ಪಾಕ್‌ ವಿರುದ್ಧ ಯುದ್ಧ ನಿಂತಿದೆ, ಉಗ್ರರ ದಾಳಿಗೆ ಬಲಿಯಾದವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ: ಜಾರಕಿಹೊಳಿ

Published : May 14, 2025, 07:17 AM IST
ಪಾಕ್‌ ವಿರುದ್ಧ ಯುದ್ಧ ನಿಂತಿದೆ, ಉಗ್ರರ ದಾಳಿಗೆ ಬಲಿಯಾದವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ: ಜಾರಕಿಹೊಳಿ

ಸಾರಾಂಶ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಬಲಿಯಾದವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಭಾರತ- ಪಾಕಿಸ್ತಾನ್‌ ನಡುವೆ ಕದನ ವಿರಾಮ ಹಿನ್ನೆಲೆಯಲ್ಲಿ ಯುದ್ಧ ಸ್ಥಗಿತಗೊಂಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.


ಬೆಳಗಾವಿ (ಮೇ.14): ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಬಲಿಯಾದವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಭಾರತ- ಪಾಕಿಸ್ತಾನ್‌ ನಡುವೆ ಕದನ ವಿರಾಮ ಹಿನ್ನೆಲೆಯಲ್ಲಿ ಯುದ್ಧ ಸ್ಥಗಿತಗೊಂಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಏನು ಮಾಡಬೇಕು ಎಂಬ ಚಿಂತನೆ ಮಾಡಬೇಕು. ಪೂರ್ಣ ಪ್ರಮಾಣದ ಯುದ್ಧ ಆಗುತ್ತದೆ ಎಂದು ಎಲ್ಲರೂ ನಿರೀಕ್ಷೆ ಮಾಡಿದ್ದರು. ಆದರೆ, ಅದು ಹುಸಿಯಾಗಿದೆ. ಇಷ್ಟಕ್ಕೆ ಸ್ಥಗಿತಗೊಂಡಿದೆ. ಮುಂದೆ ದೇಶವನ್ನು ಯಾವ ರೀತಿ ಕಟ್ಟಬೇಕು ಎನ್ನುವುದು ಮುಂದಿರುವ ಸವಾಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಪಾಕ್ ವಿರುದ್ಧ ಯುದ್ಧ ಆರಂಭಿಸಿದ ಗುರಿ ಈಡೇರಿತೇ? : ಕೃಷ್ಣ ಬೈರೇಗೌಡ ಪ್ರಶ್ನೆ

1971ರಲ್ಲಿ ಇಂದಿರಾ ಗಾಂಧಿ ಮಾದರಿಯಲ್ಲಿ ಪಾಕ್ ಕಟ್ಟಿ ಹಾಕುವ ವಿಚಾರಕ್ಕೆ ಬಿಜೆಪಿಯವರೇ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಬಿಜೆಪಿಯವರು ಸೇರಿ ಎಲ್ಲರೂ ಯುದ್ಧ ನಿಲ್ಲಿಸಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಈಗ ಯುದ್ಧ ನಿಂತಿದೆ. ಹಾಗಾಗಿ, ಏನೂ ಮಾಡಲು ಆಗುವುದಿಲ್ಲ ಎಂದರು.

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿರುವ ವಿಚಾರಕ್ಕೆ ಅದು ಆಂತರಿಕ ವಿಚಾರ. ಟ್ರಂಪ್ ಯಾಕೆ ಮಧ್ಯಸ್ಥಿಕೆ ವಹಿಸಿದರು ಮತ್ತು ಅವರಿಗೆ ಯಾರು ಮನವಿ ಮಾಡಿಕೊಂಡರು ಎಂಬ ವಿಚಾರ ಒಂದು ದಿನ ಹೊರಗೆ ಬರುತ್ತದೆ. ಅಲ್ಲಿಯವರೆಗೆ ನಾವೆಲ್ಲ ಕಾಯಬೇಕು ಎಂದರು.

ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದ ಮಸೀದಿಯ ಕೆಳ ಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಸುಮೋಟೋ ಕೇಸ್‌ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಬೇಧಿಸುತ್ತಾರೆ. ಜಿಲ್ಲೆಯಲ್ಲಿ ಧಾರ್ಮಿಕ ವಿಚಾರಗಳಲ್ಲಿ ಪದೇ ಪದೇ ಕಾನೂನು ಉಲ್ಲಂಘನೆಗಳು ಆಗುತ್ತಿರುವುದು ನನ್ನ ಗಮನಕ್ಕೂ ಬಂದಿದೆ. ಈ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಳೊಂದಿಗೆ ಚರ್ಚಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ದನ್ನೂ ಓದಿ: ಭಾರತ-ಪಾಕ್ ಕದನ ವಿರಾಮ: ಸರ್ವಪಕ್ಷಗಳ ಸಭೆ ಕರೆಯಲು ಖರ್ಗೆ ಆಗ್ರಹ

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿರುವ ವಿಚಾರಕ್ಕೆ ಅದು ಅಂತಾರಾಷ್ಟ್ರೀಯ ವಿಚಾರ. ಟ್ರಂಪ್ ಯಾಕೆ ಮಧ್ಯಸ್ಥಿಕೆ ವಹಿಸಿದರು ಮತ್ತು ಅವರಿಗೆ ಯಾರು ಮನವಿ ಮಾಡಿಕೊಂಡರು ಎಂಬ ವಿಚಾರ ಒಂದು ದಿನ ಹೊರಗೆ ಬರುತ್ತದೆ. ಅಲ್ಲಿಯವರೆಗೆ ನಾವೆಲ್ಲ ಕಾಯಬೇಕು.

-ಸತೀಶ ಜಾರಕಿಹೊಳಿ, ಸಚಿವರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ!
ಬೆಂಗಳೂರಲ್ಲಿ ಇಂದು ಇನ್ನಷ್ಟು ಚಳಿ; ತಾಪಮಾನ ಕುಸಿತ, ಈ ಮೂರು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!