷಣ ಅವರಿಂದ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು. 

ಮೃತ ಸಚಿನ್ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಬೇಕು. ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕು, ಅವರ ಕುಟುಂಬದಲ್ಲಿ ಹಲವರು ವಿದ್ಯಾವಂತರಿದ್ದು, ಕುಟುಂಬದ ಒಬ್ಬರು ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು. ಸಚಿನ್ ಬರೆದಿರುವ ಮರಣ ಪತ್ರದಲ್ಲಿ ಶಾಸಕ ಬಸವರಾಜ ಮತ್ತಿಮೂಡ, ಬಿಜೆಪಿ ನಾಯಕರಾದ ಚಂದುಪಾಟೀಲ್, ಮಣಿಕಂಠ ರಾಠೋಡ್ ಮತ್ತು ಹಿಂದೂ ಸಮಾಜದ ಸಿದ್ದಲಿಂಗ ಸ್ವಾಮೀಜಿ ಅವರ ಕೊಲೆ ಸಂಚು ರೂಪಿಸಿರುವ ಉಲ್ಲೇಖವೂ ಇದೆ. ಇದೊಂದು ಗಂಭೀರ ವಿಚಾರವಾಗಿರುವ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಅತ್ಯಗತ್ಯ. ಅವರ ಕುಟುಂಬವೂ ಸಹ ನ್ಯಾಯಕ್ಕಾಗಿ ಸಿಬಿಐ ತನಿಖೆಗೆ ಆಗ್ರಹಿಸಿದೆ ಎಂದರು. 

ಪ್ರಿಯಾಂಕ್ ಖರ್ಗೆಯವರ ಇಲಾಖೆ ಗ್ರಾಮೀಣಾಭಿವೃದ್ಧಿ ಮತ್ತು ಐಟಿ-ಬಿಟಿ ಮಾತ್ರವಲ್ಲ. ಅವರು ಸರ್ವ ಇಲಾಖೆಯ ಸಚಿವರು. ಸದನದಲ್ಲಿ ಗೃಹ ಸಚಿವರಿದ್ದರೂ, ಮುಖ್ಯಮಂತ್ರಿಗಳ ಕುರಿತ ಪ್ರಶ್ನೆ ಇದ್ದರೂ ಅವರ ಪರವಾಗಿ ಇವರೇ ಉತ್ತರ ನೀಡುತ್ತಾರೆ. ಅವರು ಬಹಳ ಜ್ಞಾನಿ, ಮೇಧಾವಿ, ಬುದ್ದಿ ವಂತರು, ಅಷ್ಟೇ ಪ್ರಭಾವಿ, ಶಕ್ತಿಶಾಲಿ ಮುಖಂಡ, ಗುತ್ತಿಗೆದಾರ ಬರೆದಿಟ್ಟ ಏಳು ಪುಟಗಳ ಮರಣ ಪತ್ರದಲ್ಲಿ ಕಿರುಕುಳದ ಉಲ್ಲೇಖವಿದೆ. ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಬರೆದಿಟ್ಟ ಡೆತ್‌ನೋಟಿನ ಮಾಹಿತಿ ಸತ್ಯಕ್ಕೆ ದೂರವಾಗುವ ಸಾಧ್ಯತೆಯೇ ಇಲ್ಲ ಎಂದು ವಿಜಯೇಂದ್ರ ತಿಳಿಸಿದರು. 

ಸಚಿನ್ ಸಾಯುವ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್ ಹಾಕಿಕೊಂಡಿದ್ದು, ಆಗ ಆತನ ಇಬ್ಬರು ಸಹೋದರಿಯರಾದ ಸವಿತಾ, ಸುನೀತಾ ಮಧ್ಯಾಹ್ನ 2.15ಕ್ಕೆ ಪೊಲೀಸ್ ಠಾಣೆಗೆ ಧಾವಿಸಿದ್ದರು. ಪ್ರಾಣ ಉಳಿಸಲು ಕೋರಿದರೂ ಅವರ ಮನವಿಯನ್ನು ಕಿಂಚಿತ್ತೂ ಲೆಕ್ಕಿಸದೆ, ಅಮಾನವೀಯವಾಗಿ ಪೊಲೀಸರು ನಡೆದುಕೊಂಡಿದ್ದಾರೆ. ಪೊಲೀಸ್ ಠಾಣೆಗಳಿಗೆ ಅವರನ್ನು ತಿರುಗಾಡಿಸಿದ್ದರು. ಸಚಿನ್‌ನನ್ನು ಹುಡುಕುವ ಕೆಲಸವನ್ನೂ ಮಾಡಿಲ್ಲ. ಖರ್ಗೆ ಕುಟುಂಬಕ್ಕೆ ಹತ್ತಿರ ಇರುವ ರಾಜು ಕಪನೂ‌ರ್ ಪ್ರಕರಣದ ಹಿಂದಿನ ಪ್ರಮುಖ ಆರೋಪಿ ಎಂಬುದು ಮರಣಪತ್ರದಲ್ಲಿದೆ ಎಂದರು. 

ಆತ್ಮಹತ್ಯೆ ಭಾಗ್ಯ ನೀಡಿದ ಸರ್ಕಾರ: 

ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಅಥವಾ ರಾಜ್ಯ ಸರ್ಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಸಿದ್ದರಾಮಯ್ಯನವರು ಸಿಎಂ ಆದ ಬಳಿಕ ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯ ವನ್ನು ದಯಪಾಲಿಸಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಮೊದಲು ಆತ್ಮ ಹತ್ಯೆ ಮಾಡಿಕೊಂಡಿದ್ದು, ಬಳಿಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್ ಆಪ್ತ ಸಹಾಯಕನ ಹೆಸರು ಬರೆ ದಿಟ್ಟು ರುದ್ರಣ್ಣ ಯಡವಣ್ಣವರ್‌ಆತ್ಮಹತ್ಯೆ ಮಾಡಿಕೊಂಡಿದ್ದರು. ದಾವಣಗೆರೆ, ಮಾಗಡಿ ಯಲ್ಲಿಯೂ ಆತ್ಮಹತ್ಯೆ ಪ್ರಕರಣ ನಡೆದಿದೆ. ಯಾದಗಿರಿ ಪಿಎಸ್‌ಐ ಪರಶುರಾಮ ಕೂಡ ಆತ್ಮಹತ್ಯೆಗೆ ಶರಣಾಗಿದ್ದರು ಎಂದರು.  

ಸಿದ್ದು ಸರ್ಕಾರದಿಂದ ಆತ್ಮಹತ್ಯೆ ಭಾಗ್ಯ 

ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆ ಗಳು ಅಥವಾ ರಾಜ್ಯ ಸರ್ಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ನವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ದಯಪಾಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 

ಎಷ್ಟು ಜನ ಬರುತ್ತೀರಿ?, ಟೀ ಕೊಡಿಸ್ತೀನಿ: ಖರ್ಗೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರು ಅನಗತ್ಯವಾಗಿ ನನ್ನ ಹೆಸರು ಎಳೆ ತಂದು ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಅವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಜತೆಗೆ, ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕರು ಕಲಬುರಗಿಯ ತಮ್ಮ ಮನೆಗೆ ಜ.4ರಂದು ಮುತ್ತಿಗೆ ಹಾಕುವುದಾದರೆ ಮೊದಲೇ ಎಷ್ಟು ಜನ ಬರುತ್ತಾರೆಂದು ಹೇಳಲಿ. ಅವರೆಲ್ಲರಿಗೂ ಕಾಫಿ-ಟೀ ವ್ಯವಸ್ಥೆ ಮಾಡುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯವರು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರಲ್ಲಎಂಬಸುದ್ದಿಗಾರರ ಪ್ರಶ್ನೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ಬಗ್ಗೆ ಸಂಶಯ ಮೂ ಡುವಂತಹ ಹಲವು ವಿಷಯಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. 

ಸತ್ಯಾಂಶ ತಿಳಿಯಲು ಸಿಐಡಿ ತನಿಖೆಗೆ ವಹಿಸುವಂತೆ ಡಿ.27ರಂದೇ ಸಿಎಂ ಮತ್ತು ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಭಾನು ವಾರ ಇಬ್ಬರನ್ನೂ ಭೇಟಿಯಾಗಿ ನನ್ನ ಬಳಿ ಇರುವ ಮಾಹಿತಿ ನೀಡಿದ್ದೇನೆ ಎಂದರು. ಬಿಜೆಪಿಯವರಿಗೆ ಸಿಬಿಐ ಮೇಲೆ ಪ್ರೀತಿ ಜಾಸ್ತಿ. ಅದಕ್ಕೆ ಈಗ ಸಿಬಿಐ ತನಿಖೆ ಕೇಳು ತ್ತಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಯವರು ನಗೆಪಾಟಲಿಗೆ ಈಡಾಗುತ್ತಿದ್ದಾರೆ. ಒಂದಾ ದರೂ ತಲೆದಂಡ ಆಗಬಹುದು ಎಂದು ಅವರು ಹಗಲುಗನಸು ಕಾಣುತ್ತಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯವರು ತಮ್ಮದೇ ಪಕ್ಷದ ಶಾಸಕ ಮುನಿರತ್ನ ಪ್ರಕರಣ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕೋ ಪ್ರಕರಣಗಳ ಬಗ್ಗೆ ಮಾತನಾಡಲಿ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದರು. ಬಿಜೆಪಿ ಅವರು ಪ್ರಕರಣದ ಪ್ರಮುಖ ಆರೋಪಿ ತಮ್ಮ ಜೊತೆಗಿರುವ ಫೋಟೋ ಬಿಡುಗಡೆ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ, ನಾನು ಮೊದಲಿನಿಂದಲೂ ಅವರು ನಮ್ಮ ಕಾರ್ಪೋ ರೇಟರ್‌ಸಹೋದರರು ಅಂತ ಹೇಳುತ್ತಾ ಬಂದಿದ್ದೇನೆ. ಹಾಗಾಗಿ ಫೋಟೋ ಇರಬಹುದು. ಡ್ರಗ್ ಕೇಸಿನಲ್ಲಿ ನಟಿಯೊಬ್ಬಳ ಹೆಸರು ಕೇಳಿ ಬಂತಲ್ವಾ, ಆಕೆಯ ಫೋಟೋ ಯಾರ ಜೊತೆ ಇತ್ತು? ಫೋಟೋ ಇದ್ದ ಮಾತ್ರಕ್ಕೆ ಏನಾಯಿತು? ಎಂದು ಪ್ರಶ್ನಿಸಿದರು.

ಬಿಜೆಪಿಗರಿಗೆ ಸಿಬಿಐ ಮೇಲೆ ಪ್ರೀತಿ ಜಾಸ್ತಿ ಬಿಜೆಪಿಯವರಿಗೆ ಸಿಬಿಐ ಮೇಲೆ ಪ್ರೀತಿ ಜಾಸ್ತಿ. ಅದಕ್ಕೆ ಈಗ ಸಿಬಿಐ ತನಿಖೆ ಕೇಳುತ್ತಿದ್ದಾರೆ. ನನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಮಾಡುತ್ತಿರುವ ಆರೋಪಕ್ಕೆ ಒಂದಾದರೂ ದಾಖಲೆ ಇದೆಯಾ? ಇದ್ದರೆ ತೋರಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 

click me!