ಬಸ್ ಟಿಕೆಟ್ ದರ ಶೇ.25 ಹೆಚ್ಚಳ ಮಾಡ್ತಾರೆಂದ ಆರ್. ಅಶೋಕ್‌ಗೆ ಬಹಿರಂಗ ಸವಾಲೆಸೆದ ರಾಮಲಿಂಗಾರೆಡ್ಡಿ!

By Sathish Kumar KH  |  First Published Nov 12, 2024, 5:39 PM IST

ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ನಷ್ಟವಾಗಿದ್ದು, ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿರುವುದಾಗಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ತಿರುಗೇಟು ನೀಡಿದ್ದಾರೆ. ಬಹಿರಂಗ ಚರ್ಚೆಗೆ ಸವಾಲು ಹಾಕಿರುವ ಸಚಿವರು, ಅಂಕಿಅಂಶಗಳೇ ಅಭಿವೃದ್ಧಿಗೆ ಮಾನದಂಡ ಎಂದಿದ್ದಾರೆ.


ಬೆಂಗಳೂರು (ನ.12): ರಾಜ್ಯ ಸರ್ಕಾರ ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಗೆ ನಷ್ಟವಾಗಿದ್ದು, ಶೇ.25 ಟಿಕೆಟ್ ದರ ಹೆಚ್ಚಳ ಮಾಡಲು ಮುಂದಾಗಿದೆ ಎಂದು ಹೇಳಿರುವ ವಿಪಕ್ಷ ನಾಯಕ ಆರ್. ಅಶೋಕ್ ಅವರೇ ನಿಮಗೆ ಇಂದೇ ನಾನು ಸ್ಥಳ, ಸಮಯ ನಿಗದಿ ಮಾಡಿ ಬಹಿರಂಗ ಚರ್ಚೆಗೆ ಬರುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ವಿರೋಧ ಪಕ್ಷದ ನಾಯಕರಿಗೆ, ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ‌.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ. ಇಂದೇ ಸ್ಥಳ ಮತ್ತು ಸಮಯವನ್ನು ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ‌. ಅಂಕಿಅಂಶಗಳೇ ನಮ್ಮ‌ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂಬುದನ್ನು ಹತ್ತು ಹಲವು ಬಾರಿ ನಾನು ತಿಳಿಸಿದ್ದೇನೆ‌ ಎಂದರು.

Tap to resize

Latest Videos

undefined

ರಾಜ್ಯದ ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ಎಂಬುದಕ್ಕೆ ಶ್ಚೇತಪತ್ರ ಹೊರಡಿಸಿ ತಮ್ಮ ಅವಧಿಯ ಆಡಳಿತವನ್ನು ಜನರಿಗೆ ತೋರಿಸಬೇಕೆಂಬ ತಮ್ಮ ಮಹದಾಸೆಗೆ ನಾವು ಅಭಾರಿ. ನಮ್ಮ ಸರ್ಕಾರದ‌ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳ ಆದಾಯದಲ್ಲಿ‌ ಗಣನೀಯ ವೃದ್ಧಿಯಾದರೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ತುಂಬಲು ಸಾಧ್ಯವಾಗಿಲ್ಲದಿರುವುದು ತಮ್ಮ ಸರ್ಕಾರದ ಕೊಡುಗೆ. ಶಕ್ತಿ ಯೋಜನೆಯಿಂದ ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ 84 ಲಕ್ಷದಿಂದ 1.08 ಕೋಟಿಗೆ ಏರಿಕೆ ಆಗಿದೆ. ಆದಾಯದಲ್ಲಿ ಗಣನೀಯ ವೃದ್ಧಿ ಆಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಲ್ಲಾನೇ ಹರಾಮಿ ಆಸ್ತಿ ತಗೋಬಾರ್ದು ಅಂದಿದ್ದಾರೆ; ಆದ್ರೆ ಜಮೀರ್ ಇಸ್ಲಾಂ ಧರ್ಮ ಕೆಡಿಸ್ತಾನೆ; ಅಯೂಫ್!

ನಾವು ಈಗಾಗಲೇ ಹಲವು ಬಾರಿ ತಿಳಿಸಿದ್ದೇನೆ, ಆದಾಯವೇ  ಬೇರೆ ಲಾಭವೇ ಬೇರೆ. ಆದಾಯದಲ್ಲಿ ಗಣನೀಯ ಹೆಚ್ಚಳವಾಗಿದ್ದರೂ ಸಹ ಲಾಭವನ್ನು ಗಳಿಸಲು ಸಾಧ್ಯವಿಲ್ಲ, ಏಕೆಂದರೆ ತಮ್ಮ ಪಕ್ಷದವರು ಬಾಕಿ ಇಟ್ಟು ಹೋಗಿರುವ ರೂ.5900 ಕೋಟಿ ನಷ್ಟ ಸಾರಿಗೆ ಸಚಿವರಾಗಿ, ಹಲವು ಬಾರಿ ಅನೇಕ ಖಾತೆಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರೂ, ಈ ಬಗ್ಗೆ ತಮಗೆ ಅರ್ಥವಾಗದಿದ್ದರೆ ನಾನು ಏನು ಮಾಡಲು ಸಾಧ್ಯ. ಈ ಬಗ್ಗೆ ಕೂಲಂಕುಷವಾಗಿ ಮಾಹಿತಿ ಸಂಗ್ರಹಿಸಿ ನಂತರ ಟ್ಟೀಟ್ ಮಾಡಿದರೆ‌ ಒಳಿತು ಎಂದರು.

ತಮ್ಮ ಬಿ.ಜೆ.ಪಿ ಪಕ್ಷದ ಆಡಳಿತದ ಐದು ವರ್ಷಗಳಲ್ಲಿ ಯಡಿಯೂರಪ್ಪ‌ ಹಾಗೂ ಬೊಮ್ಮಾಯಿ  ಮುಖ್ಯಮಂತ್ರಿಗಳಾಗಿದ್ದಾಗ, ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದಾರೆ. ಕಳೆದ 5 ವರ್ಷಗಳಲ್ಲಿ ಬಿ.ಎಂ.ಟಿ ಸಿ‌ ಹೊರತುಪಡಿಸಿ ಬೇರೆ ಯಾವುದೇ‌ ಸಾರಿಗೆ ನಿಗಮಗಳಿಗೆ ಬಸ್‌ಗಳ ಸೇರ್ಪಡೆಯೇ ಮಾಡದೆ, ಡಕೋಟ ಬಸ್ಸುಗಳನ್ನು ಕಾರ್ಯಾಚರಣೆ‌ ಮಾಡಲು ಬಿಟ್ಟು ಹೋಗಿದ್ದೀರಾ. ನಮ್ಮ ಸರ್ಕಾರ 6200 ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಕಳೆದೊಂದು ವರ್ಷದಲ್ಲಿಯೇ 3,450  ಹೊಸ ಬಸ್ಸುಗಳ ಸೇರ್ಪಡೆ ಮಾಡಲಾಗಿದೆ. ಡಕೋಟಾ ಬಸ್ಸುಗಳನ್ನು‌ ಪುನಶ್ಚೇತನ‌ ಮಾಡುವ ಕಾರ್ಯವನ್ನು ಸಹ ಕೈಗೆತ್ತಿಕೊಂಡು 1,300 ಬಸ್ಸುಗಳ ಪುನಶ್ಚೇತನ ‌ಕಾರ್ಯ‌ಮಾಡಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಬಿ.ಜೆ.ಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ‌ ಹಾಗೂ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13,888 ಹುದ್ದೆಗಳು ಖಾಲಿ ಇದ್ದರೂ (ನಿವೃತ್ತಿ ಇನ್ನಿತರೆ ಕಾರಣಗಳಿಂದ ) ಒಂದೇ ಒಂದು‌ ನೇಮಕಾತಿ ಮಾಡಿಲ್ಲ. ನಮ್ಮ ಸರ್ಕಾರ ಬಂದ ಕೂಡಲೇ 9,000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದ್ದು, ಈಗಾಗಲೇ 5,800 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ವಿವಿಧ ಹಂತದಲ್ಲಿವೆ. ಬಿಜೆಪಿ  ಅವಧಿಯಲ್ಲಿ  ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ  ತಿಂಗಳ ವೇತನ ಪೂರ್ಣ ಪಾವತಿಯಾಗದೆ, ಅರ್ಧವೇತನ, ಕೆಲವೊಮ್ಮೆ ಆ ವೇತನವೂ ತಿಂಗಳ ಕೊನೆಯವರೆಗೂ, ಒಮ್ಮೊಮ್ಮೆ ಮುಂದಿನ ತಿಂಗಳವರೆಗೂ ಪಾವತಿಯಾಗುತ್ತಿತ್ತು. ಈ ಬಗ್ಗೆ ತಮಗೆ ಮಾಹಿತಿ ಇಲ್ಲವೇ? ನಮ್ಮ ಸರ್ಕಾರ ಬಂದ  ಮೇಲೆ ನಿಗದಿತ ದಿನಾಂಕದಂದು ನೌಕರರಿಗೆ ವೇತನ ಪಾವತಿಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗೌಡ್ರ ಕುಟುಂಬ ಖರೀದಿಗೆ ಜಮೀರ್‌ಗೆ ಪಾಕಿಸ್ತಾನದಿಂದ ದುಡ್ಡು ಬಂದಿದ್ಯಾ?: ಆರ್.ಅಶೋಕ್

ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಕಾರ್ಮಿಕ‌ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕಳೆದ ಏಳೆಂಟು ವರ್ಷಗಳಿಂದ ಬಾಕಿ ಉಳಿದಿದ್ದ 1000 ಕ್ಕೂ ಅಧಿಕ ಮೃತ ಅವಲಂಬಿತ‌ ಕುಟುಂಬಗಳಿಗೆ ಅನುಕಂಪ ಆಧಾರದಲ್ಲಿ ಹುದ್ದೆ ನೀಡಲಾಗಿದೆ ಕಳೆದ‌ 5 ವರ್ಷದಲ್ಲಿ ತಮ್ಮ ಸರ್ಕಾರ ಸಂಪೂರ್ಣ ನಿಲ್ಲಿಸಿದ್ದ ಪ್ರಕ್ರಿಯೆ ಇದು. ತಮ್ಮ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌  ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ ಎಂದು ಆರ್. ಅಶೋಕ್‌ ಅವರಿಗ ಖಡಕ್ ತಿರುಗೇಟು ನೀಡಿದ್ದಾರೆ.

click me!