
ಬೆಳಗಾವಿ (ಆ.26): 'ಎಲ್ಲದಕ್ಕೂ ಉತ್ತರ ಕೊಡೋಕೆ ಆಗೊಲ್ಲ. ಅದು ಸಾರ್ವಜನಿಕ ಹಿತಾಸಕ್ತಿ ವಿಷಯವೇ ಅಲ್ಲ' ಎನ್ನುವ ಮೂಲಕ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ಕೊಟ್ಟಿರುವ ಪ್ರಕರಣ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ ನೀಡಿದರು
ಬೆಳಗಾವಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಕೇಸ್ ಅದು ಆ ಇಲಾಖೆಗೆ ಸಂಬಂಧಿಸಿದ್ದು, ಅದರ ಬಗ್ಗೆ ರಾಜ್ಯದ ಜೊತೆಗೆ ಚರ್ಚೆ ಮಾಡೋ ಅವಶ್ಯಕತೆ ಇಲ್ಲ. ಇದು ಸಾರ್ವಜನಿಕವಾಗಿ ಚರ್ಚೆ ಮಾಡೋ ವಿಷಯವೇ ಅಲ್ಲ. ಇಲಾಖೆಯವರೇ ಪ್ರತಿಕ್ರಿಯೆ ಕೊಡಬೇಕು. ಕ್ರಮ ಜರುಗಿಸಲು ಇಲಾಖೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಇದ್ದಾರೆ. ಅವರೇ ಇದಕ್ಕೆ ಸೃಷ್ಟೀಕರಣ ಕೊಟ್ಟರೆ ಒಳ್ಳೆಯದು ಅದಕ್ಕೊಂದು ಮಹತ್ವ ಇರುತ್ತೆ ಎಂದರು.
ಇನ್ನು ಸಿಎಂ ಬೆನ್ನಿಗೆ ಜಾರಕಿಹೊಳಿ ಬ್ರದರ್ಸ್ ನಿಂತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅದಕ್ಕೂ ಇದಕ್ಕೂ ಏನು ಸಂಬಂಧವಿಲ್ಲ, ಬಹಳ ದಿನಗಳಿಂದ ಬರಬೇಕಿತ್ತು ಬರ್ತಿದ್ದಾರಷ್ಟೇ ಎಂದು ಸಮಜಾಯಿಷಿ ನೀಡಿದರು. ಇನ್ನು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನೂರು ಕೋಟಿ ಆಮಿಷೆ ನೀಡಿದ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸಚಿವರು 'ಅದಕ್ಕೂ ನನಗೆ ಸಂಬಂಧ ಇಲ್ಲ. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರಿಗೆ ಯಾರು ಕಾಂಟ್ಯಾಕ್ಟ್ ಮಾಡಿದ್ದಾರೆ, ನನಗೆ ಗೊತ್ತಿಲ್ಲ. ಅಪರೇಷನ ಕಮಲ್ ವಿಚಾರ, ಮುಗಿದು ಹೋದ ಅಧ್ಯಾಯ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ