
ಬೆಂಗಳೂರು(ಡಿ.11): ವಿಧಾನಪರಿಷತ್‌ನಿಂದ ಅಂಗೀಕರಿಸಲ್ಪಟ್ಟ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕವನ್ನು ಸದನವು ಧ್ವನಿಮತ ಮೂಲಕ ಅಂಗೀಕರಿಸಿತು. ಗುರುವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ವಿಧೇಯಕವನ್ನು ಅಂಗೀಕರಿಸುವಂತೆ ಕೋರಿ ಒಪ್ಪಿಗೆ ಪಡೆದುಕೊಂಡರು.
ಈ ವೇಳೆ ಮಾತನಾಡಿದ ಸೋಮಶೇಖರ್, ವಿಧೇಯಕದಿಂದ ರೈತರಿಗೆ ಯಾವುದೇ ಸಮಸ್ಯೆ ಇಲ್ಲ. ರೈತರು ಎಪಿಎಂಸಿ ಒಳಗೆ ಮತ್ತು ಹೊರಗಡೆಯೂ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ವಿಧೇಯಕದ ಮೂಲಕ ಅವಕಾಶ ನೀಡಲಾಗಿದೆ.
'ಚಾಮರಾಜನಗರ ಉಸ್ತುವಾರಿಯೂ ಎಸ್‌ಟಿಎಸ್‌ಗೆ ನೀಡುವಂತೆ ಜನರ ಆಗ್ರಹ'
ರಾಜ್ಯದ 27 ಜಿಲ್ಲೆಗಳಲ್ಲಿ ಸಭೆ ನಡೆಸಿ ತಿದ್ದುಪಡಿ ಕಾಯ್ದೆಯಿಂದಾಗುವ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದ್ದೇನೆ. ಎಲ್ಲಿಯೂ ಸಮಸ್ಯೆ ಕಂಡುಬಂದಿಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ