ಮೈಸೂರು ದಸರಾ ಮೀರಿಸುವಂತೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಮಾಡ್ತೀವಿ: ಸಚಿವ ಸುನೀಲ್‌ ಕುಮಾರ್‌

By Govindaraj S  |  First Published Oct 29, 2022, 7:49 PM IST

ಈ ಬಾರಿ ಹಾವೇರಿಯಲ್ಲಿ ಅದ್ದೂರಿ ಕನ್ನಡ ಸಾಹಿತ್ಯ ಸಮ್ಮೇಳನ ಆಚರಿಸಲಾಗುತ್ತದೆ. ಮೈಸೂರು ದಸರಾ ಮೀರಿಸುವಂತೆ ಕನ್ನಡ ಸಾಹಿತ್ಯ ಸಮ್ಮೇಳನ ಆಚರಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು.


ವರದಿ: ಪವನ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾವೇರಿ

ಹಾವೇರಿ (ಅ.29): ಈ ಬಾರಿ ಹಾವೇರಿಯಲ್ಲಿ ಅದ್ದೂರಿ ಕನ್ನಡ ಸಾಹಿತ್ಯ ಸಮ್ಮೇಳನ ಆಚರಿಸಲಾಗುತ್ತದೆ. ಮೈಸೂರು ದಸರಾ ಮೀರಿಸುವಂತೆ ಕನ್ನಡ ಸಾಹಿತ್ಯ ಸಮ್ಮೇಳನ ಆಚರಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಬಗ್ಗೆ ಹಾವೇರಿಯ ನಗರದ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಪೂರ್ವ ಸಿದ್ದತಾ ಸಭೆ ನಡೆಸಲಾಯಿತು. ಸಭೆ ಬಳಿಕ ಮಾತನಾಡಿದ ಸಚಿವರು, ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕುರಿತು ಚರ್ಚಿಸಿದ್ದೇವೆ, ಈ ಬಗ್ಗೆ ಕಸಾಪ ರಾಜ್ಯಾಧ್ಯಕ್ಷ ಜೊತೆಗೆ ಚರ್ಚೆಯನ್ನು ನಡೆಸಿದ್ದೇವೆ. 

Latest Videos

undefined

ಜಿಲ್ಲಾಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಜೊತೆ ಚರ್ಚೆ ನಡೆಸಲಾಗಿದೆ. ಕೊರೊನಾದಿಂದ 2 ವರ್ಷ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ.ಹಾವೇರಿಯಲ್ಲಿ 3 ದಿನ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಸಮ್ಮೇಳನದಲ್ಲಿ 5 ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳಲಾಗುವುದು ಎಂದು ಹೇಳಿದರು. ಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ‌ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 20 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. 

Haveri: 12 ಕೋಟಿ ವೆಚ್ಚದಲ್ಲಿ ಗಾರ್ಮೆಂಟ್ಸ್‌ ಘಟಕಕ್ಕೆ ಚಾಲನೆ: ಸಚಿವ ಬಿ.ಸಿ.ಪಾಟೀಲ್‌

ಈ ಕಾರ್ಯಕ್ರಮಕ್ಕೆ ಮತ್ತು ಇದರ ಪೂರ್ವ ತಯಾರಿಯ ಬಗ್ಗೆ ಚರ್ಚಿಸುವಂತೆ, ಇದಕ್ಕೆ ಬೇಕಾದ ಕಾಮಗಾರಿ ತಕ್ಷಣವೇ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ಮೂರು ದಿನಗಳ ಕಾಲ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ಒಂದು ಪ್ರಧಾನ ವೇದಿಕೆ, ಎರಡು ಉಪವೇದಿಕೆಗಳು ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಹೇಳಲಾಗಿದೆ. ಜನವರಿ 6ರಂದು ಅದ್ದೂರಿ ಮೆರವಣಿಗೆ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ರು.ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವಸತಿ ವ್ಯವಸ್ಥೆ ಮಾಡಲು ನಿರ್ಧಾರ ಮಾಡಲಾಗಿದೆ. ಐದು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಬಳಸಿಕೊಂಡು ಅಚ್ಚುಕಟ್ಟಾಗಿ ಸಮ್ಮೇಳನ ನಡೆಸಲು ಈಗಾಗಲೇ ನಿರ್ಧಾರಿಸಲಾಗಿದೆ. 

ಇದಕ್ಕೆ ಪೂರ್ವಭಾವಿಯಾಗಿ ಶಿರ್ಸಿ ಸಿದ್ದಾಪುರದಿಂದ ಕನ್ನಡ ರಥ ಹೊರಡಿಸಲು ಸೂಚನೆ ನೀಡಲಾಗಿದೆ. ಸಮ್ಮೇಳನಕ್ಕೆ ಬರುವ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮತ್ತು ಪೊಲೀಸ್ ಇಲಾಖೆ ಸೂಚನೆ ನೀಡಲಾಗಿದೆ. ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಒಂದು ದಿನದ ವೇತನ ಕೊಡಲು ನಿರ್ಧರಿಸಿದ್ದಾರೆ, ಇದಕ್ಕೆ ನಮ್ಮ ಸರ್ಕಾರ ಈಗಾಗಲೇ ಬಜೆಟ್​​ನಲ್ಲಿ 20 ಕೋಟಿ ಮೀಸಲಿಡಲಾಗಿತ್ತು ಅದರಂತೆ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದರು.

ಬಿಜೆಪಿಯಿಂದ ವಿಜಯ ಸಂಕಲ್ಪ ರಾಜ್ಯ ಯಾತ್ರೆ: ಸಚಿವ ಸುನೀಲ್‌ ಕುಮಾರ್‌

ಈ ಬಾರಿಯ ಸಾಹಿತ್ಯ ಸಮ್ಮೇಳವನ್ನು ಭಿನ್ನವಾಗಿ ನಡೆಸಲು ನಿರ್ಧಾರ: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿ, ಜನವರಿ 6, 7 ಮತ್ತು 8ರಂದು ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಸಲು ನಿರ್ಧಾರ ಮಾಡಲಾಗಿದೆ. ಸಚಿವರು, ಅಧಿಕಾರಿಗಳು, ಮಾಜಿ ಶಾಸಕರು ಹಾಗೂ ಸಂಘ ಸಂಸ್ಥೆಗಳ ಜೊತೆ ಸಭೆ ನಡೆಸಲಾಗಿದೆ. 21 ಸಮಿತಿಗಳನ್ನು ರಚನೆ ಮಾಡಿದ್ದೇವೆ. 25 ಸಾವಿರ ಜನಕ್ಕೆ ವಸತಿ ವ್ಯವಸ್ಥೆ ಮಾಡಲು ಚರ್ಚೆ ನಡೆಸಲಾಗಿದೆ. ಸಾರಿಗೆ, ಆರೋಗ್ಯ, ವಸತಿ, ಪೊಲೀಸ್ ಬಂದೋಬಸ್ತ್ ಹೀಗೆ ಎಲ್ಲದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು. ಪ್ರತಿದಿನ ಮೂರು ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾದಂತೆ ಅದ್ಧೂರಿಯಾಗಿ ಕನ್ನಡ ಸಮ್ಮೇಳನವನ್ನು ಮಾಡಲಾಗುವುದು ಈ ಸಮಯದಲ್ಲಿ ದೀಪಾಲಂಕಾರ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

click me!