2 ಸಾವಿರ ಬೆಡ್ ಇವೆ ಎಂದ ಸಚಿವ ಅಶೋಕ್: ಹಾಗಾದ್ರೆ ಆಸ್ಪತ್ರೆಯವರೇ ಸುಳ್ಳು ಹೇಳಿದ್ರಾ..?

By Suvarna NewsFirst Published Jun 23, 2020, 8:02 PM IST
Highlights

ಕೊರೋನಾ ವೈರಸ್ ಭೀತಿ ಹೆಚ್ಚುತ್ತಿದ್ದು ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆಯೂ ಕಾಡುತ್ತಿದೆ ಎನ್ನುವ ಆರೋಪಕ್ಕೆ ಸಚಿವ ಆರ್. ಅಶೋಕ್ ಕೊಟ್ಟ ಉತ್ತರ ಈ ಕೆಳಗಿನಂತಿದೆ.

ಬೆಂಗಳೂರು, (ಜೂನ್.23): ಬೆಡ್ ಇಲ್ಲ ಅಂತಾ ಹೇಳುವ ಸಮಸ್ಯೆ ಬರಬಾರದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್ ಇಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಬೆಂಗಳೂರಲ್ಲಿ 2 ಸಾವಿರ ಬೆಡ್ ಇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಕೊರೋನಾ ವೈರಸ್ ಭೀತಿ ಹೆಚ್ಚುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ ಇದೆ ಎನ್ನುವ ಸುದ್ದಿಗೆ ಖುದ್ದು ಕಂದಾಯ ಸಚಿವ ಆರ್. ಅಶೋಕ್, ಸರ್ಕಾರದಿಂದ ರೆಫರ್ ಆಗಿ ಹೋಗುವ ರೋಗಿಗಳಿಗೆ ಚಿಕಿತ್ಸೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಹಣ ಬಿಡುಗಡೆ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ನಿಗದಿತ ದರದೊಂದಿಗೆ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ ಆದೇಶ ಹೊರಡಿಸಿದ್ದೇವೆ ಎಂದು ಹೇಳಿದರು.

ಕೋವಿಡ್19 ಆಸ್ಪತ್ರೆಗಳಲ್ಲಿ ಅವವ್ಯವಸ್ಥೆ ದೂರು: ಅಧಿಕಾರಿಗಳಿಗೆ ಖಡಕ್‌ ಸೂಚನೆ ಕೊಟ್ಟ ಸಿಎಂ

 ಕೋವಿಡ್ ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದಲೇ ಹಣ ಬಿಡುಗಡೆ ಮಾಡುತ್ತೇವೆ. ಆದರೆ ಸಾರ್ವಜನಿಕ ಆರೋಗ್ಯ ಇಲಾಖೆಯ ಶಿಫಾರಸು ಅಗತ್ಯ ಎಂದರು. 

ಹಾಸಿಗೆ ಇಲ್ಲದ ಕಾರಣ ರೋಗಿಗಳನ್ನು ಸೇರಿಸಿಕೊಳ್ಳುತ್ತಿಲ್ಲ. ಕೊವಿಡ್ ಕೇಂದ್ರವಾಗಿರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂದು ಹೇಳಲಾಗಿತ್ತು. ಬೆಡ್ ಇಲ್ಲ ಎಂಬ ಕಾರಣಕ್ಕೆ ರೋಗಿಯನ್ನ ನಡು ರಸ್ತೆಯಲ್ಲಿ ನಿಲ್ಲಿಸಿದ್ದರು ಎನ್ನುವ ಸುದ್ದಿ  ವರದಿಯಾಗಿತ್ತು.

click me!