
ಬೆಂಗಳೂರು, (ಜೂನ್.17): ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇದೇ 20ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕೊಮ್ಮಘಟ್ಟದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆ ಮತ್ತು ಬೆಂಗಳೂರು ವಿವಿ ಆವರಣದಲ್ಲಿ ಅವರು ಉದ್ಘಾಟಿಸಲಿರುವ 'ಬೇಸ್' ವಿವಿ ಕ್ಯಾಂಪಸ್ ಆವರಣದಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮತ್ತು ವಸತಿ ಸಚಿವ ಸೋಮಣ್ಣ ಶುಕ್ರವಾರ ಪರಿಶೀಲಿಸಿದರು.
ಮೊದಲು ಜ್ಞಾನಭಾರತಿ ಆವರಣದ ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿವಿ ಕ್ಯಾಂಪಸ್ಸಿಗೆ ತೆರಳಿದ ಸಚಿವರು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕುಲಪತಿ ಡಾ.ಭಾನುಮೂರ್ತಿ, ಕುಲಸಚಿವೆ ಶೋಭಾ ಮತ್ತಿತರ ರೊಂದಿಗೆ ಸಭೆ ನಡೆಸಿ, ಸೂಚನೆಗಳನ್ನು ನೀಡಿದರು.
ಮೋದಿ ಕರ್ನಾಟಕ ಪ್ರವಾಸ, ಪ್ರಧಾನಿ ಕಾರ್ಯಾಲಯದಿಂದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಸೋಮವಾರ ಮಧ್ಯಾಹ್ನ ಪ್ರಧಾನಿಗಳಿಂದ ಉದ್ಘಾಟನೆ ಕಾಣಲಿರುವ ಕ್ಯಾಂಪಸ್ಸನ್ನು ಸಚಿವರು ವೀಕ್ಷಿಸಿದರು. ಜತೆಗೆ, ಪ್ರಧಾನಿಯವರು ವಿವಿ ಸಿಬ್ಬಂದಿ ಜತೆ ಮಾತನಾಡಲಿರುವ ಕೊಠಡಿಯನ್ನು ಪರಿಶೀಲಿಸಿದರು.
ನಂತರ, ಕೊಮ್ಮಘಟ್ಟಕ್ಕೆ ತೆರಳಿದ ಸಚಿವರಿಬ್ಬರೂ, ಅಲ್ಲಿ ಉಪನಗರ ರೈಲು ಯೋಜನೆ ಉದ್ಘಾಟನೆ ನಿಮಿತ್ತ ನಡೆಯಲಿರುವ ಸಾರ್ವಜನಿಕ ಸಮಾರಂಭದ ಸ್ಥಳವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಲವು ಅಧಿಕಾರಿಗಳು ಇದ್ದು, ಅಗತ್ಯ ಮಾಹಿತಿ ನೀಡಿದರು.
ಮೋದಿ ಕಾರ್ಯಕ್ರಮಗಳು
ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಎರಡು ದಿನಗಳ ಕಾಲ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾವಹಿಸಲಿದ್ದಾರೆ ಎನ್ನುವ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿದೆ.ಅದು ಈ ಕೆಳಗಿನಂತಿದೆ ನೋಡಿ
ಮೋದಿ ಕಾರ್ಯಕ್ರಮಗಳ ವಿವರ
ಜೂನ್ 21( ಮೊದಲ ದಿನ)
* ಜೂನ್ 20 ರಂದು ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮನ.
* ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟ ಹೆಲಿಪ್ಯಾಡ್ ಗೆ ಆಗಮನ
* ಮಧ್ಯಾಹ್ನ 12.30ರಿಂದ 1.45 ರವರೆಗೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಹಾಗೂ ರೈಲ್ವೇ ರೋಡ್ ಯೋಜನೆ ಮತ್ತು ಬಹು ಮಾದರಿ ಲಾಜಿಸ್ಟಿಕ್ ಪಾರ್ಕ್ ಗೆ ಶಂಕುಸ್ಥಾಪನೆ
* ಮಧ್ಯಾಹ್ನ 2.30 ರಿಂದ 3.30 ರವರೆಗೆ ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ, ಅಂಬೇಡ್ಕರ್ ಪ್ರತಿಮೆ ಅನಾವರಣ, 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐ ಗಳ ಲೋಕಾರ್ಪಣೆ
* ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್ ಮೂಲಕ ಪ್ರಯಾಣ
* ಸಂಜೆ 4.50ಕ್ಕೆ ಮೈಸೂರಿಗೆ ಆಗಮನ.
* ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ.
* ಸಂಜೆ 6.30ಕ್ಕೆ ಸುತ್ತೂರು ಮಠಕ್ಕೆ ಭೇಟಿ, ವೇದ ಪಾಠಶಾಲಾ ಕಟ್ಟಡ ಲೋಕಾರ್ಪಣೆ
* ರಾತ್ರಿ 7.30 ಚಾಮುಂಡಿ ಬೆಟ್ಟಕ್ಕೆ ಭೇಟಿ
* ರಾತ್ರಿ 8.10ಕ್ಕೆ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ
ಜೂನ್ 21ರ ವಿವರ(ಎರಡನೇ ದಿನ)
* ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ
* ಬೆಳಗ್ಗೆ 8 ಗಂಟೆಗೆ ಅರಮನೆ ಮುಂಭಾಗದಲ್ಲಿ ವಸ್ತು ಪ್ರದರ್ಶನ ವೀಕ್ಷಣೆ
* ಬೆಳಗ್ಗೆ 8.30ಕ್ಕೆ ಮೈಸೂರು ಅರಮನೆಗೆ ಭೇಟಿ
* ಬೆಳಗ್ಗೆ 9.25 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ತಿರುವನಂತಪುರಕ್ಕೆ ಪ್ರಯಾಣ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ