ರೋಗಿಗಳ ನರಳಾಟ: ಸಚಿವ ಸುಧಾಕರ್ ಕೊಟ್ಟ ವಾರ್ನಿಂಗ್​ಗೆ ಆಸ್ಪತ್ರೆ ಮುಖ್ಯಸ್ಥರು ಥಂಡಾ

By Suvarna News  |  First Published Jun 23, 2020, 8:44 PM IST

ಕೋವಿಡ್​ ಆಸ್ಪತ್ರೆಗಳಲ್ಲಿ ಹಲವು ರೋಗಿಗಳಿಗೆ ಕನಿಷ್ಠ ಮೂಲ ಸೌಲಭ್ಯವೂ ಸಿಗುತ್ತಿಲ್ಲ. ರೋಗದಿಂದ ಬಳಲುತ್ತಿರುವವರಿಗೆ ಹಸಿವಿನ ಶಿಕ್ಷೆಯೂ ಕಾಡುತ್ತಿದೆ ಎನ್ನುವ ಕೊರೋನಾ ಸೋಂಕಿತ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಸಚಿವ ಸುಧಾಕರ್ ಸಂಬಂಧಿಸಿದ ಆಸ್ಪತ್ರೆಗೆ ಖಡಕ್​ ವಾರ್ನಿಂಗ್​ ಕೊಟ್ಟಿದ್ದಾರೆ.


ಬೆಂಗಳೂರು, (ಜೂನ್.23): ಕೋವಿಡ್ ರೋಗಿಗಳಿಗೆ ಸರಿಯಾದ ಚಿಕಿತ್ಸೆ, ಊಟ ಇಲ್ಲ ಎನ್ನುವ ದೂರು ಕೇಳಿಬಂದಿದ್ದೇ ತಡ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಅವರು ಆಸ್ಪತ್ರೆಗಳ ಮುಖ್ಯಸ್ಥರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಸ್ವಯಂ ಕ್ವಾರಂಟೈನ್​ಗೆ ಒಳಗಾಗಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಹಿರಿಯ ಅಧಿಕಾರಿಗಳು ಮತ್ತು ಕೋವಿಡ್ ಆಸ್ಪತ್ರೆ ನಿರ್ದೇಶಕರ ಜತೆ ಇಂದು(ಮಂಗಳವಾರ)ವಿಡಿಯೋ ಸಂವಾದ ನಡೆಸಿದರು. 

Latest Videos

undefined

ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

ಆಸ್ಪತ್ರೆ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ

ವಿಕ್ಟೋರಿಯಾ ಆಸ್ಪತ್ರೆ, ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಮತ್ತು ಬೌರಿಂಗ್ ಆಸ್ಪತ್ರೆ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಚಿವರು, ಕೋವಿಡ್​ ವಾರ್ಡ್​ನಲ್ಲಿಅವ್ಯವಸ್ಥೆ ಬಗ್ಗೆ ಬಹಳಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಸುಧಾಕರ್ ಅವರು, ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದರು. ಒಂದು ಮತ್ತೆ ಲೋಪಗಳ ಬಗ್ಗೆ ದೂರು ಬಂದಲ್ಲಿ ನಿರ್ದೇಶಕರುಗಳನ್ನೇ ಹೊಣೆ ಮಾಡುವುದಾಗಿ ಖಡಕ್ ಎಚ್ಚರಿಕೆ ಕೊಟ್ಟರು.

ಕೆಎಎಸ್ ಅಧಿಕಾರಿ ನೇಮಕದ ಎಚ್ಚರಿಕೆ

ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ದೂರು ಬಂದಲ್ಲಿ ಸಂಸ್ಥೆಗಳ ಆಡಳಿತ ನೋಡಿಕೊಳ್ಳಲು ಹಿರಿಯ ಕೆಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದು ಎಚ್ಚರಿಸಿದರು. ಇನ್ನು ತಜ್ಞರು, ಹಿರಿಯ ವೈದ್ಯರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಹೋಗುತ್ತಿಲ್ಲ ಎಂಬ ದೂರು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್​ಗಳಿಗೆ ಸ್ಥಳಾಂತರಿಸಬೇಕು ಎಂದು ಸೂಚಿಸಿದರು. ಇನ್ನು ನನ್ನ ತಂದೆ, ಪತ್ನಿ ಮತ್ತು ಪುತ್ರಿಗೆ ಕರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಣಮುಖರಾಗಲಿ ಎಂದು ಹಾರೈಸಿರುವ ಎಲ್ಲರಿಗೂ ನಾನು ಚಿರಋಣಿ ಎಂದು ಡಾ. ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ಸ್ಥಳಾಂತರಿಸಬೇಕು, ಹಿರಿಯ ವೈದ್ಯರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡದ ದೂರುಗಳು ಬಂದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ

ನನ್ನ ತಂದೆ, ಪತ್ನಿ ಮತ್ತು ಪುತ್ರಿಗೆ ಗುಣಮುಖರಾಗುವಂತೆ ಹಾರೈಸಿರುವ ಎಲ್ಲರಿಗೂ ನಾನು ಚಿರಋಣಿ, ನಿಮ್ಮ ಹಾರೈಕೆಯೇ ನಮ್ಮ ಶ್ರೀರಕ್ಷೆ. pic.twitter.com/31qBZqj9Us

— Dr Sudhakar K (@mla_sudhakar)
click me!