ನಾಲ್ಕೂ ನಿಗಮಗಳಲ್ಲಿ ನೌಕರರ ಸಂಖ್ಯೆ ಕಡಿಮೆ ಇದೆ. ನೇಮಕಾತಿ ಮಾಡಿಕೊಳ್ಳಬೇಕು. ಬಸ್ಸುಗಳ ಸಂಖ್ಯೆ ಕೂಡ ತುಂಬಾ ಕಡಿಮೆ ಇದೆ ಅದನ್ನು ಹೆಚ್ಚಳ ಮಾಡಬೇಕು. ಇಲ್ಲಾಂದ್ರೆ ಕಾಂಗ್ರೆಸ್ ಶಕ್ತಿ ಯೋಜನೆ ಜಾರಿ ಮಾಡಲು ಕಷ್ಟ ಆಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮಾಹಿತಿ ನೀಡಿದ ಅಧಿಕಾರಿಗಳು
ಬೆಂಗಳೂರು(ಮೇ.30): ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷ ಅಂದಾಜು 3200 ಕೋಟಿ ಹಣ ಬೇಕಾಗುತ್ತದೆ. ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರ ಸಹಾಯಧನ ನೀಡಿದ್ರೆ ಯೋಜನೆ ಜಾರಿಗೆ ಅನುಕೂಲವಾಗುತ್ತದೆ. ಸರ್ಕಾರ ಹಣ ನೀಡದಿದ್ರೆ ನಿಗಮಗಳು ಇನ್ನಷ್ಟು ಸಾಲದ ಸುಳಿಯಲ್ಲಿ ಸಿಲುಕುವ ಸಾಧ್ಯತೆ ಇದೆ ಅಂತ ಅಧಿಕಾರಿಗಳು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಇಂದು(ಮಂಗಳವಾರ) ಶಾಂತಿನಗರದ ಸಾರಿಗೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಭೆ ನಡೆದಿದೆ.
ಗ್ಯಾರಂಟಿ ಭರವಸೆ ಈಡೇರಿಸುತ್ತೇವೆ, ಸಮಯ ಬೇಕು: ಸಚಿವ ರಾಮಲಿಂಗಾರೆಡ್ಡಿ
ನಾಲ್ಕೂ ನಿಗಮಗಳಲ್ಲಿ ನೌಕರರ ಸಂಖ್ಯೆ ಕಡಿಮೆ ಇದೆ. ನೇಮಕಾತಿ ಮಾಡಿಕೊಳ್ಳಬೇಕು. ಬಸ್ಸುಗಳ ಸಂಖ್ಯೆ ಕೂಡ ತುಂಬಾ ಕಡಿಮೆ ಇದೆ ಅದನ್ನು ಹೆಚ್ಚಳ ಮಾಡಬೇಕು. ಇಲ್ಲಾಂದ್ರೆ ಕಾಂಗ್ರೆಸ್ ಶಕ್ತಿ ಯೋಜನೆ ಜಾರಿ ಮಾಡಲು ಕಷ್ಟ ಆಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.