ರಾಜ್ಯಸಭೆ ಚುನಾವಣೆ ಫಲಿತಾಂಶದ ವೇಳೆ ಗೆಲುವು ಪಡೆದ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲೇ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿರುವುದು ರಾಜ್ಯಾದ್ಯಂತ ವಿವಾದ ಭುಗಿಲೆದ್ದಿದೆ. ಬಿಜೆಪಿ ನಾಯಕರು ವಿಧಾನಸೌಧ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿ ದೇಶದ್ರೋಹಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ನಡುವೆ ಘೋಷಣೆ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯನಗರ (ಫೆ.28): ರಾಜ್ಯಸಭೆ ಚುನಾವಣೆ ಫಲಿತಾಂಶದ ವೇಳೆ ಗೆಲುವು ಪಡೆದ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲೇ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿರುವುದು ರಾಜ್ಯಾದ್ಯಂತ ವಿವಾದ ಭುಗಿಲೆದ್ದಿದೆ. ಬಿಜೆಪಿ ನಾಯಕರು ವಿಧಾನಸೌಧ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿ ದೇಶದ್ರೋಹಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ನಡುವೆ ಘೋಷಣೆ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಅನ್ನೋದು ನನ್ನ ಗಮನಕ್ಕೆ ಬಂದಿದೆ. ಯಾರೇ ಆಗಲಿ ದೇಶದ್ರೋಹದ ಹೇಳಿಕೆಗಳನ್ನ ಒಪ್ಪೊಲ್ಲ. ಪಾಕ್ ಪರ ಘೊಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಆಗಬೇಕು. ಐ ರಿಪೀಟ್.., ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಆಗಲೇಬೇಕು ಎಂದರು.
ಇನ್ನು ಈ ವಿಚಾರ ಸಂಬಂಧ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ನಾಸಿರ್ ಹುಸೇನ್ ಕೂಗಾಡಿದ್ದರ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ, ಮಾಧ್ಯಮದವರ ಮೇಲೆ ಕೂಗಾಡುವುದು, ನಿಂದಿಸುವುದು ಸರಿಯಲ್ಲ. ಮಾಧ್ಯಮದವರನ್ನ ಗೌರವದಿಂದ ಕಾಣಬೇಕು. ಮಾಧ್ಯಮದವರ ಮೇಲೆ ಆ ರೀತಿ ಮಾಡೋದು ಸರಿಯಲ್ಲ ಎಂದರು.