ದಾವಣಗೆರೆ ವೀರಭದ್ರೇಶ್ವರ ಜಾತ್ರೆ: ಪುತ್ರನ ಗೆಲುವಿಗಾಗಿ ಕೆಂಡ ಹಾಯ್ದ ಸಚಿವ ಮಲ್ಲಿಕಾರ್ಜುನ

Kannadaprabha News   | Kannada Prabha
Published : Apr 02, 2026, 05:20 AM IST
Minister SS Mallikarjun walks on hot coals in Davanagere veerabhadreshwar jatre for son s victory

ಸಾರಾಂಶ

ದಾವಣಗೆರೆಯ ಹಳೆಪೇಟೆ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು ಮತ್ತು ಶ್ರೇಷ್ಠ ಎಂ.ಶಾಮನೂರು ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸಿದರು

ದಾವಣಗೆರೆ (ಏ.2): ದಕ್ಷಿಣ ಕ್ಷೇತ್ರದ ಚುನಾವಣೆ ಪ್ರಚಾರ, ಸರಣಿ ಸಭೆಗಳ ಮಧ್ಯೆಯೂ ದಾವಣಗೆರೆಯ ಹಳೆಪೇಟೆ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು, ಶ್ರೇಷ್ಠ ಎಂ.ಶಾಮನೂರು ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸಿದರು.

ನಗರದ ಹಳೆಪೇಟೆ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪ್ರತಿ ವರ್ಷ ಶಾಮನೂರು ಕುಟುಂಬದ ಸದಸ್ಯರು ಕೆಂಡ ಹಾಯುವ ಮೂಲಕ ಭಕ್ತಿ ಸಮರ್ಪಿಸುತ್ತಾ ಬಂದಿದ್ದಾರೆ. ಅದೇ ರೀತಿ ಬುಧವಾರ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ತಮ್ಮ ಪುತ್ರನ ಗೆಲುವಿನ ಹರಕೆ ಹೊತ್ತ ಎಸ್‌.ಎಸ್‌. ಮಲ್ಲಿಕಾರ್ಜುನ ಕೆಂಡ ತುಳಿದರು. ಪುತ್ರಿ ಡಾ.ಶ್ರೇಷ್ಠ ಸಹ ಸಹೋದರ ಸಮರ್ಥನ ಗೆಲುವಿಗಾಗಿ ಕೆಂಡ ತುಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಜಾತ್ರೆ ಅಂಗವಾಗಿ ಪ್ರತಿ ವರ್ಷ ತಾವು, ತಮ್ಮ ಕುಟುಂಬ ಸದಸ್ಯರು ಚಿಕ್ಕಂದಿನಿಂದಲೂ ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸುತ್ತಿದ್ದೇವೆ. ಇದರಲ್ಲಿ ವಿಶೇಷವೇನೂ ಇಲ್ಲ. ಎಲ್ಲ ಭಕ್ತರಂತೆ ವೀರಭದ್ರೇಶ್ವರ ಸ್ವಾಮಿ ದರ್ಶನವನ್ನೂ ಪಡೆದಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka auto LPG shortage: ನಿಲ್ಲದ ಯುದ್ಧ । ಮನೆ, ಹೋಟೆಲ್‌ ಗ್ಯಾಸ್‌ ಆಯ್ತು ಕೊರತೆ ಬಳಿಕ ಈಗ ಆಟೋ ಗ್ಯಾಸ್‌ ಟ್ರಬಲ್‌!
ಕಾಂಗ್ರೆಸ್ ಅಧಿಕಾರದಿಂದ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ