
ಬೆಂಗಳೂರು (ಏ.19):‘ಜಾತಿಗಣತಿ ವರದಿ ಬಗ್ಗೆ ಯಾವುದೇ ಸಚಿವರಿಂದ ವಿರೋಧ ವ್ಯಕ್ತವಾಗಿಲ್ಲ, ಯಾರ ನಡುವೆಯೂ ಮಾತಿನ ಚಕಮಕಿಯೂ ನಡೆದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ಜಾತಿಗಣತಿ ವರದಿ ಬಗ್ಗೆ ಪ್ರಬಲ ಸಮುದಾಯದ ಸಚಿವರಿಂದ ವಿರೋಧ ವ್ಯಕ್ತವಾಗಿದೆ, ಕೆಲ ಸಚಿವರ ನಡುವೆ ಚಕಮಕಿ ನಡೆದಿದೆಯಂತಲ್ವಾ ಎಂಬ ಸುದ್ದಿಗಾರರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು ಮಾಧ್ಯಮಗಳಲ್ಲಿ, ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ಯಾವುದೇ ಸಚಿವರಿಂದ ವಿರೋಧವೂ ವ್ಯಕ್ತವಾಗಿಲ್ಲ, ಯಾವ ಸಚಿವರ ನಡುವೆ ಏರುಧ್ವನಿಯ ಮಾತುಗಳೂ ನಡೆದಿಲ್ಲ. ಅದೆಲ್ಲವೂ ಸುಳ್ಳು ಎಂದರು.
ಇದನ್ನೂ ಓದಿ: ಸಿದ್ದರಾಮಯ್ಯಗೆ ಗ್ಯಾರಂಟಿ ಅಮಲು, ಜನಜೀವನ ಆಯೋಮಯ: ವಿಜಯೇಂದ್ರ ವಾಗ್ದಾಳಿ
ಗುರುವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ವಿಚಾರ ವಿನಿಮಯವಷ್ಟೇ ಮಾಡಿದ್ದೇವೆ. ಸಭೆ ಅಪೂರ್ಣ ಆಗಿದೆ. ಯಾವುದೇ ತೀರ್ಮಾನ ಆಗಿಲ್ಲ. ಮೇ 2ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಈ ವಿಚಾರ ಚರ್ಚಿಸಿ, ಎಲ್ಲರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಉಭಯ ನಾಯಕರು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ