ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್‌ಗೆ ಮುಂದಾದ ರಾಮಲಿಂಗಾ ರೆಡ್ಡಿ

Published : Jun 28, 2025, 07:25 PM IST
Ramalinga Redy

ಸಾರಾಂಶ

ಬೆಂಗಳೂರಿನಲ್ಲಿ ಆಟೋ ಚಾಲಕರು ಹೆಚ್ಚಿನ ದರ ಕೇಳುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. 

ಬೆಂಗಳೂರು: ರಾಜಧಾನಿ ಬೆಂಗಳೂರಿನ ಬಹುತೇಕ ಆಟೋ ಚಾಲಕರು ಬಾಯಿಗೆ ಬಂದಂತೆ ಹಣ ಕೇಳುವುದು ಸಾಮಾನ್ಯವಾಗಿದೆ. ಪ್ರಯಾಣಿಕರು ಕೊಂಚ ದುಬಾರಿಯಾದ್ರೂ ಆಪ್‌ಗಳ ಮೊರೆ ಹೋಗುತ್ತಾರೆ. ಆದ್ರೂ ಈ ಆಪ್‌ ಆಧರಿತ ಬೆಲೆಗಳು ಸಹ ಬೇರೆ ಬೇರೆಯಾಗಿರುತ್ತವೆ. ಇದೀಗ ಸಾರ್ವಜನಿಕ ಹಿತ ಕಾಪಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿದ್ರೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ.

ಪ್ರಯಾಣಿಕರಿಂದ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಟೋ ಚಾಲಕರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಸಾರಿಗೆ ಇಲಾಖೆ ಕಮೀಷನರ್ ಗೆ ಪತ್ರದ ಮೂಲಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ಸಾರ್ವಜನಿಕರಿಂದ ದೂರುಗಳು ಬಂದ ಬೆನ್ನಲ್ಲೇ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಆ್ಯಪ್ ಆಧಾರಿತ ಆಟೋಗಳು ಮತ್ತು ಇನ್ನಿತರ ಆಟೋಗಳು ಕಾನೂನು ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಪ್ರಯಾಣಿಕರಿಂದ ಹಗಲು ದರೋಡೆ ಮಾಡಿದ್ರೆ ಅಂತಹವರ ಪರ್ಮೀಟ್ ರದ್ದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.

ರಾಮಲಿಂಗಾ ರೆಡ್ಡಿ ಸೂಚನೆ ಏನು?

ಪ್ರಯಾಣಿಕರಿಂದ ನಿಗದಿಕ್ಕಿಂತ ದರಕ್ಕಿಂತ ಹೆಚ್ಚಿನ ದರ ಬೇಡಿಕೆ, ಹೆಚ್ಚಿನ ದರ ನೀಡದಿದ್ದಲ್ಲಿ ಪ್ರಯಾಣವನ್ನು ರದ್ದುಗೊಳಿಸುವುದು ಹಾಗೂ ಅತೀ ಹೆಚ್ಚಿನ ದರ ವಸೂಲು ಮಾಡುತ್ತಿರುವ ಪ್ರಕರಣಗಳ ಬಗ್ಗೆ ದೂರು ಬಂದಲ್ಲಿ ತ್ವರಿತಗತಿಯಲ್ಲಿ ಕ್ರಮಕೈಗೊಂಡು ಅಂತಹ ಆಟೋಗಳ ಪರ್ಮಿಟ್ ರದ್ದು ಮಾಡುವುದರ ಜೊತೆಗೆ ಪ್ರಕರಣ ದಾಖಲಿಸಬೇಕು.

ಉದಾ: ದಿನಾಂಕ 18 ನೇ ಜೂನ್ 2025 ರಂದು ರಂದು ರಾಪಿಡೋ ಆಟೋ ಆಪ್ ಪ್ರತಿಕಿ.ಮೀ ರೂ. 100.89, ಅದೇ ಆಟೋ ಓ ಆಪ್ ಅವರು 4 ಕಿ.ಮೀ ದೂರದ ಪ್ರಯಾಣಕ್ಕೆ ರೂ. 184.19 ತೆಗೆದುಕೊಂಡಿರುತ್ತಾರೆ. ಸಾರ್ವಜನಿಕರಿಂದ ಈ ರೀತಿಯ ಹಗಲು ದರೋಡೆ ಅಕ್ಷಮ್ಮ, ಕಠಿಣ ಕ್ರಮ ಜರೂರಾಗಿ ಜರುಗಿಸಬೇಕು.

ಈಗಾಗಲೇ ಬಾಡಿಗೆಗೆ ನಿರಾಕರಣೆ, ಅಧಿಕ ಬಾಡಿಗೆಗೆ ಒತ್ತಾಯಿಸಿದ ಆಟೋ ಚಾಲಕರ ವಿರುದ್ಧ ಪ್ರಕರಣಗಳನ್ನು ಸಾರಿಗೆ ಇಲಾಖೆಯು ದಾಖಲಿಸುತ್ತಿದ್ದಾಗ್ಯೂ ಸಹ, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಸಾರ್ವಜನಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕೂಡಲೇ ಪರಿಣಾಮಕಾರಿಯಾದ ಕಾರ್ಯ ಯೋಜನೆ ರೂಪಿಸಿ ತಪ್ಪಿತಸ್ಥ ಆಟೋ ಚಾಲಕರ/ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕೆಂದು ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಬೈಕ್‌ ಟ್ಯಾಕ್ಸಿ ನಿಷೇಧಿಸುವ ಅಧಿಕಾರವಿಲ್ಲ

ಮೋಟಾರ ವಾಹನ ಕಾಯ್ದೆಯಲ್ಲಿ ಸಾರಿಗೆ ವಾಹನಗಳನ್ನಾಗಿ ದ್ವಿಚಕ್ರ ವಾಹನ ನೋಂದಾಯಿಸಲು ಅವಕಾಶವಿರುವಾಗ ಬೈಕ್‌ ಟ್ಯಾಕ್ಸಿಯನ್ನು ನೋಂದಾಯಿಸುವುದಿಲ್ಲ ಮತ್ತು ಬೈಕ್‌ ಟ್ಯಾಕ್ಸಿಗೆ ಕ್ಯಾರಿಯೇಜ್‌ ಪರವಾನಗಿಗೆ ಅನುಮತಿ ನೀಡುವುದಿಲ್ಲವೆಂದು ರಾಜ್ಯ ಸರ್ಕಾರ ಹೇಳಲಾಗದು ಎಂದು ಬೈಕ್‌ ಮಾಲೀಕ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು. ಬೈಕ್‌ ಟ್ಯಾಕ್ಸಿ ನಿಷೇಧಿಸಿ ಹೈಕೋರ್ಟ್‌ ಏಕಸದಸ್ಯ ಪೀಠ ಮಾಡಿರುವ ಆದೇಶ ಪ್ರಶ್ನಿಸಿ ಓಲಾ, ಉಬರ್‌ ಮತ್ತು ರ‍್ಯಾಪಿಡೊ ಕಂಪನಿಗಳು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ರಾಜ್ಯ ಸರ್ಕಾರ ನೇಮಕ ಮಾಡಿದ್ದ ಸಮಿತಿಯು ಬೆಂಗಳೂರಿಗೆ ಬೈಕ್‌ ಟ್ಯಾಕ್ಸಿ ಅಗತ್ಯವಿಲ್ಲ ಎಂದಿದೆ. ಆದರೆ, ಒಂದು ಲಕ್ಷಕ್ಕೂ ಅಧಿಕ ಬೈಕ್‌ ಟ್ಯಾಕ್ಸಿಗಳು ಸೇವೆ ನೀಡುತ್ತಿದ್ದು, ಜನರು ಅವುಗಳನ್ನು ಬಳಕೆ ಮಾಡುತ್ತಿದ್ದಾರೆ. ಬೈಕ್‌ ಟ್ಯಾಕ್ಸಿ ಸಾರಿಗೆ ಕ್ಯಾರೇಜ್‌ಗೆ ಕಾನೂನಿನಲ್ಲಿ ಯಾವುದೇ ನಿರ್ಬಂಧವಿಲ್ಲ. ದೇಶದ 11 ರಾಜ್ಯಗಳಲ್ಲಿ ಅಲ್ಲಿನ ಕಾನೂನಿಗೆ ಅನುಗುಣವಾಗಿ ಬೈಕ್‌ ಟ್ಯಾಕ್ಸಿ ಸೇವೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!