
ದಾವಣಗೆರೆ, (ಸೆ.16): ಜನರ ಪ್ರಾಣ ರಕ್ಷಣೆ ಮಾಡುವಲ್ಲಿ ಹೋರಾಟ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕರೊಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ಜಗಳೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ಅಜ್ಮತ್ (49) ಅವರು ಕೋವಿಡ್‌ನಿಂದ ಬುಧವಾರ ಮೃತಪಟ್ಟಿದ್ದಾರೆ.
ಐದು ದಿನಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಅಜ್ಮತ್ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಇರುವುದರಿಂದ ಶ್ವಾಸಕೋಶದ ತೀವ್ರ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ, ಇಂದು (ಬುಧವಾರ) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕುಮಾರಸ್ವಾಮಿ ಅಪ್ಪಟ ಅಭಿಮಾನಿ ಸಾವು, ಎಚ್‌ಡಿಕೆ ವ್ಯಕ್ತಪಡಿಸಿದ್ರು ನೋವು..!
ಶ್ರೀರಾಮುಲು ಸಂತಾಪ
ಅಜ್ಮತ್ ಸಾವಿಗೆ ಆರೋಗ್ಯ ಸಚಿವ ಶ್ರೀರಾಮು ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕೋವಿಡ್ ವಿರುದ್ಧದ ಸಮರದಲ್ಲಿ ಅಜ್ಮತ್ ಅವರು ಮಂಚೂಣಿ ಹೋರಾಟಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂತಹ ನಿಸ್ವಾರ್ಥ ಸೇನಾನಿಗಳು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವುದರಿಂದಲೇ ಸಾವಿರಾರು ರೋಗಿಗಳ ಜೀವ ಉಳಿಯುತ್ತಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖತಡೆಯುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಅಜ್ಮತ್ ಅವರ ಕುಟುಂಬಕ್ಕೆ ಸಿಗಬೇಕಾದ ಪರಿಹಾರ ಮತ್ತು ಸವಲತ್ತುಗಳನ್ನು ಶೀಘ್ರವೇ ತಲುಪಿಸಲಾಗುವುದು ಎಂದೂ ಅವರು ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ