APMC ಕಾಯ್ದೆಯಿಂದ ರೈತರಿಗೆ ಅನುಕೂಲದ ಬಗ್ಗೆ ವಿವರಿಸಿದ ಸಚಿವ ಸೋಮಶೇಖರ್

Published : Sep 23, 2020, 04:29 PM ISTUpdated : Sep 23, 2020, 04:33 PM IST
APMC ಕಾಯ್ದೆಯಿಂದ ರೈತರಿಗೆ ಅನುಕೂಲದ ಬಗ್ಗೆ ವಿವರಿಸಿದ ಸಚಿವ ಸೋಮಶೇಖರ್

ಸಾರಾಂಶ

ಎಪಿಎಂಸಿ ಕಾಯ್ದೆ ವಿರುದ್ಧ ರೈತರು ಬೀದಿಗಿಳಿದು ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಇದರ ನಡುವೆ ಸಹಕಾರ ಸಚಿವರು ಎಪಿಎಂಸಿ ಕಾಯ್ದೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು, (ಸೆ.23): ಎಪಿಎಂಸಿ ಕಾಯ್ದೆ ರೈತರಿಗೆ ಉಪಕಾರಿಯಾಗಿದೆ. ಕರ್ನಾಟಕದಲ್ಲಿ 162 ಎಪಿಎಂಸಿಗಳಿದ್ದು, ಇವುಗಳೂ ಸೇರಿದಂತೆ ರೈತರು ರಾಜ್ಯದ ಯಾವುದೇ ಭಾಗದಲ್ಲಿ ಬೇಕಾದರೂ ಸಹ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದು. ಆದರೆ, ವಿರೋಧ ಪಕ್ಷದವರಿಂದ ಜನರ ದಾರಿ ತಪ್ಪಿಸುವ ಕೆಲಸವಾಗುತ್ತಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು,  ಈ ಕಾಯ್ದೆಯಿಂದ ಎಪಿಎಂಸಿಗೆ ಯಾವುದೇ ಧಕ್ಕೆ ಇಲ್ಲ. ಮೊದಲು 1 ರೂ. ಸೆಸ್ ನಿಗದಿ ಮಾಡಿದ್ದೆವು. ಕೊನೆಗೂ ದರವೂ ಹೆಚ್ಚಾಯಿತು ಎಂಬ ಮನವಿಗಳು ಬಂದ ಹಿನ್ನೆಲೆಯಲ್ಲಿ ನಾವು ಸಂಪುಟದಲ್ಲಿ ಚರ್ಚೆ ನಡೆಸಿ 35 ಪೈಸೆಗೆ ನಿಗದಿ ಮಾಡಿದೆವು. ಇಷ್ಟಾದರೂ ಎಪಿಎಂಸಿಗೆ ವರ್ಷಕ್ಕೆ 120 ಕೋಟಿ ರೂ. ಆದಾಯ ಬರುತ್ತದೆ. ಇದರಿಂದ ವ್ಯವಸ್ಥೆ ಮೇಲೆ ಯಾವುದೇ ಪರಿಣಾಮ ಬೀರದು. ಅಲ್ಲದೆ, ಎಪಿಎಂಸಿಯ ಅಧಿಕಾರ ಮೊಟುಕುಗೊಳ್ಳುವುದಿಲ್ಲ, ಇದನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸುಗ್ರಿವಾಜ್ಞೆ ಹಿಂಪಡೆಯಿರಿ, ಇಲ್ಲ ಉಗ್ರ ಹೋರಾಟ ಎದುರಿಸಿ: ಸರ್ಕಾರಕ್ಕೆ ರೈತರ ವಾರ್ನಿಂಗ್

ಕೇಂದ್ರ ಸರ್ಕಾರ ಜಾರಿಗೆ ತಂದ ಕಾಯ್ದೆಯನ್ನು ಸಚಿವನಾಗಿ ನಾನು ಸ್ವಾಗತಿಸುತ್ತೇನೆ. ಇದು ರೈತರಿಗೆ ಅನುಕೂಲವಾಗುವ ಕಾನೂನೇ ವಿನಹ ಯಾವುದೇ ತೊಂದರೆಯಾಗದು . ಈ ಕಾಯ್ದೆ ಬರುವುದಕ್ಕೆ ಮುಂಚೆ 50ಕ್ಕೂ ಹೆಚ್ಚು ಮಲ್ಟಿ ನ್ಯಾಷನಲ್ ಕಂಪನಿಗಳಿಗೆ ಮಾರಾಟ ಮಾಡುವ ಅವಕಾಶವನ್ನು ಈ ಹಿಂದಿನ ಸರ್ಕಾರವೇ ಅನುಮತಿ ಕೊಟ್ಟಿತ್ತು. ಆದರೆ, ಅದರಿಂದಲೂ ರೈತರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಈಗಿನ ನೂತನ ಕಾಯ್ದೆಯಿಂದ ಪೈಪೋಟಿ ಏರ್ಪಟ್ಟು ರೈತರಿಗೇ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಸ್ಥಳೀಯ ಎಪಿಎಂಸಿಗೆ ಅಧಿಕಾರ ಇಲ್ಲದಿದ್ದರೂ ರಾಜ್ಯ ಎಪಿಎಂಸಿ ಬೋರ್ಡ್ ಗೆ ಸಂಪೂರ್ಣ ಅಧಿಕಾರ ಇದೆ. ಹೀಗಾಗಿ ಮಲ್ಟಿ ನ್ಯಾಷನಲ್ ಕಂಪನಿಗಳು ಅಕ್ರಮ ಎಸಗುತ್ತಿದ್ದರೆ, ಹಣವನ್ನು ರೈತರಿಗೆ ಸರಿಯಾಗಿ ನೀಡದಿದ್ದರೆ ದೂರು ಕೊಟ್ಟರೆ ಅಂಥವರ ಪರವಾನಗಿಯನ್ನೇ ರದ್ದುಪಡಿಸುತ್ತೇವೆ ಎಂದು ತಿಳಿಸಿದರು.

ರೈತರ ಪ್ರತಿಭಟನೆ ಬಗ್ಗೆ ಸರ್ಕಾರ ಸಹ ಗಮನಹರಿಸುತ್ತಿದೆ. ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಕೊಡುವಂತೆ ಮುಖ್ಯಮಂತ್ರಿಗಳು ಸಹ ತಿಳಿಸಿದ್ದಾರೆ. ಹೀಗಾಗಿ ನಾನೂ ಸಹ ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ