ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದು ಇದರ ವಿರುದ್ಧ ‘ನನ್ನ ತೆರಿಗೆ ನನ್ನ ಹಕ್ಕು’ ಘೋಷಣೆಯೊಂದಿಗೆ ಕೇಂದ್ರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮಾಡಲಾಯಿತು: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ(ಫೆ.10): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಆರ್ಥಿಕ ಸದೃಢತೆಗೆ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 5,22,171 ಜನ ಫಲಾನುಭವಿ ಮಹಿಳೆಯರು ಲಾಭ ಪಡೆಯುತ್ತಿದ್ದಾರೆ. ಅನ್ನ ಭಾಗ್ಯದಡಿ ಜಿಲ್ಲೆಯಲ್ಲಿ 19,16,144 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿನಿತ್ಯ ರಾಜ್ಯಾದ್ಯಂತ 60 ಲಕ್ಷ ಮಹಿಳೆಯರು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 21.05 ಕೋಟಿ ಮಹಿಳೆಯರು ಹಾಗೂ ಕಲಬುರಗಿ ಜಿಲ್ಲೆಯಲ್ಲಿ 4.27 ಕೋಟಿ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 650 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕಿತ್ತು. ಅದರಲ್ಲಿ ಇನ್ನೂ 240 ಕೋಟಿ ಅನುದಾನ ಬಿಡುಗಡೆ ಮಾಡಬೇಕಿದೆ ಎಂದರು.'
undefined
ಶಕ್ತಿ ಯೋಜನೆ: ನಿತ್ಯ 60 ಲಕ್ಷ ಮಹಿಳೆಯರ ಪ್ರಯಾಣ, ಸಚಿವ ರಾಮಲಿಂಗಾ ರೆಡ್ಡಿ
ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದು ಇದರ ವಿರುದ್ಧ ‘ನನ್ನ ತೆರಿಗೆ ನನ್ನ ಹಕ್ಕು’ ಘೋಷಣೆಯೊಂದಿಗೆ ಕೇಂದ್ರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮಾಡಲಾಯಿತು. ಕರ್ನಾಟಕ ಪ್ರತಿವರ್ಷ ಕೇಂದ್ರಕ್ಕೆ ತೆರಿಗೆ ರೂಪದಲ್ಲಿ 4.30 ಲಕ್ಷ ಕೋಟಿಯಲ್ಲಿ ಕೊಟ್ಟರೆ ಕೇಂದ್ರ ನಮ್ಮ ರಾಜ್ಯಕ್ಕೆ ಅನುದಾನದ ರೂಪದಲ್ಲಿ ಕೇವಲ 44,000 ಕೋಟಿ ಮಾತ್ರ ಕೊಡುತ್ತಿದೆ. ಈ ತಾರತಮ್ಯದ ವಿರುದ್ಧ ಹೋರಾಟ ಮಾಡಿದರೆ ನಮ್ಮನ್ನೇ ದೇಶ ಒಡೆಯುವವರು ಹಾಗೂ ದೇಶದ್ರೋಹಿಗಳು ಎಂದು ನಮ್ಮನ್ನು ಕರೆಯುತ್ತಿದ್ದಾರೆ ಎಂದು ಟೀಕಿಸಿದರು.