
ವಿಧಾನಪರಿಷತ್(ಫೆ.15): ವಾರ್ಷಿಕ ಲಕ್ಷಾಂತರ ಭಕ್ತರು ಬರುವ ದೇವಸ್ಥಾನಗಳ ಅಭಿವೃದ್ಧಿಗಾಗಿ ಆಯಾ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ಕುರಿತಂತೆ ಕಾಂಗ್ರೆಸ್‌ನ ಎಸ್. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ 12ರಿಂದ 15 ಲಕ್ಷ ಭಕ್ತರು ಬರುತ್ತಾರೆ. ಅಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
HSRP ನಂಬರ್ ಪ್ಲೇಟ್ ಅಳವಡಿಕೆ, ಗುಡ್ ನ್ಯೂಸ್ ಕೊಟ್ಟು ಮತ್ತೆ ವಿಸ್ತರಣೆ ಘೋಷಿಸಿದ ಸಚಿವ ರಾಮಲಿಂಗಾ ರೆಡ್ಡಿ
ಪ್ರಮುಖವಾಗಿ ವಾಹನ ನಿಲುಗಡೆಗೆ ಸ್ಥಳಾವಕಾಶ, ದಾಸೋಹ ಭವನ ನಿರ್ಮಾಣ, ರಸ್ತೆ ಅಗಲೀಕರಣಕ್ಕೆ ಯೋಜನೆ ರೂಪಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ವಾರ್ಷಿಕ ಲಕ್ಷಾಂತರ ಭಕ್ತರು ಬರುವ ಮೈಸೂರಿನ ಚಾಮುಂಡೇಶ್ವರಿ, ಸವದತ್ತಿ ಯಲ್ಲಮ್ಮ ಸೇರಿದಂತೆ ಇನ್ನಿತರ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ