
ಬೆಂಗಳೂರು, (ಫೆ.16): ಟಿವಿ, ಬೈಕ್, ಫ್ರಿಡ್ಜ್ ಇದ್ದವರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ ಎಂದು ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆ ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಎಚ್ಚೆತ್ತುಕೊಂಡು ಅದನ್ನ ವಾಪಸ್ ಪಡೆದುಕೊಂಡರು.
ಇದೀಗ ಕಂದಾಯ ಸಚಿವ ಆರ್. ಅಶೋಕ್ ಅವರ ಸರದಿ. ಸಚಿವರ ಈ ಹೇಳಿಕೆಯಿಂದ ರಾಜ್ಯದ ಪಿಂಚಣಿದಾರರು ಆತಂಕಕ್ಕೆ ಒಳಗಾಗಿದ್ದಾರೆ.
ಪಿಂಚಣಿ ಹಣ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಹೌದು..ಸತತ 9 ತಿಂಗಳು ಬ್ಯಾಂಕ್ನಿಂದ ಪಿಂಚಣಿ ಹಣ ವಿತ್ಡ್ರಾ ಮಾಡದಿದ್ದರೆ ಅಂಥ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಲಾಗುವುದು ಎಂಬ ಕಂದಾಯ ಸಚಿವ ಆರ್.ಅಶೋಕ ಅವರ ಹೇಳಿಕೆ ಗೊಂದಲ ಸೃಷ್ಟಿಸಿದೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿರುವ ಸಚಿವರು, ರಾಜ್ಯದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಸಿಗುತ್ತಿರುವ ಪಿಂಚಣಿಯನ್ನೇ ಜೀವನಾಧಾರ ಮಾಡಿಕೊಂಡಿರುವ ಹಲವರು ಕಂದಾಯ ಸಚಿವರ ಹೇಳಿಕೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ.
ಸರ್ಕಾರದಿಂದ ವಿವಿಧ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವವರು 9 ತಿಂಗಳ ಅವಧಿಯಲ್ಲಿ ಹಣವನ್ನು ಡ್ರಾ ಮಾಡದಿದ್ದರೆ ಅಂಥ ಖಾತೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಸೂಚಿಸುತ್ತೇವೆ. ಪ್ರತಿ ವರ್ಷ 4 ಲಕ್ಷ ಹೊಸ ಪಿಂಚಣಿದಾರರು ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಈ ಎಡವಟ್ಟಿನ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ