ವಿಶ್ವವಿಖ್ಯಾತ ಮೈಸೂರು ದಸರಾ: ಡೋಲು ಬಾರಿಸಿ, ವೀರಗಾಸೆ ಕುಣಿದ ಸಚಿವ ಸೋಮಶೇಖರ್‌

Suvarna News   | Asianet News
Published : Oct 15, 2021, 12:31 PM ISTUpdated : Oct 15, 2021, 02:06 PM IST
ವಿಶ್ವವಿಖ್ಯಾತ ಮೈಸೂರು ದಸರಾ: ಡೋಲು ಬಾರಿಸಿ, ವೀರಗಾಸೆ ಕುಣಿದ ಸಚಿವ ಸೋಮಶೇಖರ್‌

ಸಾರಾಂಶ

*   ದೂರದರ್ಶನದಲ್ಲಿ ಜಂಬೂ ಸವಾರಿ ನೇರಪ್ರಸಾರ *   ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶ  *   ಅರಮನೆ ಆವರಣದಲ್ಲಿ ಹಬ್ಬದ ಸಂಭ್ರಮ 

ಮೈಸೂರು(ಅ.15):  ಚಾಮುಂಡೇಶ್ವರಿ(Chamundeshwari Devi) ಉತ್ಸವ ಮೂರ್ತಿಯನ್ನು ಅರಮನೆಗೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಸಚಿವ ಎಸ್.ಟಿ.ಸೋಮಶೇಖರ್(ST Somashekhar) ಡೋಲು ಬಡಿದು, ಕಂಸಾಳೆಯಾಡಿ, ಕಲಾವಿದರೊಂದಿಗೆ ವೀರಗಾಸೆ ಕುಣಿತ ಕುಣಿಯುವ ಮೂಲಕ ಗಮನ ಸೆಳೆದಿದ್ದಾರೆ. 

ಆರಮನೆ ಆವರಣದಲ್ಲಿ ನೆರೆದಿದ್ದ ಕಲಾತಂಡಗಳ ಜೊತೆ ಕಲಾವಿದರಂತೆಯೇ ಡೋಲು ಬಾರಿಸಿದರು. ವೀರಗಾಸೆ ಕುಣಿತ ಮಾಡುವ ಕಲಾವಿದರನ್ನು ಹುರಿದುಂಬಿಸುವುದರ ಜೊತೆಗೆ ತಮ್ಮಲ್ಲಿನ ಜಾನಪದ ಕಲೆಯನ್ನು(Folk Art) ಕೂಡ ಪ್ರದರ್ಶಿಸಿದರು. 

 

ಪೂಜಾ ಕುಣಿತ, ಗೊಂಬೆ ಕುಣಿತ ನೋಡಿದ ಸಚಿವರು ಅವರೊಂದಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ಸಚಿವರ ಕುಣಿತ, ಡೋಲು ಬಡಿತವನ್ನು ಕಂಡ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಕೂಡ ತಮಟೆ ಬಾರಿಸಿದರು. ಸಚಿವರೊಂದಿಗೆ ಮೂಡಾ ಅಧ್ಯಕ್ಷ ರಾಜೀವ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ ಅಧ್ಯಕ್ಷ ಅಪ್ಪಣ್ಣ ಸೇರಿದಂತೆ ಹಲವು ಮುಖಂಡರು ಹೆಜ್ಜೆ ಹಾಕಿದರು. ಇದೇ ವೇಳೆ ಗ್ರಾಮೀಣ ಕಲಾ ತಂಡಗಳನ್ನು ವೀಕ್ಷಿಸಿ, ಅವರ ಕಲೆಯನ್ನು ಪ್ರೋತ್ಸಾಹಿಸಿದರು. ಬೆಳಗ್ಗೆ 10 ಗಂಟೆಯಿಂದಲೇ ಅರಮನೆ(Palace) ಆವರಣದಲ್ಲಿ ಸಂಭ್ರಮ ಮನೆ ಮಾಡಿತ್ತು. 

ಮೈಸೂರು: ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಲಾವಿದರಿಗೆ ಪ್ರೋತ್ಸಾಹ ನೀಡಬೇಕೆಂದು ಕರೆತರಲಾಗಿದೆ. ಅವರೊಂದಿಗೆ ಹೆಜ್ಜೆ ಹಾಕಲು ಸಾಧ್ಯವಿಲ್ಲ ಆದರೆ ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಲು 1%ನಷ್ಟು ಕುಣಿತ ಮಾಡಲಾಯಿತು ಎಂದರು.

ಚಿನ್ನದ ಅಂಬಾರಿಯಲ್ಲಿ ಮೆರವಣಿಗೆಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಈ ಮೊದಲು ಆಟೋ, ಮೊಬೈಲ್ ವ್ಯಾನ್‌ನಲ್ಲಿ ಕರೆತರಲಾಗುತ್ತಿತ್ತು. ಆದರೆ ಈ ರೀತಿ ದೇವಿಯನ್ನು ಕರೆತರುವುದು ಸರಿಯಲ್ಲ ಎಂದು ಇದೇ ಮೊದಲ ಬಾರಿಗೆ ಉತ್ಸವ ಮೂರ್ತಿಯನ್ನು ಅರಮನೆಗೆ ಮೆರವಣಿಗೆಯಲ್ಲಿ ಕರೆತರುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ನ್ಯಾಯಮೂರ್ತಿಗಳು(Chief Justices), ಮುಖ್ಯಮಂತ್ರಿ(Chief Minister) ಸೇರಿದಂತೆ ಗಣ್ಯಾತಿಗಣ್ಯರು ಜಂಬೂ ಸವಾರಿ ವೀಕ್ಷಣೆ ಮಾಡಲಿದ್ದಾರೆ ಎಂದರು.
ಈ ಬಾರಿ 6 ಸ್ತಬ್ಧ ಚಿತ್ರಗಳು ಸಾಗಲಿವೆ. ಜಂಬೂ ಸವಾರಿಯನ್ನು ದೂರದರ್ಶನ(Television) ನೇರಪ್ರಸಾರ(Live) ಮಾಡಲಿದೆ. ಇದರ ಜೊತೆಗೆ ಫೇಸ್‌ಬುಕ್(Facebook), ಯೂಟ್ಯೂಬ್(YouTube), ವರ್ಚ್ಯುವಲ್ ಮೂಲಕ ಕೂಡ ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.

ಕೋವಿಡ್(Covid19) ನಿಯಮ ಉಲ್ಲಂಘನೆ ಮಾಡದೆ ಸರಳ, ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗಿದೆ. ರಾಜ್ಯದಲ್ಲಿ(Karnataka) ಉತ್ತಮ ಮಳೆ(Rain) ಬೆಳೆಯಾಗಲಿ, ನಾಡು ಸಮೃದ್ಧವಾಗಲಿ ಎಂದು ವಿಜಯದಶಮಿಯ ಈ ದಿನದಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸುತ್ತೇನೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ