ಡಿಸಿಎಂ ಡಿಕೆ ಶಿವಕುಮಾರ ಭೇಟಿ ಮಾಡಿದ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ಸಂಸದ ಡಿಕೆ ಸುರೇಶ್!

By Ravi Janekal  |  First Published Nov 9, 2023, 2:55 PM IST

ಅಭಿವೃದ್ಧಿ ವಿಚಾರವಾಗಿ ಚರ್ಚಿಸಲು ಸಂಸದ ಡಿಕೆ ಸುರೇಶ್ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವ ಸತೀಶ ಜಾರಕಿಹೊಳಿಯವರನ್ನು ಭೇಟಿ ಮಾಡಿದರು. ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಸಂಸದ ಡಿಕೆ ಸುರೇಶ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.


ಬೆಂಗಳೂರು (ನ.9): ಅಭಿವೃದ್ಧಿ ವಿಚಾರವಾಗಿ ಚರ್ಚಿಸಲು ಸಂಸದ ಡಿಕೆ ಸುರೇಶ್ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವ ಸತೀಶ ಜಾರಕಿಹೊಳಿಯವರನ್ನು ಭೇಟಿ ಮಾಡಿದರು. ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಸಂಸದ ಡಿಕೆ ಸುರೇಶ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಸಚಿವ ಸತೀಶ ಜಾರಕಿಹೊಳಿಯವರ ಸರ್ಕಾರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದೆರಡು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆ ಗುಂಡಿಗಳು ಬಿದ್ದು ದೊಡ್ಡ ಸಮಸ್ಯೆ ಆಗಿದೆ. ಹೀಗಾಗಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿ ಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಕೇಳುವುದಕ್ಕೆ ಬಂದಿದ್ದೆ. ಸಚಿವರು ಭೇಟಿಗೆ ಸಕಾರಾತ್ಮಕ ಸ್ಪಂದಿಸಿದ್ದಾರೆ. ಸರ್ಕಾರ ಅನುಮೋದನೆ ಕೊಟ್ಟ ತಕ್ಷಣ ನನ್ನ ಕ್ಷೇತ್ರಕ್ಕೂ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ ಎಂದರು.

Tap to resize

Latest Videos

ಕೆಪಿಸಿಸಿ ಕಾರ್ಯಾಧ್ಯಕ್ಷರ ಬದಲಾವಣೆ; ಡಿಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು? ಯಾರೆಲ್ಲ ಬದಲಾಗಲಿದ್ದಾರೆ ನೋಡಿ!

ಯಾರೇ ಸಿಎಂ ಸ್ವಾಗತ:

ಸಿಎಂ ಬದಲಾವಣೆ ಕುರಿತು ಚರ್ಚೆ ಜೋರಾಗಿದೆ. ಮುಂದಿನ ಎರಡೂವರೆ ವರ್ಷದ ಬಳಿಕ ಸಿಎಂ ಬದಲಾಗಲಿದ್ದಾರಾ ಎಂಬ  ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೇ ಸಿಎಂ ಆದರೂ ನಾನು ಸ್ವಾಗತ ಮಾಡುತ್ತೇನೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರಬೇಕು ಅಂತ ಆಸೆ ಪಟ್ಟವನು ನಾನು. ಈಗ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ, ಮುಂದಿನ ದಿನಗಳಲ್ಲಿ ನಾನೂ ಸಿಎಂ ಆಕಾಂಕ್ಷಿ ಅಂತ ಸತೀಶ್ ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಯಾರೂ ಆಗಬಾರದು ಎನ್ನುವಂತಿಲ್ಲ. ಶಾಸಕರಾದವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇರುತ್ತೆ, ಮಂತ್ರಿ ಆದವರಿಗೆ ಮುಖ್ಯಮಂತ್ರಿ ಆಗಬೇಕು ಅಂತ ಆಸೆ ಇರುತ್ತೆ ಏನೂ ಇಲ್ಲದವರಿಗೆ ಶಾಸಕರಾಗಬೇಕು ಅಂತ ಆಸೆ ಇರುತ್ತೆ. ಇದೊಂದು ಸೈಕಲ್, ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದರು.

ಬಿಜೆಪಿಯವರಿಗೆ ಆಪರೇಷನ್ ಬಿಟ್ರೆ ಏನು ಗೊತ್ತಿದೆ?

ಬಿಜೆಪಿಯವರು ಆಪರೇಷನ್ ಕಮಲಕ್ಕೆ ಯತ್ನಿಸಿರುವ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದ ಡಿಕೆ ಸುರೇಶ್, ಬಿಜೆಪಿಯವರಿಗೆ ಆಪರೇಷನ್ ಕಮಲ ಮಾಡುವುದು ಬಿಟ್ಟರೆ ಇನ್ನೇನಾದರೂ ಗೊತ್ತಿದೆಯಾ? ಆಪರೇಷನ್ ಒಂದೇ ಗೊತ್ತಿರೋದು ಎಂದು ಕಿಡಿಕಾರಿದರು.

ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಬಂದ್ರೂ ಸ್ವಾಗತ: ಗೃಹ ಸಚಿವ ಪರಮೇಶ್ವರ್

ಬಿಜೆಪಿಯವರಿಗೆ ಜನರಿಗೆ ಏನು ಬೇಕೋ ಅದನ್ನು ಮಾಡುವುದು ಗೊತ್ತಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿ ಕೆಲಸ ಇಲ್ಲದೇ ಕೂತಿದ್ದಾರೆ ಇವತ್ತು. ಜನರೇ ತಿರಸ್ಕಾರ ಮಾಡಿದ್ದಾರೆ ಇವರನ್ನು. ಜನರು ಬಿಜೆಪಿ ಮೇಲೆ ನಂಬಿಕೆ ಕಳೆದುಕೊಂಡಾಗ ಈ ತರಹ ಮಾತಾಡೋದು ಸರ್ವೆ ಸಾಮಾನ್ಯ. ಜನರ ಮನಸ್ಸನ್ನು ಬೇರೆ ಕಡೆಗೆ ತಿರುಗಿಸಬೇಕು ಅಂದ್ರೆ ಬಿಜೆಪಿ ಆಪರೇಷನ್ ಹೆಸರೇ ಹೇಳಬೇಕು.  ನಮ್ಮ ಗ್ಯಾರಂಟಿ ಗಳಿಂದ ಅವರಿಗೆ ಆಘಾತ ಆಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳ್ತಿದ್ದಾರೆ. ವಿಪಕ್ಷ ನಾಯಕರು ಇದ್ದಾರೋ ಇಲ್ವೋ ಅವರಿಗೆ ಬಿಟ್ಟಿದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು ನಮ್ಮ ತಟ್ಟೆಯಲ್ಲಿ ಜಿರಳೆ ಹುಡಿಕಿದೆ ನಾವೇನು ಮಾಡೋಕಾಗತ್ತೆ? ಎಂದು ವ್ಯಂಗ್ಯ ಮಾಡಿದರು.

click me!