ಚುನಾವಣೆ ಕೆಲಸದಿಂದ ಶಿಕ್ಷಕರಿಗೆ ಮುಕ್ತಿ ?

By Kannadaprabha NewsFirst Published Nov 13, 2019, 10:06 AM IST
Highlights

ಚುನಾವಣೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‌ಒ) ಯಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸಿ ಸಂಪೂರ್ಣವಾಗಿ ಶೈಕ್ಷಣಿಕ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಶಿಕ್ಷಣ ಸಚಿವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು [ನ.13]: ಶಿಕ್ಷಕರನ್ನು ಚುನಾವಣೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‌ಒ) ಯಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸಿ ಸಂಪೂರ್ಣವಾಗಿ ಶೈಕ್ಷಣಿಕ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ  ಪತ್ರ ಬರೆದಿದ್ದಾರೆ.

ಚುನಾವಣಾ ಕಾರ್ಯದಲ್ಲಿ ಶಿಕ್ಷಕರನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳು, ಚುನಾವಣೆ ಕರ್ತವ್ಯ, ಮತದಾರರ ಚೀಟಿಗೆ ಹೆಸರು ನೋಂದಣಿ ಸೇರಿದಂತೆ ಚುನಾವಣೆಯ ವಿವಿಧ ಹಂತದ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಆದರೆ, ಇತ್ತೀಚೆಗೆ ಶಿಕ್ಷಕರಿಗೆ ಬೋಧಕೇ ತರವಾದ ಕರ್ತವ್ಯಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೋಧನಾ ಕಾರ್ಯಕ್ಕೆ ಅಡಚಣೆಯಾಗುತ್ತಿದೆ. ಬಿಎಲ್‌ಒದಂತಹ ಕೆಲಸಗಳಿಗೆ ಹೆಚ್ಚಿನ ಸಮಯ ವ್ಯಯವಾಗು ತ್ತಿದೆ.

ಸಕಾಲದಲ್ಲಿ ಪಠ್ಯಕ್ರಮಗಳನ್ನು ಪೂರ್ಣ ಗೊಳಿಸಲು ಹರಸಾಹಸ ಮಾಡಬೇಕಾಗಿದೆ.  ವಿದ್ಯಾರ್ಥಿಗಳು ಹಾಗೂ ಶಾಲಾ ಚುಟುವಟಿಕೆ ಗಳ ಮೇಲೆ ಗಮನ ಹರಿಸಲು ಸಾಧ್ಯವಾಗು ತ್ತಿಲ್ಲ ಮನವಿಯಲ್ಲಿ ತಿಳಿಸಿದ್ದಾರೆ.

ಸಂವಿಧಾನ ದಿನ ಸುತ್ತೋಲೆ ನೀಡಿದವರ ವಿರುದ್ಧ ಕ್ರಮ 
 
ಸಂವಿಧಾನ ದಿನಾಚರಣೆಗೆ ಸಂಬಂಧಿಸಿದ ಸುತ್ತೋಲೆಯೊಂ ದರಲ್ಲಿ ಅಂಬೇಡ್ಕರ್ ಅವರೊಬ್ಬರೇ ಸಂವಿಧಾನ ರಚಿಸಿಲ್ಲ, ವಿವಿಧ ಸಮಿತಿಗಳ ವರದಿ ಆಧರಿಸಿ ಅಂಬೇಡ್ಕರ್ ಕರಡು ತಯಾರಿಸಿದ್ದರು ಎಂದು ಉಲ್ಲೇಖ ಮಾಡಿದ  ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸಂಸ್ಥೆ ಯೊಂದು ಸಿದ್ಧಪಡಿಸಿ ನೀಡಿದ ತಪ್ಪು ಮಾಹಿತಿಯನ್ನು ಬಳಸಿಕೊಂಡು ಸದರಿ ಸುತ್ತೋಲೆ ಹೊರಡಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಹಾಗೂ ತಪ್ಪು ಮಾಹಿತಿ ನೀಡಿದ ಸಂಸ್ಥೆಯ ವಿರುದ್ಧ ಕ್ರಮ ಜರುಗಿಸಲಾಗುವುದು. ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದರು

click me!