ಮೈಸೂರಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಮಗು ಸಾವನ್ನಪ್ಪಿದೆ. ನಂಜನಗೂಡಿನಿಂದ ಮೈಸೂರಿಗೆ ಕರೆದೊಯ್ಯುವಾಗ ಆಂಬುಲೆನ್ಸ್‌ನಲ್ಲಿ ಆಕ್ಸಿಜನ್ ಇಲ್ಲದ ಕಾರಣ ದುರಂತ ಸಂಭವಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಮೈಸೂರು (ಮಾ.20): ರಾಜ್ಯದಲ್ಲಿ ನಾವು ಆಯ್ಕೆ ಮಾಡಿದ ಜನಪ್ರತಿನಿಧಿಗಳು ವಿಧಾನಸಭೆ ಅಧಿವೇಶನದಲ್ಲಿ ಮೂಲಸೌಕರ್ಯಗಳ ಬಗ್ಗೆ ಚರ್ಚೆ ಮಾಡದೇ ತಮ್ಮ ಮೇಲೆ ಆಗಿರುವ ಹನಿಟ್ರ್ಯಾಪ್‌ಗಳ ಬಗ್ಗೆ ಚರ್ಚೆ ಮಾಡುತ್ತಾರೆ. ಆದರೆ, ಸ್ವತಃ ಸಿಎಂ ತವರು ಜಿಲ್ಲೆ ಮೈಸೂರಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಈ ಬಗ್ಗೆ ಚರ್ಚೆಯನ್ನೂ ಮಾಡುವುದಿಲ್ಲ.
ಮೈಸೂರಿನಲ್ಲಿ ಆಕ್ಸಿಜನ್ ಸೌಲಭ್ಯ ಇಲ್ಲದ ಸರ್ಕಾರಿ ಆಂಬುಲೆನ್ಸ್ ನಲ್ಲಿ ಮಗು ಸಾವಿಗೀಡಾಗಿದೆ. ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ತೆರಳುತ್ತಿದ್ದರು. ಆದರೆ, ಆಂಬುಲೆನ್ಸ್‌ನಲ್ಲಿ ಆಂಬುಲೆನ್ಸ್ ಸೌಲಭ್ಯವಿಲ್ಲದ ಕಾರಣ ಮಗು ಸಾವಿಗೀಡಾಗಿದ್ದು, ತಾಯಿಯ ಆಕ್ರಂದನ ಮಗಿಲು ಮುಟ್ಟಿದೆ. ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿರುವ ಪ್ರಕರಣ ಇದಾಗಿದೆ.
ನಂಜನಗೂಡು ನಗರದ ಶ್ರೀರಾಂಪುರ ಬಡಾವಣೆಯ ರತ್ನಮ್ಮ ಮತ್ತು ಕುಮಾರ್ ಎಂಬ ದಂಪತಿಯ ಮಗು. ಕಳೆದ 17ನೆಯ ತಾರೀಖಿನಂದು ರತ್ನಮ್ಮ ಎಂಬ ಮಹಿಳೆ ಹೆರಿಗೆಗೆಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ರತ್ನಮಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ಮಗು ಆರೋಗ್ಯಕರವಾಗಿದ್ದು, ಕ್ಷಣಾರ್ಧದಲ್ಲಿಯೇ ನೀಲಿ ಬಣ್ಣಕ್ಕೆ ತಿರುಗಿದೆ. ಹುಟ್ಟಿದ ಮಗು ನೀಲಿ ಬಣ್ಣಕ್ಕೆ ತಿರುಗಿದ ಪರಿಣಾಮ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ದಾದಿಯರು ಗಾಬರಿಯಾಗಿದ್ದಾರೆ. ನಂತರ ಮಗು ಸ್ಥಿತಿ ನೋಡಿ ಪೋಷಕರು ಕೂಡ ಆತಂಕಕ್ಕೆ ಒಳಗಾಗಿದ್ದರು.
ಇದನ್ನೂ ಓದಿ: ಹನಿಟ್ರ್ಯಾಪ್ ಒಪ್ಪಿಕೊಂಡ ಕೆ.ಎನ್. ರಾಜಣ್ಣ : 48 ರಾಜಕಾರಣಿಗಳ ಪೆನ್‌ಡ್ರೈವ್ ಬಹಿರಂಗ? ತನಿಖೆಗೆ ಆದೇಶ
ಮಗುವಿನ ಸ್ಥಿತಿಗತಿ ನೋಡಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಆಸ್ಪತ್ರೆಯ ಸಿಬ್ಬಂದಿ ಮುಂದಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆ ತಿಳಿದಿದ್ದರೂ, ಮಗುವಿನ ಜೀವವನ್ನು ಲೆಕ್ಕಿಸದೇ ಅದೇ ಆಂಬುಲೆನ್ಸ್‌ನಲ್ಲಿ ಮೈಸೂರಿಗೆ ರವಾನಿಸಲು ಮುಂದಾಗಿದ್ದಾರೆ. ಆದರೆ, ಮೈಸೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯದಲ್ಲಿ ಮಗು ಸಾವನ್ನಪ್ಪಿದೆ. ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಮಗುವಿನ ಸಾವಿಗೆ ಕಾರಣವೆಂದು ಪೋಷಕರು ಆರೋಪ ಮಾಡಿದ್ದಾರೆ.