
ಬೆಂಗಳೂರು(ಆ.07): ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತೀವ್ರ ನೆರೆ ಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ(ಶುಕ್ರವಾರ) ತಮ್ಮ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡುವುದಾಗಿ ಕೊಡಗು ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಸಿ.ಟಿ. ರವಿ ಹೇಳಿದ್ದಾರೆ.
"
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ. ಸೋಮಣ್ಣ, ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ನೆರೆ ಹಾನಿ ಬಗ್ಗೆ ಮಾಹಿತಿ ಪಡೆದಿದ್ದೇನೆ. ಬ್ರಹ್ಮಗಿರಿ ಬೆಟ್ಟ ಕುಸಿದಿದೆ. ಅರ್ಚಕರು ಗುಡ್ಡ ಕುಸಿತಕ್ಕೆ ಸಿಲುಕಿದ್ದು, ಐದು ಮಂದಿ ನಾಪತ್ತೆಯಾಗಿದ್ದಾರೆ. ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಸುನಿಲ್ ಸ್ಥಳಕ್ಕೆ ಹೋಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಇಂದಿನಿಂದ ಕೊಡಗು ಜಿಲ್ಲೆಯಲ್ಲೇ ಇರುತ್ತೇನೆ ಎಂದು ಹೇಳಿದರು.
ವರುಣನ ಆರ್ಭಟ: ಕೊಡಗು ಜಿಲ್ಲೆಯಲ್ಲಿ ಸತತ ಮೂರನೇ ವರ್ಷ ಪ್ರಕೃತಿ ದುರಂತ..!
ಚಿಕ್ಕಮಗಳೂರಿಗೆ ತೆರಳುತ್ತೇನೆ: ರವಿ
ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಸಚಿವ ಸಿ.ಟಿ. ರವಿ, ಶೃಂಗೇರಿ, ಮೂಡಿಗೆರೆ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಬಾಳೂರು, ದೇವರಮನೆ ಭಾಗದಲ್ಲಿ 300 ಮಿ.ಮೀ. ಮಳೆಯಾಗಿ 12 ಮನೆಗಳು ಜಖಂ ಆಗಿವೆ. ಕಳೆದ ವರ್ಷ ಭೂ ಕುಸಿತ ಉಂಟಾಗಿದೆ. ಇದೀಗ ಅದೇ ಜಾಗದಲ್ಲಿ ಮತ್ತೆ ಭೂ ಕುಸಿತವಾಗಿದೆ. ಎರಡು ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿವೆ. ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಶುಕ್ರವಾರದಿಂದ ಚಿಕ್ಕಮಗಳೂರು ಜಿಲ್ಲೆಯಲ್ಲೇ ಇರುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮಹಾಮಳೆ: ಸಿಎಂ ಖಡಕ್ ಆದೇಶ
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ