* ಆಂಧ್ರ, ತಮಿಳ್ನಾಡಲ್ಲಿ ಯೋಜನೆ ಫೇಲ್
* ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ
* ಬಡ ಕುಟುಂಬಗಳಿಗೆ ಏ.1ರಿಂದ ಪೊರ್ಟಿಫೈಡ್ ರೈಸ್ ವಿತರಣೆ ಮಾಡಲಾಗುವುದು
ಬೆಳಗಾವಿ(ಮಾ.06): ಮನೆ ಮನೆಗೆ ಪಡಿತರ ಒದಗಿಸುವ ತನ್ನ ಮಹತ್ವಾಕಾಂಕ್ಷಿ ಯೋಜನೆಯಿಂದ ರಾಜ್ಯ ಸರ್ಕಾರ(Government of Karnataka) ಹಿಂದೆ ಸರಿದಿದೆ. ಈ ಯೋಜನೆ ಕೈಬಿಡಲಾಗಿದೆ ಎಂದು ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ ಕತ್ತಿ(Umesh Katti) ತಿಳಿಸಿದ್ದಾರೆ.
ಹುಕ್ಕೇರಿಯಲ್ಲಿ(Hukkeri) ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶ(Andhra Pradesh) ಹಾಗೂ ತಮಿಳುನಾಡಿನಲ್ಲಿ(Tamil Nadu) ಮನೆಮನೆಗೆ ಪಡಿತರ ತಲುಪಿಸುವ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ(Karnataka) ಈ ಯೋಜನೆ ಕೈಬಿಡಲಾಗಿದೆ ಎಂದು ಹೇಳಿದರು.
Grama One Project: ಗ್ರಾಮ ಒನ್‌ನಲ್ಲೇ ಪಡಿತರ ಕಾರ್ಡ್ ವಿತರಣೆ: ಸಿಎಂ ಬೊಮ್ಮಾಯಿ
ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್(Ratiio) ವಿತರಿಸಲಾಗುತ್ತದೆ. ಬಡ ಕುಟುಂಬಗಳಿಗೆ ಏ.1ರಿಂದ ಪೊರ್ಟಿಫೈಡ್ ರೈಸ್ ವಿತರಣೆ ಮಾಡಲಾಗುವುದು ಎಂದೂ ಕತ್ತಿ ತಿಳಿಸಿದರು. ರಾಜ್ಯದಲ್ಲಿ ಶೀಘ್ರ ಪಡಿತರ ಸೇರಿದಂತೆ ಅನೇಕ ಸವಲತ್ತುಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೇ ತಲುಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಇತ್ತೀಚೆಗೆ ಘೋಷಿಸಿದ್ದರು. ಆದರೆ ಈ ಯೋಜನೆ ಕೈಬಿಡಲಾಗಿದೆ ಎಂದು ಸಚಿವ ಉಮೇಶ್ ಈಗ ಕತ್ತಿ ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್‌ದಾರರಿಗೆ ಸಂತಸದ ಸುದ್ದಿ ನೀಡಿದ ಸರ್ಕಾರ..!
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ಪ್ರಸ್ತುತ ವಿತರಿಸುತ್ತಿರುವ ಐದು ಕೆ.ಜಿ. ಧಾನ್ಯದ ಜತೆಗೆ ಏಪ್ರಿಲ್ ತಿಂಗಳಿನಿಂದ ಒಂದು ಕೆ.ಜಿ. ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಲಾಗುವುದು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್(Thawar Chand Gehlot) ಘೋಷಣೆ ಮಾಡಿದ್ದರು.
ಫೆ.14 ರಂದು ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು ರಾಜ್ಯ ಸರ್ಕಾರ(Government of Karnataka) ಕೋವಿಡ್ ನಿರ್ವಹಣೆಗಾಗಿ ನಡೆಸಿದ ಹೋರಾಟ ಮತ್ತು ಜಾರಿಗೆ ತಂದಿರುವ ಕಾರ್ಯಕ್ರಮಗಳು ಮತ್ತು ಮುಂದುವರೆದ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾಪಿಸಿದ್ದರು.
ಬಿಪಿಎಲ್ ಚೀಟಿಯನ್ನು ಹೊಂದಿದ ಪ್ರತಿ ಕುಟುಂಬಕ್ಕೆ ಐದು ಕೆ.ಜಿ. ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದೆ. ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ಒಂದು ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲು ಆದೇಶಿಸಿದ್ದು, ಏಪ್ರಿಲ್ ತಿಂಗಳಿನಿಂದ ಜಾರಿಗೆ ಬರಲಿದೆ. ಸುಸ್ಥಿರ ಕೃಷಿ ಕಾರ್ಯಕ್ರಮವನ್ನು ಜಾರಿಗೊಳಿಸಲು ಪ್ರಾಥಮಿಕ ಕೃಷಿ ಉತ್ಪನ್ನಗಳ ಗರಿಷ್ಠ ಬಳಕೆಯ ಮೂಲಕ ರೈತರ(Farmers) ಆದಾಯವನ್ನು ಹೆಚ್ಚಿಸಲು ಮತ್ತು ಮಾನ ಸಂಪನ್ಮೂಲ ಮತ್ತು ಮೌಲ್ಯಾಧಾರಿತ ಕೌಶಲ್ಯವನ್ನು ಹೆಚ್ಚಿಸುವ ಸಲುವಾಗಿ ದ್ವಿತೀಯ ಕೃಷಿ ನಿರ್ದೇಶನಾಲಯವನ್ನು ಸೃಷ್ಟಿಸಿದೆ ಎಂದು ಹೇಳಿದ್ದರು.
Brown Rice: ದ.ಕ, ಉಡುಪಿ ಪಡಿತರದಾರರಿಗೆ ಸಂತಸದ ಸುದ್ದಿ ನೀಡಿದ ಕೇಂದ್ರ ಸರ್ಕಾರ
ಪ್ರಸ್ತುತ ಸಚಿವಾಲಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನದಲ್ಲಿದ್ದ ಹೈದರಾಬಾದ್-ಕರ್ನಾಟಕ ವಿಶೇಷ ಕೋಶವನ್ನು ಕಲ್ಯಾಣ ಕರ್ನಾಟಕ(Kalyana Karnataka) ಪ್ರದೇಶಾಭಿವೃದ್ಧಿ ಮಂಡಳಿಯ ಅಧೀನಕ್ಕೊಳಪಡಿಸಿ ಕಲಬುರಗಿಗೆ(Kalaburagi) ಸ್ಥಳಾಂತರಿಸಿ ಆದೇಶ ಹೊರಡಿಸಲಾಗಿದೆ. ಗ್ರಾಮ ಒನ್(Grama One) ಯೋಜನೆಯಡಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಾಸಿಂಧು ಯೋಜನೆಯ ಮೂಲಕ ನೀಡಲಾಗುವ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅದೇ ರೀತಿ ಮಾಹಿತಿ ಹಕ್ಕು ಅಧಿನಿಯಮದ ಅರ್ಜಿಗಳು, ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋರಿ ಅರ್ಜಿಗಳನ್ನು ಮತ್ತು ಸಕಾಲ ಸೇವೆಗಳನ್ನು ಕೋರಿ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದು. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದರು.
ರಾಷ್ಟ್ರದಲ್ಲಿಯೇ ಕರ್ನಾಟಕ(Karnataka) ಪ್ರಪ್ರಥಮವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ವಿದೇಶದಲ್ಲಿನ ದೇಶಿ ಸಂಜಾತರ ಜ್ಞಾನವನ್ನು ಸ್ವದೇಶದಲ್ಲಿ ಬಳಸಿಕೊಳ್ಳಲು ಮರಳಿ ತಾಯ್ನಾಡಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಕ್ತ ನೀತಿ ರಚನೆ ಮತ್ತು ಅನುದಾನ ಬಿಡುಗಡೆ ಮಾಡುವ ಆಶ್ವಾಸನೆಯನ್ನು ನೀಡಿದ್ದರು.