ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಲೋಪ ಆಗಿಲ್ಲ, ತಾಂತ್ರಿಕ ಸಮಸ್ಯೆ ಎಂದ ತಂಗಡಗಿ

Kannadaprabha News   | Kannada Prabha
Published : Dec 22, 2025, 07:13 AM ISTUpdated : Dec 22, 2025, 07:14 AM IST
Minister Shivaraj tangadagi on guarantee scheme at karatagi

ಸಾರಾಂಶ

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಹಗರಣವಾಗಿಲ್ಲ ಮತ್ತು ಹಣ ಪಾವತಿಯಲ್ಲಿನ ವಿಳಂಬಕ್ಕೆ ಹಣಕಾಸು ಇಲಾಖೆಯ ತಾಂತ್ರಿಕ ತೊಂದರೆಯೇ ಕಾರಣ ಎಂದು ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ. ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಬಿಜೆಪಿ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಕಾರಟಗಿ (ಡಿ.22): ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಲೋಪವಾಗಿಲ್ಲ, ಇನ್ನೂ ಗೃಹಲಕ್ಷ್ಮಿ ಯೋಜನೆಯಲ್ಲಿ ಹಗರಣ ಆಗಲು ಸಾಧ್ಯವಿಲ್ಲ. ಬಿಜೆಪಿಯವರಿಗೆ ಮಾಡಲು ಯಾವುದೇ ಕೆಲಸವಿಲ್ಲದಕ್ಕೆ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು. 

ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರತಿ ತಿಂಗಳ ಗೃಹಲಕ್ಷ್ಮೀ ಹಣ ಡಿಬಿಟಿ ಮುಖಾಂತರ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಯಾಗುತ್ತಿದೆ ಎಂದರು.

ಹಣಕಾಸು ಇಲಾಖೆಯಲ್ಲಿ ತಾಂತ್ರಿಕ ತೊಂದರೆ:

ಫೆಬ್ರುವರಿ ಮತ್ತು ಮಾರ್ಚ್ ಈ ಎರಡು ತಿಂಗಳ ಬಾಬತ್ತು ಪಾವತಿಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಹಣಕಾಸು ಇಲಾಖೆಯಲ್ಲಿ ತಾಂತ್ರಿಕ ತೊಂದರೆಯಾಗಿದೆ. ಸಮಸ್ಯೆ ಸರಿ ಮಾಡಿ ಹಣ ಸಂದಾಯ ಮಾಡುವ ಕೆಲಸ ಮಾಡುತ್ತಾರೆ ಎಂದು ಸಮಜಾಯಿಷಿ ನೀಡಿದರು. 

ಬಿಜೆಪಿಯವರಿಗೆ ಯಾವ ಕಮಾಂಡ್‌ ಇದೆ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಏನು ಕೆಲಸವಿದೆ? ಬೇರೆ ಪಕ್ಷದವರ ಹೈಮಾಂಡ್‌ ವಿಷಯ ಇವರಿಗೆ ಯಾಕೆ ಎಂದು ಪ್ರಶ್ನೆ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಲೋಪ ಆಗಿಲ್ಲ, ತಾಂತ್ರಿಕ ಸಮಸ್ಯೆ ಎಂದ ತಂಗಡಗಿ
ತಿಗಣೆ ಕಾಟದಿಂದ ಬೇಸತ್ತ ಬೆಂಗಳೂರು ವಿವಿ ವಿದ್ಯಾರ್ಥಿನಿಯರಿಂದ ರಸ್ತೆ ತಡೆದು ಪ್ರತಿಭಟನೆ, ಆಕ್ರೋಶ