ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಸುನಿಲ್​ಕುಮಾರ್

By Suvarna News  |  First Published Sep 28, 2021, 5:04 PM IST

* ದತ್ತಪೀಠದ ಪೂಜಾ ಕೈಂಕರ್ಯ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು
* ಪೂಜಾ ವಿಧಿವಿಧಾನಗಳ ಬಗ್ಗೆ ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಕೋರ್ಟ್ ಸೂಚನೆ
* ಹೈಕೋರ್ಟ್ ಆದೇಶ ಸ್ವಾಗತಿಸಿದ ಸಚಿವ ಸುನೀಲ್ ಕುಮಾರ್


ಬೆಂಗಳೂರು, (ಸೆ.28): ಚಿಕ್ಕಮಗಳೂರಿನ ದತ್ತಪೀಠದ ಪೂಜಾ ಕೈಂಕರ್ಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಜಾವರ್ ನೇಮಕ ಆದೇಶವನ್ನು ರದ್ದುಗೊಳಿಸಿದೆ. 

ಬಾಬಾಬುಡನ್​ಗಿರಿಯ (Baba Budangiri) ಇನಾಂ ದತ್ತಾತ್ರೇಯಪೀಠದ ಪೂಜಾ ವಿಧಿವಿಧಾನಗಳ ಬಗ್ಗೆ ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (High Court) ನೀಡಿದ್ದು, ಇದನ್ನು ನಿರ್ದೇಶನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದ್ದಾರೆ.

Tap to resize

Latest Videos

‘ರಕ್ತಚೆಲ್ಲಿಯಾದ್ರೂ ದತ್ತಪೀಠವನ್ನ ಹಿಂದೂ ಪೀಠವಾಗಿಸ್ತೇವೆ’

ಈ ಬಗ್ಗೆ  ಪ್ರತಿಕ್ರಿಯಿಸಿರುವ ಸುನಿಲ್ ಕುಮಾರ್ (Sunil Kumar), ಹಿಂದೂಗಳ ಶ್ರದ್ಧಾಕೇಂದ್ರವಾದ ಚಿಕ್ಕಮಗಳೂರಿನ ಐತಿಹಾಸಿಕ ದತ್ತಾತ್ರೇಯ ಪೀಠ ಕುರಿತಂತೆ ಇವತ್ತು ಘನ ನ್ಯಾಯಾಲಯ ವಿಶೇಷ ತೀರ್ಪು ಕೊಟ್ಟಿದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಹಿಂದೂ ಅರ್ಚಕರ ನೇಮಕ ಮಾಡುವ ಕುರಿತಂತೆ ರಾಜ್ಯ ಸರ್ಕಾರ ಒಂದು ಸಮಿತಿ ರಚಿಸಿ, ಅದರ ಅಭಿಪ್ರಾಯ ತೆಗೆದುಕೊಂಡು ಹಿಂದೂ ಅರ್ಚಕರ ನೇಮಕ ಮಾಡಬೇಕು ಎಂದು ಹೇಳಿದೆ ಅಭಿಪ್ರಾಯಪಟ್ಟರು.

ಈ ಹಿಂದೆ ಸುಪ್ರೀಂಕೋರ್ಟ್ ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ ಅವತ್ತಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ, ಹಿಂದೂ ಅರ್ಚಕರ ನೇಮಕಕ್ಕೆ ಬದಲು ಮುಜಾವರ್​ಗಳಿಂದ ಪೂಜೆ ಮುಂದುವರಿಸುವ ಮೂಲಕ ಹಿಂದೂ ವಿರೋಧಿ ನೀತಿ ಅನುಸರಿಸಿತ್ತು. ಭಕ್ತರ ಭಾವನೆಗಳಿಗೆ ಯಾವುದೇ ಬೆಲೆ ಕೊಡದೆ, ಜನಾಭಿಪ್ರಾಯ ಪಡೆಯದೆ ಇಂಥ ನಿರ್ಣಯ ಮಾಡಿತ್ತು ಎಂದರು.

ದತ್ತಪೀಠ ವಿವಾದ ಕೋರ್ಟ್ ಹೊರಗೇ ಬಗೆಹರಿಸಿಕೊಳ್ಳಿ

 ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದೆವು. ನ್ಯಾಯಾಲಯವು ಇಂದು ಹಿಂದೂಗಳ ಪರವಾಗಿ ತೀರ್ಪು ಕೊಟ್ಟಿದೆ. ಈ ರೀತಿಯ ತೀರ್ಪು ಬಂದಿರುವುದು ದಶಕಗಳ ಕಾಲ ಹೋರಾಟ ಮಾಡಿದ ಎಲ್ಲ ಹೋರಾಟಗಾರರಿಗೆ ಸಿಕ್ಕ ಜಯ. ಆದಷ್ಟು ಬೇಗ ಮುಜರಾಯಿ ಇಲಾಖೆ, ಹಿಂದೂ ಅರ್ಚಕರ ನೇಮಕ ಮಾಡುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

click me!