
ಬೆಂಗಳೂರು(ಮಾ.08): ಹಾಲಿ ಕಾರ್ಯನಿರ್ವಹಿಸುತ್ತಿರುವ ನೌಕರರಂತೆಯೇ 2020ರ ಜ. 1ರಿಂದ2023 ರಫೆ.28ರವರೆಗೆ ನಿವೃತ್ತ ಹಾಗೂ ಸಂಸ್ಥೆಯಿಂದ ಹೊರಹೋಗಿರುವ ಎಲ್ಲನೌಕರರಿಗೂ ಶೇ.15ರಷ್ಟು ವೇತನ ಹೆಚ್ಚಳ ಬಾಕಿ ನೀಡುವುದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಒಪ್ಪಿಗೆ ಸೂಚಿಸಿದ್ದಾರೆ.
ಸಾರಿಗೆ ನಿಗಮಗಳ ನೌಕರರ ಸಮಸ್ಯೆಗಳ ಕುರಿತು ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪ್ರಮುಖರೊಂದಿಗೆ ರಾಮಲಿಂಗಾರೆಡ್ಡಿ ಗುರುವಾರ ಸಭೆ ನಡೆಸಿದರು.
ಮುಂದಿನ 4 ತಿಂಗಳಿನಲ್ಲಿ ಕಲ್ಯಾಣ ಸಾರಿಗೆಗೆ 485 ಹೊಸ ಬಸ್: ಸಚಿವ ರಾಮಲಿಂಗಾರೆಡ್ಡಿ
ಸಭೆಯಲ್ಲಿ 2020 ಜ. 1ರಿಂದ 2023ರ ಫೆ. 28 ರವರೆಗೆ ನಿವೃತ್ತರಾದ ಮತ್ತು ಸಂಸ್ಥೆಯಿಂದ ಹೊರಹೋದ ಸುಮಾರು 10 ಸಾವಿರ ಮಾಜಿ ನೌಕರರಿಗೂ ಶೇ. 15ರಷ್ಟು ವೇತನ ಹೆಚ್ಚಳ ಬಾಕಿ ಪಾವತಿಸಲು ಒಪ್ಪಿಗೆ ಸೂಚಿಸಲಾಯಿತು. ಅದಕ್ಕಾಗಿ 220 ಕೋಟಿ ರು. ಗಳ ಅವಶ್ಯಕತೆಯಿದೆ. ಈ ಕುರಿತಂತೆ ಆದೇಶ ಹೊರಡಿಸುವಂತೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಸಚಿವರು ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ