ಚಾಮರಾಜನಗರ ಆಸ್ಪತ್ರೆ ದುರಂತ: ಆಕ್ಸಿಜನ್‌ನಿಂದ ಸತ್ತಿಲ್ಲ ಎಂದು ಸರ್ಟಿಫಿಕೇಟ್ ಕೊಟ್ಟ ಸಚಿವರು

By Suvarna NewsFirst Published May 3, 2021, 4:00 PM IST
Highlights

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದುರಂತವೊಂದು ನಡೆದಿದ್ದು, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವ ಸುದ್ದಿಗೋಷ್ಠಿ ನಡೆಸಿದರು.

ಚಾಮರಾಜನಗರ(ಮೇ.03): ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಜನರು ಸಾವನ್ನಪ್ಪಿದ್ದಾರೆ.

"

ಈ ಬಗ್ಗೆ ಸ್ವತಃ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್‌ ರವಿ ಅವರೇ ಹೇಳಿಕೆ ಕೊಟ್ಟಿದ್ದು, ಮೈಸೂರಿನಿಂದ ಬರಬೇಕಿದ್ದ ಆಮ್ಲಜನಕ ಬಂರದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದಿದ್ದಾರೆ. ಆದ್ರೆ, ಇತ್ತ ಸಚಿವರು ಮಾತ್ರ ಎಲ್ಲರೂ ಆಮ್ಲಜನಕದ ಕೊರೆತೆಯಿಂದ ಸಾವನ್ನಪ್ಪಿಲ್ಲ ಎಂದು ತಮ್ಮಷ್ಟಕ್ಕೆ ತಾವೇ ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ.

ಚಾಮರಾಜನಗರ ಆಸ್ಪತ್ರೆ ದುರಂತ : ಘಟನೆಯ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಹೌದು.. ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಸಾವಿನ ವಿಷಯ ತಿಳಿದು ಚಾಮನಗರ ಜಿಲ್ಲಾಸ್ಪತ್ರೆಗೆ ದೌಡಾಯಿಸಿ ಈ ಬಗ್ಗೆ ಮಾಹಿತಿ ಕಲೆಹಾಕಿದರು.

ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, 24 ಜನರು ಆಮ್ಲಜನಕದಿಂದ ಮೃತಪಟ್ಟಿಲ್ಲ.  ಆಕ್ಸಿಜನ್ ಕೊರತೆಯಿಂದ ಕೇವಲ 3 ಜನರು ಸಾವನ್ನಪ್ಪಿದ್ದಾರೆ. ನ್ನುಳಿದವರು ಕೊರೋನಾ ತೀವ್ರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 123 ಕೊರೋನಾ ಸೋಂಕಿತರು ದಾಖಲಾಗಿದ್ದು, ಅವರಲ್ಲಿ 14 ಜನರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ (ಭಾನುವಾರ) ಬೆಳಿಗ್ಗೆ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ 14 ಸೋಂಕಿತರು ಸಾವನ್ನಪ್ಪಿದ್ದಾರೆ.

 ಇವರು ಕೋವಿಡ್ ಸಹಜಕಾಯಿಲೆ ಉಲ್ಬಣಗೊಂಡು ಮೃತಪಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 3 ಗಂಟೆ ಅವಧಿಯಲ್ಲಿ 3 ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂವರು ಮಾತ್ರ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾಗಿ ತಿಳಿಸಿದರು.

ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಅದಕ್ಕೂ ಮೊದಲೇ ಸಚಿವರುಗಳು ಈ ರೀತಿ ಸರ್ಟಿಫಿಕೇಟ್ ಕೊಟ್ಟುಕೊಂಡಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ದುರಂತದಿಂದ ಸಾರ್ವಜನಕರು ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳ ವಿರುದ್ಧ ಸ್ಥಳೀಯರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

click me!