ಸಚಿವ ಸಂಪುಟದ ಭವಿಷ್ಯ: ಹಣೆಬರಹದಲ್ಲಿ ಬರೆದಿರೋದನ್ನ ತಪ್ಪಿಸೋಕೆ ಆಗೋಲ್ಲ ಎಂದ ತಂಗಡಗಿ

Kannadaprabha News, Ravi Janekal |   | Kannada Prabha
Published : Oct 27, 2025, 06:22 AM IST
Karnataka cabinet reshuffle

ಸಾರಾಂಶ

ಯಾರನ್ನೂ ಮಂತ್ರಿ ಮಂಡಲದಿಂದ ತೆಗೆದುಹಾಕಲು ಸಾಧ್ಯವಿಲ್ಲ, ಎಲ್ಲವೂ ಅವರವರ ಹಣೆಬರಹದಂತೆ ನಡೆಯುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ಸೂಚನೆ ಇರುವುದರಿಂದ ಪ್ರತಿಕ್ರಿಯಿಸುವುದಿಲ್ಲ ಎಂದ ಅವರು, ರಾಜ್ಯದಲ್ಲಿ ಯಾವುದೇ ಸಂಪುಟ ಪುನಾರಚನೆ ಇಲ್ಲ ಎಂದರು.

ಕೊಪ್ಪಳ (ಅ.27): ಯಾರನ್ನು ಸಹ ಮಂತ್ರಿ ಮಂಡಲದಿಂದ ತಪ್ಪಿಸಲು ಆಗುವುದಿಲ್ಲ. ಯಾರ್ಯಾರ ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ, ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ಸಿಎಂ ಅವರ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದರು. 

ಇದನ್ನೂ ಓದಿ: 'ಸರ್ಕಾರ ಬಂದಾಗಲೇ ನಿರ್ಧಾರ ಆಗಿತ್ತು..' ಸಂಪುಟ ಪುನಾರಚನೆ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಸ್ಫೋಟಕ ಹೇಳಿಕೆ!

ಸಿಎಂ ಬದಲಾವಣೆ ಬಗ್ಗೆ ನಾನು ಮಾತನಾಡೋಲ್ಲ:

‘ಸಿಎಂ ಬದಲಾವಣೆ ಸೇರಿದಂತೆ ರಾಜಕೀಯವಾಗಿ ಯಾರೊಬ್ಬರೂ ಹೇಳಿಕೆ ನೀಡದಂತೆ ಹೈಕಮಾಂಡ್ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ. ನಾನು ಹೈಕಮಾಂಡ್ ಸೂಚನೆ ಪಾಲಿಸುತ್ತೇನೆ. ಹೀಗಾಗಿ ಈ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು. 

‘ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೂ ಇಲ್ಲ, ರಾಜ್ಯ ಸಚಿವ ಸಂಪುಟದ ಪುನಾರಚನೆ ಹಾಗೂ ಬದಲಾವಣೆ ಏನೂ ಇಲ್ಲ’ ಎಂದು ಇದೇ ವೇಳೆ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Namma Metro Update: ಕೆಂಗೇರಿ ಮೆಟ್ರೋ ದುರಂತ; ಮೃತರ ಗುರುತು ಪತ್ತೆ, ಸಂಚಾರ ಸಹಜ ಸ್ಥಿತಿಗೆ!
ಬಾಗಲಕೋಟೆ: ದಾಸೋಹ ಚಕ್ರವರ್ತಿ, ಬಂಡಿಗಣಿ ಮಠದ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ!