
ಬೆಂಗಳೂರು (ಏ.09): ರಾಜ್ಯದಲ್ಲಿ ಸಾರಿಗೆ ಮುಷ್ಕರ ಮುಂದುವರಿದೆ. ಮೂರನೇ ದಿನಕ್ಕೆ ಕಾಲಿಟ್ಟಿದ್ದು ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ನೌಕರರಲ್ಲಿ ಮುಷ್ಕರ ಕೈ ಬಿಡುವಂತೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ 8 ಬೇಡಿಕೆ ಈಡೇರಿಸಿದೆ. ದಯವಿಟ್ಟು ಮುಷ್ಕರ ಕೈ ಬಿಡಿ. ನಿಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ರಾಜ್ಯ ಸರ್ಕಾರ ಸ್ಪಂದಿಸಿರುವ ರೀತಿಯನ್ನು ಗಮನಿಸಿ ನಿಮ್ಮ ನಿರ್ಧಾರ ಬದಲಾಯಿಸಿ. ಬೇರೆ ಯಾರ ಮಾತಿಗೂ ಕಿವಿಗೊಡಬೇಡಿ ಎಂದು ಸುಧಾಕರ್ ಮನವಿ ಮಾಡಿದ್ದಾರೆ.
ಸರ್ಕಾರದ ವಿರುದ್ದ ಮತ್ತೆ ಸಾರಿಗೆ ನೌಕರರ ಆಕ್ರೋಶ
ರಾಜ್ಯ ಸರ್ಕಾರವು ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದೆ. ಇನ್ನೂ ಒಂದು ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ. ಸರ್ಕಾರ ಈ ರೀತಿ ನೌಕರರಿಗೆ ಸ್ಪಂದಿಸಿರುವುದನ್ನು ಗಮನಿಸಿ ಮುಷ್ಕರ ಕೈ ಬಿಡಬೇಕು. ಕಾಲಕಾಲಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ ಎಂದು ಆರೋಗ್ಯ ಸಚಿವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟವಾದಾಗಲೂ ಒಟ್ಟು 1,953.45 ಕೋಟಿ ರು. ನಷ್ಟು ವೇತನವನ್ನು ಪಾವತಿಸಲಾಗಿದೆ. ವೇತನ ಬಾಕಿ ಇಟ್ಟುಕೊಂಡು ನೌಕರರು ಸಂಕಷ್ಟಕ್ಕೆ ಸಿಲುಕಿಸುವಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡಿಲ್ಲ. ಸರ್ಕಾರದ ಈ ಕ್ರಮವನ್ನು ಪರಿಗಣಿಸಿ ಮುಷ್ಕರ ನಿಲ್ಲಿಸಿ ಎಂದು ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ